September 8, 2024
ಮಾಜಿ ಶಾಸಕ ಹಾಗೂ ನೂತನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಪತ್ರಿಕಾಗೋಷ್ಠಿ

ಮಾಜಿ ಶಾಸಕ ಹಾಗೂ ನೂತನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಈ ಕಾರಣಕ್ಕೆ ರಾಜ್ಯದ ಜನರ ಮೂಡ್ ಬದಲಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ೨೮ ಸ್ಥಾನಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ನೂತನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ನೇಮಕವಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ ನಂತರ ಪ್ರಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಬಿ.ಎಸ್ ವಿಜೇಂದ್ರ ಇವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಕೇಂದ್ರ ಹಾಗೂ ರಾಜ್ಯದ ಎಲ್ಲಾ ನಾಯಕರ ಸರ್ವ ಸಮ್ಮತ ನಾಯಕರಾಗಿ ತಂಡ ಕಟ್ಟಿಕೊಂಡು ಬಿಜೆಪಿಯ ಸಂಘಟನಾ ಜಾಲವನ್ನು ವಿಸ್ತರಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಈಗ ಪ್ರಮುಖವಾಗಿ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಎಲ್ಲ್ಲಾ ೨೮ ಸ್ಥಾನಗಳನ್ನು ಗೆಲ್ಲಬೇಕೆಂದು ರಾಜ್ಯ ಬಿಜೆಪಿ ಸವಾಲಾಗಿ ಸ್ವೀಕರಿಸಿದೆ ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ರಾಜ್ಯದ ಎಲ್ಲಾ ಬಿಜೆಪಿ ಘಟಕಗಳನ್ನು ಪುನರ್ ರಚನೆ ಮಾಡುವ ಮೂಲಕ ಸಂಘಟನಾ ಜಾಲವನ್ನು ವಿಸ್ತರಿಸಲಾಗುತ್ತಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ೨೮ ಸ್ಥಾನಗಳನ್ನು ಖಚಿತವಾಗಿ ಗೆಲ್ಲುವುದಾಗಿ ವಿಶ್ವಾಸವಿದೆ ಇದಕ್ಕೆ ಮುಖ್ಯ ಕಾರಣ ರಾಜ್ಯದ ಜನರ ಮೂಡ್ ಬದಲಾಗಿದೆ ಕಾಂಗ್ರೆಸ್ ಪಕ್ಷದ ವಿರುದ್ಧ ಜನರು ನಿರೀಕ್ಷೆ ಕಳೆದುಕೊಂಡು ಪರಿವರ್ತನೆಯಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಕಡೆ ನುಡಿದಂತೆ ನಡೆದಿದ್ದೇವೆ ಎಂದು ಫಲಕಗಳನ್ನು ಹಾಕಲಾಗಿದೆ ಆದರೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಹೇಳಿದಂತೆ ಯಾವ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಗೃಹಲಕ್ಷ್ಮಿ ಯೋಜನೆ ಶೇ.೩೦ ರಿಂದ ೪೦ ರ? ಜನರಿಗೆ ತಲುಪಿಲ್ಲ ಗೃಹಜ್ಯೋತಿ ಯೋಜನೆ ಎಲ್ಲರಿಗೂ ಕೊಡುವುದಾಗಿ ಹೇಳಿ ಕೊನೆಗೆ ನಿಯಮ ಬದಲಾವಣೆ ಮಾಡಿಕೊಂಡು ಕೆಲವರಿಗೆ ಮಾತ್ರ ದೊರೆಯುವಂತಾಗಿದೆ ಯುವನಿಧಿ ಯೋಜನೆ ಈಗ ಕೆಲವರಿಗೆ ಮಾತ್ರ ಅನ್ವಯವಾಗುವಂತೆ ಹೇಳುತ್ತಿದ್ದಾರೆ ಶಕ್ತಿ ಯೋಜನೆ, ಪೂರ್ಣ ವಾಗಿ ಜಾರಿಯಾಗಿರುವಂತೆ ಕಂಡರು ಎಲ್ಲಾ ಬಸ್‌ಗಳು ರಸ್ಸಾಗಿವೆ ಆದರೆ ಬಸ್ಸುಗಳ ಸಂಖ್ಯೆ ಕಡಿಮೆಯಾಗಿದೆ ಈ ರೀತಿ ಯಾವುದೇ ಗ್ಯಾರಂಟಿ ಯೋಜನೆಗಳು ಪೂರ್ಣವಾಗಿ ಜಾರಿಯಾಗದಿರುವುದರಿಂದ ಹೇಗೆ ನುಡಿದಂತೆ ನಡೆದಿದ್ದೇವೆ ಎಂದು ಹೇಳಲು ಸಾಧ್ಯ ಈ ಕಾರಣಕ್ಕಾಗಿ ರಾಜ್ಯದ ಜನರ ಮೂಡ್ ಬದಲಾಗಿದೆ ಎಂದರು.

ಬೇರೆ ರಾಜ್ಯಗಳಲ್ಲಿ ಮೋದಿಯವರ ಭರವಸೆ ನಾಯಕತ್ವಕ್ಕೆ ಜನ ಬೆಂಬಲಿಸುತ್ತಿದ್ದಾರೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಬಗ್ಗೆ ಬೇಸತ್ತಿದ್ದು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು ೨೮ ಲೋಕಸಭಾ ಕ್ಷೇತ್ರಗಳಲ್ಲಿಯೂ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದರು.

ದಲಿತ ಪ್ರಧಾನಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ದಲಿತ ಪ್ರಧಾನಿ ಅಭ್ಯರ್ಥಿ ಬಗ್ಗೆ ಪ್ರಸ್ತಾಪವಿದೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಮತ್ತು ಅರವಿಂದ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆಯೇ ಹೊರತು ಕಾಂಗ್ರೆಸ್ ಪಕ್ಷದಲ್ಲಿ ಅವರ ಹೆಸರು ಪ್ರಸ್ತಾವವಾಗಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಹೆಸರು ಹೇಳಿದ್ದಾರೆ ಇದರಿಂದ ಪ್ರಧಾನಮಂತ್ರಿ ಸ್ಥಾನಕ್ಕೆ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸುವ ಸಾಧ್ಯತೆ ಇಲ್ಲ ಬಿಜೆಪಿಯಲ್ಲಿ ಪ್ರಧಾನಮಂತ್ರಿ ಅಭ್ಯರ್ಥಿಗೆ ನರೇಂದ್ರ ಮೋದಿಯವರು ಪ್ರಶ್ನಾತೀತ ನಾಯಕರೆಂದು ಸ್ಪ?ಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮರುಡಪ್ಪ, ವಕ್ತಾರ ಟಿ.ರಾಜಶೇಖರ್, ಎಸ್.ಸಿ ಎಸ್.ಟಿ ಮೋರ್ಚಾ ಅಧ್ಯಕ್ಷ ಕೆ.ಪಿ ವೆಂಕಟೇಶ್ ಇದ್ದರು.

It is not happening as stated by the state government

About Author

Leave a Reply

Your email address will not be published. Required fields are marked *

You may have missed