September 19, 2024

ದತ್ತಪೀಠ ಆವರಣದ ಗೋರಿ ಹಾನಿ: 14 ಜನ ಆರೋಪಿಗಳಿಗೆ ಸಮನ್ಸ್

0
Dattapeeth

Dattapeeth

 ಚಿಕ್ಕಮಗಳೂರು: ೨೦೧೭ರಲ್ಲಿ ನಡೆದ ದತ್ತ ಜಯಂತಿವೇಳೆ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ದತ್ತಪೀಠ ಆವರಣದ ಗೋರಿ ಹಾನಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಎಲ್ಲಾ ೧೪ ಜನ ಆರೋಪಿಗಳಿಗೆ ಸಮನ್ಸ್ ನೀಡಿದ್ದಾರೆ.

೨೦೧೭ ರ ದತ್ತಜಯಂತಿ ವೇಳೆ ದತ್ತಭಕ್ತರ ಮೇಲೆ ದಾಖಲಾಗಿದ್ದ ಗೋರಿ ಹಾನಿ ಪ್ರಕರಣದಲ್ಲಿ ಕಳೆದ ಡಿಸೆಂಬರ್ ೬ ರಂದು ನ್ಯಾಯಾಲಯಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ಎಲ್ಲಾ ೧೪ ಜನ ಆರೋಪಿತರಿಗೆ ಕೋರ್ಟ್ ಸಮನ್ಸ್ ನೀಡಿದೆ. ಕಳೆದ ೬ ವರ್ಷಗಳ ಹಿಂದೆ ದಾಖಲಾಗಿದ್ದ ಕೇಸ್‌ಗೆ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿತ್ತು.

ಇದೀಗ ೧೪ ಜನರ ಮೇಲಿನ ಕೇಸ್ ನ ಆರೋಪಿಗಳಾದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್ ರಾಮುಗೆ ಪೊಲೀಸರು ಸಮನ್ಸ್ ನೀಡಿದ್ದು , ಎಲ್ಲಾ ಆರೋಪಿಗಳಿಗೂ ಇದೇ ಜನವರಿ ೮ ನೇ ತಾರೀಖು ಕೋರ್ಟಿಗೆ ಹಾಜರಾಗುವಂತೆ ಸೂಚನೆ ಸಹಾ ನೀಡಲಾಗಿದೆ.

ಈ ವಿಚಾರಕ್ಕೆ ಸಂಭಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಪಷ್ಟನೆ ನೀಡಿದ್ದು ಜಿಲ್ಲೆಯಲ್ಲಿ ಯಾವುದೇ ಹಳೇ ಪ್ರಕರಣಗಳ ರೀ ಒಪನ್ ಆಗಿಲ್ಲ , ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.

ಬೆಂಗಳೂರು ಜ ೪: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾg ವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ.
೨೦೧೭ ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ.

೨೦೧೭ ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ೨೦೨೦ ರ ಮಾರ್ಚ್ ೧೯ ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ ೨೦೨೩ ರ ಸೆಪ್ಟೆಂಬರ್ ೭ ರಂದು ಸರ್ಕಾರ ಅನುಮತಿ ನೀಡಿತ್ತು.

೨೦೨೩ ರ ಅಕ್ಟೋಬರ್ ೨೪ ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ ೮ ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ.ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಹೇಳಿದ್ದಾರೆ.

Dattapeeth Precinct Tomb Damage – Summons to 14 Accused

About Author

Leave a Reply

Your email address will not be published. Required fields are marked *

You may have missed