September 16, 2024

ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ

0
ಚಿಕ್ಕಮಗಳೂರು:  ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಇಂದು ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಡಿಪ್ಲೋಮಾ ಅಥವಾ ಪದವಿ ಮುಗಿಸಿದ ತಕ್ಷಣ ಉದ್ಯೋಗ ಸಿಗುವುದು ಕಷ್ಟಕರವಾಗಿರುತ್ತದೆ. ಯುವನಿಧಿಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಕೌಶಲ್ಯ ತರಬೇತಿ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗುತ್ತದೆ.
೨೦೨೨-೨೩ನೇ ಶೈಕ್ಷಣಿಕ ಸಾಲಿನ ೨೦೨೩ರಲ್ಲಿ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಅರ್ಜಿಸಲ್ಲಿಸಲು ಅವಕಾಶವಿರುತ್ತದೆ. ಕನಿಷ್ಟ ೬ ತಿಂಗಳ ಅವಧಿಯೊಳಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವವರು,  ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಎಂದರು.
ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವವರು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ವೆಬ್ ಸೈಟ್ https://sevasindhu.karnataka.gov.in ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಸಹಾಯವಾಣಿ ಸಂಖ್ಯೆ: ೧೮೦೦೫೯೯೯೯೧೮ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ್, ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ಚಾಂದಿನಿ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಹಾಗೂ ಐಡಿಎಸ್‌ಜಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Unemployed youths benefit from Yuvanidhi Yojana

About Author

Leave a Reply

Your email address will not be published. Required fields are marked *