September 19, 2024
ಕರ್ನಾಟಕ ಜಾನಪದ ಪರಿಷತ್ತಿನಿಂದ ನಡೆದ ಪೂರ್ವಭಾವಿ ಸಭೆ

ಕರ್ನಾಟಕ ಜಾನಪದ ಪರಿಷತ್ತಿನಿಂದ ನಡೆದ ಪೂರ್ವಭಾವಿ ಸಭೆ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಫೆ.೪ ರಂದು ನಡೆಯಲಿದೆ.

ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ಮಂಗಳವಾರ ಕರ್ನಾಟಕ ಜಾನಪದ ಪರಿಷತ್ತಿನಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ತಾಲೂಕಿನ ಹಿರಿಯ ಜಾನಪದ ಕಲಾವಿದರನ್ನು ಗುರುತಿಸಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡು ವುದು, ಸಮ್ಮೇಳನದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸುವುದು ಸೇರಿದಂತೆ ಹಲವು ತೀರ್ಮಾನಗಳನ್ನು ಸಭೆ ಕೈಗೊಂಡಿತು.

ಸಮ್ಮೇಳನದಲ್ಲಿ ನಡೆಸಲಾಗುವ ವಿವಿಧ ಜಾನಪದ ಗೋಷ್ಠಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಷೆ ಗಳನ್ನು ತಯಾರಿಸಲಾಯಿತು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಲಕ್ಕವಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಅದರ ಯಶಸ್ಸಿಗೆ ಸರ್ವರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಉದ್ಯಮಿ ಸೀನೋಜಿ ರಾವ್ ಮಾತನಾಡಿ, ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಆರ್.ನಾಗೇಶ್ ಮಾತನಾಡಿ, ತಾಲೂಕಿನಲ್ಲಿರುವ ಜಾನ ಪದ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಮ್ಮೇಳನ ಉತ್ತಮ ವೇದಿಕೆಯಾಗಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀರಾಮ್ ಸಭೆಯನ್ನು ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅನುಭೂ, ರೈತ ಸಂಘದ ಅಧ್ಯಕ್ಷ ನಂದಕುಮಾರ್, ರಮೇಶ್, ಕೆಂಪೇಗೌಡ, ತ್ಯಾಗದಬಗೆ ದೇವರಾಜ್, ಪರಿಷತ್ತಿನ ಖಜಾಂಚಿ ಮೋಹನ್‌ಕುಮಾರ್, ಚಿಕ್ಕಣ್ಣ, ಸಂಧ್ಯಾ, ದತ್ತಾತ್ರಿ, ಸುರೇಶ್, ಸುಬ್ರಮಣಿ, ಹೇಮಣ್ಣ, ಪರಮೇಶ್ ಸಭೆಯಲ್ಲಿ ಪಾಲ್ಗೊಂಡಿದ್ದರು.

Preliminary meeting held by Karnataka Folk Council

About Author

Leave a Reply

Your email address will not be published. Required fields are marked *

You may have missed