September 19, 2024

ಫೆ.1: ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಎಐಟಿಯುಸಿ ಬೃಹತ್ ಪ್ರತಿಭಟನೆ

0
ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಪತ್ರಿಕಾಗೋಷ್ಠಿ

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿರೋಧಿಸಿ ದುಡಿಯುವ ಜನಸಮುದಾಯದ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಫೆ.೧ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ ಮತ್ತು ಬಹಿರಂಗ ಅಧಿವೇಶನ ಆಯೋಜಿಸಲಾಗಿದೆ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ’ಬಡಾಯಿ, ಭರವಸೆ, ಭಾ?ಣ ಸಾಕು, ಜನಪರ ಆಡಳಿತ ಬೇಕು’ ಘೋ?ಣೆಯೊಂದಿಗೆ ಅಂದು ಬಿಸಿಯೂಟ, ಅಂಗನವಾಡಿ, ಆಶಾ, ಕೈಗಾರಿಕಾ, ಕಟ್ಟಡ, ಸಾರಿಗೆ, ಬೀಡಿ, ಪ್ಲಾಂಟೇಶನ್, ಬ್ಯಾಂಕ್, ವಿಮಾ, ಗಿಗ್ ಗಣಿ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದರು.

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಪ್ರಿಯಾಂಕ ಗಾಂಧಿಯವರು ಘೋಷಿಸಿದ್ದ ೬ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ೧೫ ಸಾವಿರ ಹಾಗೂ ಸಹಾಯಕಿಯರಿಗೆ ೧೦ ಸಾವಿರ ರೂ, ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ೧೦ ಸಾವಿರ ರೂ ಮತ್ತು ಆಶಾ ಕಾರ್ಯಕರ್ತೆಯರಿಗೆ ೧೦ ಸಾವಿರ ರೂ ಗೌರವ ಧನ ಹೆಚ್ಚಿಸುವುದರ ಜೊತೆಗೆ ಎಲ್ಲಾ ಯೋಜನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ ಇಡುಗಂಟು, ಇಎಸ್‌ಐ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.

ಕೈಗಾರಿಕಾ ಕಾರ್ಮಿಕರ ದುಡಿಮೆಯ ಅವಧಿ ಹೆಚ್ಚಳ ಹಾಗೂ ಕನಿ? ವೇತನದ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಪ್ಲಾಂಟೇಶನ್ ಕಾರ್ಮಿಕರಿಗೆ ಸಮರ್ಪಕ ವೇತನ, ವಸತಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.

ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿರುವ ಹಣದ ದುರುಪಯೋಗ ತಡೆದು, ನೈಜ ಕಾರ್ಮಿಕರ ಕುಟುಂಬಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕು. ಬೀಡಿ ಕಾರ್ಮಿಕರ ತುಟ್ಟಿ ಭತ್ಯೆ, ಕನಿ? ವೇತನ ಹಾಗೂ ಅಭಿವೃದ್ಧಿ ನಿಗಮ ಸ್ಥಾಪಿಸಲು ಈ ಪ್ರತಿಭಟನೆಯಲ್ಲಿ ಒತ್ತಾಯಿಸಲಾಗುವುದೆಂದು ಹೇಳಿದರು.

ಗಿಗ್ ವರ್ಕರ್‍ಸ್‌ಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ನೀಡಬೇಕು. ಸಾರಿಗೆ ನಾಲ್ಕು ನಿಗಮಗಳ ಸೌಕರರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಜೊತೆಗೆ ಗಣಿ ಕಾರ್ಮಿಕರಿಗೆ ಸಮಾನ ವೇತನ ನೀಡಿ ಹಟ್ಟಿ ಚಿನ್ನದ ಕಂಪನಿನಿಯ ಮೂಲಕ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಲು ಪ್ರಬಲ ಜನಾಂದೋಲನ ರೂಪಿಸಲು ಕನಿ? ವೇತನ ಕುರಿತಂತೆ ಬೆಲೆಗಳ ವೈಜ್ಞಾನಿಕ ಅಧ್ಯಯನವನ್ನು ರಾಜ್ಯ ಉಚ್ಚ ನ್ಯಾಯಾಲಯ ೩೧,೫೦೦ ರೂ ಪ್ರತಿಯೊಂದು ಕುಟುಂಬ ನಿರ್ವಹಣೆಗೆ ಅಗತ್ಯವಾಗಿದೆ ಎಂದು ಹೇಳಿದೆ ಎಂದರು.

ಈ ಆದೇಶದನ್ವಯ ರಾಜ್ಯದ ೧.೭ ಕೋಟಿ ಕಾರ್ಮಿಕರು ಇದರ ಪ್ರಯೋಜನ ಪಡೆಯುವ ಅರ್ಹತೆ ಹೊಂದಿದ್ದಾರೆ ಎಂದ ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಉಪಾಧ್ಯಕ್ಷ ಕೆ.ಗುಣಶೇಖರನ್ ಅಂಗನವಾಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪು?ವತಿ, ಪಾರ್ವತಮ್ಮ, ಸವಿತಾ, ವಸಂತ, ಶೈಲ, ಕಲಾ ಮತ್ತಿತರರು ಉಪಸ್ಥಿತರಿದ್ದರು.

Feb. 1: Massive protest by AITUC at Bangalore Freedom Park

About Author

Leave a Reply

Your email address will not be published. Required fields are marked *

You may have missed