September 19, 2024

ಚಿತ್ರದುರ್ಗದ ಸಾಣೇಹಳ್ಳಿ ಮಠದಲ್ಲಿ ಅಂತರ ಜಿಲ್ಲಾ ಕಸಾಪ ಸಮ್ಮೇಳನ

0
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಸುದ್ದಿಗೋಷ್ಟಿ

????????????????????????????????????

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೨ ಮತ್ತು ೩ರಂದು ಹಮ್ಮಿಕೊಳ್ಳ ಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಅವರು ಇಂದು ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಂಟಿಯಾಗಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಗಡಿಗ್ರಾಮವಾದ ಸಾಣೇಹಳ್ಳಿ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಫೆ.೨ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಉದ್ಘಾಟಿಸುವರು. ತಹಶೀಲ್ದಾರ್ ತಿರುಪತಿ ಪಾಟೀಲ್ ರಾಷ್ಟ್ರಧ್ವಜರೋಹಣ ನೆರವೇರಿ ಸುವರು. ಎ.ಸಿ.ಚಂದ್ರಪ್ಪ ನಾಡಧ್ವಜರೋಹಣ, ಆರ್.ಮಲ್ಲಿಕಾರ್ಜುನಯ್ಯ ಪರಿಷತ್ ಧ್ವಜರೋಹಣ ನೆರ ವೇರಿಸುವರು. ಕಾರೇಹಳ್ಳಿಬ ಬಸವರಾಜ್, ಗೊ.ತಿಪ್ಪೇಶ್ ಸೇರಿದಂತೆ ಅನೇಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಲಿದೆ ಎಂದು ತಿಳಿಸಿದರು.

ಅಂದು ೧೧:೩೦ಕ್ಕೆ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉದ್ಘಾಟಿಸುವರು. ಕೆ.ಎಂ.ಶಿವಸ್ವಾಮಿ ಸ್ವಾಗತಿಸುವರು. ಸೂರಿ ಶ್ರೀನಿವಾಸ್ ಪ್ರಸ್ತಾವಿಕವಾಗಿ ಮಾತನಾಡುವರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ|ಮಹೇಶ್ ಜೋಶಿ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚನೆ ನೆರವೇರಿಸುವರು. ಸಚಿವ ಡಿ.ಸುಧಾಕರ್ ಬೆಳಕಿನಡೆಗೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸು ವರು. ಬಿ.ಜಿ.ಗೋವಿಂದಪ್ಪ, ಬಿ.ಎನ್.ಚಂದ್ರಪ್ಪ, ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್, ಉಪಸ್ಥಿತರಿರುವರು.

ಸಮ್ಮೇಳನಾಧ್ಯಕ್ಷರಾದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡುವರು. ಮಧ್ಯಾಹ್ನ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಇತಿಹಾಸ ಹಾಗೂ ಸಾಹಿತ್ಯ ಕುರಿತು ವಿಚಾರಗೋಷ್ಟಿ ನಡೆಯಲಿದೆ. ಮಧ್ಯಾಹ್ನದ ನಂತರ ಮಠಗಳ ಧಾರ್ಮಿಕ, ಸಾಹಿತ್ಯಕ ಸಾಂಸ್ಕೃತಿಕ ಕೊಡುಗೆ ಕುರಿತು ವಿಚಾರ ಗೋಷ್ಠಿ ನಡೆಯಲಿದೆ. ಸಂಜೆ ರಂಗಭೂಮಿ ಕುರಿತು ಗೋಷ್ಟಿ ನಡೆಯಲಿದೆ ಎಂದ ಅವರು ನಂತರ ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು.

ಫೆ.೩ರಂದು ಜಾನಪದ ಕಲಾ ಪ್ರಕಾರಗಳಾದ ವೀರಗಾಸೆ, ಚೌಡಿಕೆ, ಸೋಬಾನೆ, ಲಂಬಾಣಿ ನೃತ್ಯ ವಿಚಾರಗೋಷ್ಟಿ, ಸಾಂಸ್ಕೃತಿಕ ರಾಜಕಾರಣ, ಮಾನವೀಯ ಸಮಾಜ ನಿರ್ಮಾಣ ವಚನ ಸಾಹಿತ್ಯ, ಪುಸ್ತಕ ಸಂಸ್ಕೃತಿ ಕುರಿತು ವಿಚಾರಗೋಷ್ಟಿಗಳು ಹಾಗೂ ಕವಿಗೋಷ್ಟಿ ನಡೆಯಲಿವೆ ಎಂದ ಅವರು, ಸಂಜೆ ಸಮ್ಮೇಳನಾಧ್ಯಕ್ಷರ ಜೊತೆ ಸಂವಾದ ಬಹಿರಂಗ ಅಧಿವೇಶನ ನಡೆಯಲಿದೆ ಎಂದರು.

ಅಂದು ಸಂಜೆ ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು ಸಾಹಿತ್ಯ ಸಿರಿ ಹಾಗೂ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಸುದ್ದಿಗೋಷ್ಟಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಎ.ಸಿ.ಚಂದ್ರಪ್ಪ, ಸೋಮಶೇಖರ್, ಜಿ.ಬಿ.ಪವನ್, ಗುರುವೇಶ್, ಎಚ್.ಆರ್.ಚಂದ್ರಪ್ಪ ಇದ್ದರು.

Inter District Kasapa Conference at Sanehalli Mutt Chitradurga

 

About Author

Leave a Reply

Your email address will not be published. Required fields are marked *

You may have missed