September 16, 2024

ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪಗೆ ಅಧಿಕೃತ ಆಹ್ವಾನ

0
ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪಗೆ ಅಧಿಕೃತ ಆಹ್ವಾನ

ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪಗೆ ಅಧಿಕೃತ ಆಹ್ವಾನ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನಿಂದ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ಫೆ ೧೦ ರಂದು ನಡೆಯಲಿರುವ ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪ ಅವರಿಗೆ ಪರಿಷತ್ತಿನ ಪದಾಧಿಕಾರಿಗಳು ಭಾನುವಾರ ಅಧಿಕೃತ ಆಹ್ವಾನ ನೀಡಿದರು.

ಸಮ್ಮೇಳನಾಧ್ಯಕ್ಷರ ಗಡಿ ಹಳ್ಳಿಯ ನಿವಾಸಕ್ಕೆ ಬೆಳಿಗ್ಗೆ ತೆರಳಿದ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ನಿಂಗಪ್ಪ ಅವರನ್ನು ಸನ್ಮಾನಿಸಿ ತಾಂಬೂಲ ನೀಡಿ ಸಮ್ಮೇಳನವನ್ನು ಯಶಸ್ವಿಗೊಳಿಸಿ ಕೊಡುವಂತೆ ಮನವಿ ಮಾಡಿದರು

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ ಬಿ ಸುರೇಶ್ ಮಾತನಾಡಿ ಟಿ ನಿಂಗಪ್ಪ ಅವರು ಜಾನಪದ ಹಾಡುಗಾರರಾಗಿ ಕಲಾವಿದರಾಗಿ ರಂಗಕರ್ಮಿಯಾಗಿ ನಾಡಿಗೆ ಬಹಳಷ್ಟು ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ಫೆ ೧೦ ರಂದು ನಡೆಯಲಿರುವ ಸಮ್ಮೇಳನದಲ್ಲಿ ವಿವಿಧ ಜಾನಪದ ಗೋಷ್ಠಿಗಳು ಜಾನಪದ ಕಲಾವಿದರಿಗೆ ಗೌರವ ಸಮರ್ಪಣೆ ಜಾನಪದ ಗೀತೆಗಳ ಗಾಯನ ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ತಿಳಿಸಿದರು.

ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು

ಪರಿಷತ್ತಿನ ಅಜ್ಜಂಪುರ ತಾಲೂಕು ಅಧ್ಯಕ್ಷ ಹಿರಿಯ ವೀರಗಾಸೆ ಕಲಾವಿದ ಡಾ ಮಾಳೇನಹಳ್ಳಿ ಬಸಪ್ಪ ಮಾತನಾಡಿ ಇಂದಿನ ಯುವಜನತೆಯನ್ನು ಪಾಶ್ಚಾತ್ಯ ಸಂಸ್ಕೃತಿಯ ಗೀಳಿನಿಂದ ಹೊರ ತರಬೇಕಾದರೆ ಇಂತಹ ಸಮ್ಮೇಳನಗಳು ಅತ್ಯಗತ್ಯ ಎಂದರು

ಗ್ರಾಮದ ಮುಖಂಡ ಮಂಜಪ್ಪ ಮಾತನಾಡಿ ಸಮ್ಮೇಳನಕ್ಕೆ ಮುನ್ನ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ವಿವಿಧ ಜಾನಪದ ಕಲಾತಂಡಗಳ ನಡುವೆ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಗೌರವಾಧ್ಯಕ್ಷ ಮರುಳ ಸಿದ್ದಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಸದಸ್ಯೆ ಮುಗುಳಿ ಲಕ್ಷ್ಮೀದೇವಮ್ಮ ಗ್ರಾಮದ ಮುಖಂಡರಾದ ಪರಮೇಶ್ವರಪ್ಪ ಅಣ್ಣಯ್ಯ ರಾಜಣ್ಣ ಉಪಸ್ಥಿತರಿದ್ದರು.

Official invitation to Rangakarmi T Ningappa President of Third Folklore Conference

About Author

Leave a Reply

Your email address will not be published. Required fields are marked *