September 8, 2024

ಎಸ್.ಎಸ್.ಎಲ್.ಸಿ, ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ, ಉದ್ಯೋಗ ಮಾರ್ಗದರ್ಶನ ಕಾರ್ಯಗಾರ

0
ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ ಹಾಗೂ ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಗಾರ

ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ ಹಾಗೂ ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಗಾರ

ಚಿಕ್ಕಮಗಳೂರು: ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನವನ್ನು ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿಕ್ಕಮಗಳೂರು ವತಿಯಿಚಿದ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭವಿಷ್ಯದ ವಿದ್ಯಾಭ್ಯಾಸ ಹಾಗೂ ಉದ್ಯೋಗ ಮಾರ್ಗದರ್ಶನ ಕುರಿತ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ. ಎನ್ನುವುದು ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರವೇಶ ಪಡೆಯಲು ಉತ್ತಮ ಅಂಕಗಳಿಸಬೇಕಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಸರಿಯಾದ ಸಿದ್ಧತೆಯೊಂದಿಗೆ ಪರೀಕ್ಷೆಯನ್ನು ಎದುರಿಸಬೇಕೆಂದು ಹೇಳಿದರು.

ಯಾವುದೇ ರೀತಿಯ ಪರೀಕ್ಷೆ ಎಂದರೆ ಭಯ, ಒತ್ತಡ ಇದ್ದೆ ಇರುತ್ತದೆ. ಆದರೆ ಅದಕ್ಕಾಗಿ ನಾವು ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡು ಪರೀಕ್ಷೆ ಬರೆದರೆ ಮಾತ್ರ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಹೀಗಾಗಿ ಪರೀಕ್ಷೆ ಬರೆಯುವ ಮುನ್ನ ಕಠಿಣ ಸಿದ್ಧತೆಯನ್ನು ಮಾಡಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ.

ಒಬ್ಬ ಮಾದರಿ ವ್ಯಕ್ತಿಯಾಗಿ ಬೆಳೆಯಲು ಒಳ್ಳೆಯ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ, ನಿರ್ಧಿಷ್ಟ ಗುರಿಯನ್ನು ಇಟ್ಟುಕೊಳ್ಳುವಲ್ಲಿ ಮಕ್ಕಳು ವಿಫಲರಾಗಿರುತ್ತಾರೆ. ಪ್ರಸ್ತುತ ಜಗತ್ತಿನಲ್ಲಿ ಪ್ರತಿಭಾವಂತರಿಗಷ್ಟೇ ಅವಕಾಶಗಳು ಲಭಿಸುತ್ತಿದ್ದು, ಪ್ರತಿಯೊಬ್ಬರು ತಮ್ಮ ಜೀವನವನ್ನು ರಚನಾತ್ಮಕ ಮಾದರಿಯಲ್ಲಿ ರೂಪಿಸಿಕೊಳ್ಳಬೇಕೆಂದು ಹೇಳಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಮುಂದಿನ ವ್ಯಾಸಂಗದ ಕುರಿತು ಜಾಗೃತರಾಗಿರಬೇಕು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಗುರಿ ಸಾಧನೆಗೆ ಕಠಿಣ ವ್ಯಾಸಂಗ ಮಾಡಿ, ಗುರಿ ಸಾಧಿಸುವ ಮೂಲಕ ತಮ್ಮ ಪೋಷಕರಿಗೆ, ವಿದ್ಯೆ ಕಲಿಸಿದ ಗುರುಗಳಿಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು. ವಿದ್ಯಾರ್ಥಿನಿಲಯಗಳಲ್ಲಿ ಇಂದು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಎಲ್ಲಾ ಅನುಕೂಲತೆಗಳನ್ನು ಸರ್ಕಾರ ಮಾಡಿದೆ ಈ ಅವಕಾಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮೈ ಕೆರಿಯರ್ ಲ್ಯಾಬ್‌ನ ಬಿ.ಎಂ. ಶಂಕರ್ ಬೆಳ್ಳೂರು, ಆಲ್ದೂರು ಪೂರ್ಣ ಪ್ರಜ್ಞಾ ಶಾಲೆಯ ಗಣಿತ ಶಿಕ್ಷಕಿ ಭಾಗ್ಯಶ್ರೀ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಯ ವಿಷಯ ಪರೀವೀಕ್ಷಕ ಕಾಂತರಾಜು ಕೆ.ಜಿ, ಚಿಕ್ಕಮಗಳೂರು ತಾಲ್ಲೂಕಿನ ಬಿ.ಇ.ಒ ಕಛೇರಿಯ ಇ.ಸಿ.ಒ ಕೃಷ್ಣಮೂರ್ತಿ ರಾಜ ಅರಸ್ ಇವರು ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕೆಂಬುದರ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Worker on examination future education and employment guidance for students

About Author

Leave a Reply

Your email address will not be published. Required fields are marked *

You may have missed