September 20, 2024

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಲು ಕರವೇ ಒತ್ತಾಯ

0
ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಲು ಕರವೇ ಒತ್ತಾಯ

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಲು ಕರವೇ ಒತ್ತಾಯ

ಚಿಕ್ಕಮಗಳೂರು: ನಗರದ ಪ್ರತಿಯೊಂದು ಅಂಗಡಿ ಮುಂಗಟ್ಟುದಾರರ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಪದಗಳಿಗೆ ಆದ್ಯತೆ ನೀಡುವ ಮೂಲಕ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಘಟಕವು ಬುಧವಾರ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ಕಳೆದ ಎರಡು ದಶಕಗಳ ಹೆಚ್ಚು ಕಾಲ ಕನ್ನಡ, ನಾಡು, ನುಡಿ, ಜಲ ಇತ್ಯಾದಿಗಳ ವಿಚಾರವಾಗಿ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕೆಂಬುದನ್ನು ಸಾಕಷ್ಟು ಮನವಿ ಮೂಲಕ ಒತ್ತಾಯಿಸಲಾಗಿದೆ ಎಂ ದರು.

ರಾಜ್ಯವನ್ನು ಕನ್ನಡಮಯಗೊಳಿಸುವ ನಿಟ್ಟಿನಲ್ಲಿ ಯಾವುದೇ ಸರ್ಕಾರಗಳು ಮನವಿಗೆ ಸ್ಪಂದಿಸದ ಹಿನ್ನೆಲೆಯ ಲ್ಲಿ ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರವನ್ನು ಎಚ್ಚರಿಸಲಾಗಿತ್ತು. ಈ ಫಲಶೃತಿಯಾಗಿ ಸರ್ಕಾರ ಸುಗ್ರೀವಾಜ್ಞೆ ಮುಖಾಂತರ ಕಡ್ಡಾಯವಾಗಿ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಬಳ ಸಬೇಕೆಂದು ಆದೇಶ ಹೊರಡಿಸಲಾಗಿದೆ ಎಂದರು.

ನಗರದ ಬಹುತೇಕ ಅಂಗಡಿದಾರರು ಆಂಗ್ಲಭಾಷೆಯ ವ್ಯಾಮೋಹ ಅಥವಾ ವ್ಯಾಪಾರ ಹೆಚ್ಚಳ ಗೊಳಿಸುವ ನಿಟ್ಟಿನಲ್ಲಿ ಇಂಗ್ಲೀಷ್ ಫಲಕಗಳನ್ನು ಹಾಕಿ ರಾರಾಜಿಸುತ್ತಿವೆ. ಹೀಗಾಗಿ ಸರ್ಕಾರ ನೀಡಿರುವ ಫೆ.೨೮ರ ಒಳಗೆ ಗಡುವು ಮುಗಿಯುವುದರೊಳಗೆ ಆಂಗ್ಲಭಾಷೆಯ ನಾಮಫಲಕ ತೆರವುಗೊಳಿಸಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಗಡುವು ಮುಗಿದ ನಂತರ ಅದೇ ಚಾಳಿ ಮುಂದುವರೆಸಿದರೆ ನಗರ ಸೇರಿದಂತೆ ಕರ್ನಾ ಟಕಾದ್ಯಂತ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಆದೇಶದಂತೆ ನಾಮಫಲಕದ ಕ್ರಾಂತಿಕಾರಿ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಟೆ ಮಲ್ಲೇಶ್, ತಾಲ್ಲೂಕು ಅಧ್ಯಕ್ಷ ಮನೋಜ್‌ಶೆಟ್ಟಿ, ಉಪಾಧ್ಯಕ್ಷ ಇರ್ಷಾದ್ ಅಹ್ಮದ್, ಮಹಿಳಾ ಘಟಕದ ಅಧ್ಯಕ್ಷೆ ನಾಗಲತಾ, ವಕ್ತಾರ ಕೋಟೆ ಸೋ ಮಣ್ಣ, ಮುಖಂಡರುಗಳಾದ ಪಂಚಾಕ್ಷರಿ, ಕೇಶವ, ರುದ್ರೇಶ್, ಮಧು ಮತ್ತಿತರರು ಹಾಜರಿದ್ದರು.

Karaway insists on giving preference to Kannada in name plates

About Author

Leave a Reply

Your email address will not be published. Required fields are marked *