September 8, 2024

ಜಿಲ್ಲೆಗೆ ಮಾರ್ಚ್ 3 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ

0
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಎಲ್ಲಾ ಜನರಿಗೆ ಮಾತು ಕೊಟ್ಟಂತೆ ನಡೆದುಕೊಂಡು ಜನಪ್ರಿಯ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ಇದೇ ಮಾರ್ಚ್ ೩ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಕಾಂಗ್ರೆಸ್ ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಅತ್ಯಂತ ಜವಾಬ್ದಾರಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಎಲ್ಲರ ಸಹಕಾರದಿಂದ ಭರವಸೆ ನೀಡಿದ್ದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಜೊತೆಗೆ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದು ಹೆಮ್ಮೆ ಪಡುವ ವಿ?ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನ್ ಕಿ ಬಾತ್ ಅಲ್ಲ. ಕಾಮ್ ಕಿ ಬಾತ್ ಮೂಲಕ ಎಲ್ಲರಿಗೂ ಸಂತೋ? ಉಳಿಸಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅನೇಕ ಪೂರ್ವಭಾವಿ ಸಭೆ ನಡೆಸಿ ಪ್ರತಿ ಬೂತ್‌ಮಟ್ಟದಿಂದ ಫಲಾನುಭವಿಗಳನ್ನು ಕರೆತರಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದರು.

ನುಡಿದಂತೆ ನಡೆಯುತ್ತಿರುವ ತಮ್ಮ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿಯಾಗಿ ಅನು?ನಗೊಳಿಸುತ್ತಿದ್ದು ಈ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ೨೪೧೨೦೬ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯಡಿ ೧,೫೨,೨೯,೯೧೩ ಮಹಿಳೆಯರು ಸಂಚಾರ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ೨೪೪೯೭೬ ಮಂದಿ ಸೌಲಭ್ಯ ಪಡೆದಿದ್ದಾರೆ. ಈ ಜಿಲ್ಲೆಯ ೯ ತಾಲೂಕುಗಳಲ್ಲಿ ಶೇ. ೯೫.೫ ರ? ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ೫ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯಲ್ಲಿ ೨೬೫೭ ನಿರುದ್ಯೋಗಿಗಳು ಅರ್ಜಿ ಸಲ್ಲಿಸಿದ್ದು ಈ ಪೈಕಿ ೪೪೧ ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದು ಗೃಹಜ್ಯೋತಿ ಯೋಜನೆಯಡಿ ೨೯೫೮೪೭ ಜನ ಪ್ರಯೋಜನ ಪಡೆದಿದ್ದು ಉಳಿದ ಅರ್ಹ ಫಲಾನುಭವಿಗಳಿಗೂ ಹಂತಹಂತವಾಗಿ ಸರ್ಕಾರದ ಸೌಲಭ್ಯ ದೊರೆಯಲಿದೆ ಎಂದರು.

ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ನಿರ್ಮಿಸಲು ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಈ ಜಿಲ್ಲೆಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ನಿವೇಶನ ಸಮಸ್ಯೆ ಬಗೆಹರಿಸಲು ಪಕ್ಷದ ೫ ಶಾಸಕರುಗಳು ಪ್ರತಿ ಗ್ರಾಮ ಪಂಚಾಯತ್ ಮಟ್ಟದಿಂದ ಪ್ರಯತ್ನ ನಡೆಸಿದ್ದಾರೆ. ಜಂಟಿ ಸರ್ವೆ ಕಾರ್ಯವೂ ಆರಂಭವಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಫ್, ನಗರಾಧ್ಯಕ್ಷ ತನೂಜ್‌ಕುಮಾರ್, ವಕ್ತಾರ ರೂಬಿನ್ ಮೊಸಸ್, ಹಿರೇಮಗಳೂರು ರಾಮಚಂದ್ರ ಇದ್ದರು.

Chief Minister Siddaramaiah on March 3 to the district

About Author

Leave a Reply

Your email address will not be published. Required fields are marked *

You may have missed