September 19, 2024
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಸುದ್ದಿಗೋಷ್ಠಿ

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಸುದ್ದಿಗೋಷ್ಠಿ

ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ೧೦ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಆರೋಪಿಸಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೊಂದು ರೈತ, ದಲಿತ ವಿರೋಧಿ ಸರಕಾರವಾಗಿದೆ. ದಲಿತರಿಗೆ ಮೀಸಲಿದ್ದ ೧೧ ಸಾವಿರ ಕೋಟಿ ರೂ.ಗಳನ್ನು ಅನ್ಯ ಉದ್ದೇಶಕ್ಕೆ ಬಳಸಿದೆ. ರಾಜ್ಯದಲ್ಲಿ ರೈತರ ಆತ್ಮ ಹತ್ಯೆ ಪ್ರಮಾಣ ಹೆಚ್ಚುತ್ತಿದೆ. ರಾಜ್ಯದಲ್ಲಿ ಬರ ಆವರಿಸಿದ್ದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲವಾಗಿರುವ ಸರಕಾರ ರೈತ ವಿರೋಧಿ ನಿಲುವು ತಾಳಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ದೆಹಲಿ ತಿಜೋರಿ ತುಂಬಲು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಅಧಿಕಾರಿಗಳಿಗೆ ಇಂತಿಷ್ಟು ನೀಡಬೇಕು ಎಂದು ಟಾಸ್ಕ್ ನೀಡಲಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿಗಳ ಸಲುವಾಗಿ ಕ್ಷೇತ್ರದಲ್ಲಿ ಯಾವೊಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿರುವ ಕಾರಣ ಇತ್ತೀಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ದೂರಿದರು.

ಕೇಂದ್ರದಿಂದ ಸಾಕಷ್ಟು ಅನುದಾನವನ್ನು ನೀಡಿದ್ದರೂ ಮತ್ತೆ ಕೇಂದ್ರದತ್ತ ಬೊಟ್ಟು ಮಾಡುವುದನ್ನು ಸಿದ್ದರಾಮಯ್ಯ ಮುಂದುವರಿಸಿದ್ದಾರೆ. ಪ್ರಧಾನಿ ಮೋದಿ ೯ ವರ್ಷದಲ್ಲಿ ಮಾಡಿದ್ದನ್ನು ಕಾಂಗ್ರೆಸ್ ೭೦ ವರ್ಷದ ಆಡಳಿತದಲ್ಲಿ ಮಾಡಲಿಲ್ಲ ಎಂದು ಹೇಳಿದರು.

ಮನೆಮನೆಗೆ ಶುದ್ದ ಕುಡಿವನೀರು, ಜನ್‌ಧನ್, ಜಲ್‌ಜೀವನ್ ಮಿಷನ್ ಇವೆಲ್ಲವೂ ಪ್ರಧಾನಿ ಮೋದಿಯ ಕೊಡುಗೆ. ಭಾರತ್ ಬ್ರಾಂಡ್ ಹೆಸರಲ್ಲಿ ೨೯ ರೂ. ಗೆ ಒದು ಕಿಲೋ ಅಕ್ಕಿ ನೀಡುತ್ತಿದೆ ಕೇಂದ್ರ. ೨೭ ರೂ.ಗೆ ೧ ಕಿಲೋ ಗೋದಿ ಹಿಟ್ಟು ನೀಡಲಾಗುತ್ತಿದೆ. ಭಾರತ್‌ದಾಲ್ ಸಹ ನೀಡಲಾಗಿದೆ. ವಿಕಸಿತ ಭಾರತದ ಕಲ್ಪನೆ ಪ್ರಧಾನಿ ಮೋದಿ ಅವರದ್ದಾಗಿದೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿ ಜೈಲಿಗೆ ಕಳುಹಿಸುತ್ತಿದೆ. ಹಿಂದೂ ದೇವಸ್ಥಾನಗಳ ಹುಂಡಿ ಹಣವನ್ನು ಕಿತ್ತು ಅನ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಎಂದರೆ ಅದೊಂದು ಕುಟುಂಬದ ಪಕ್ಷ. ಒಂದು ಸಮುದಾಯದ ತುಷ್ಠೀಕರಣದ ಪಕ್ಷ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೆಂದೇ ರಚಿಸಿಕೊಂಡಿದ್ದ ಇಂಡಿಯಾ ಮೈತ್ರಿಕೂಟ ಈಗಾಗಲೇ ಛಿದ್ರವಾಗಿದೆ. ಕಾಂಗ್ರೆಸ್ ಒಕ್ಕೂಟ ವ್ಯವಸ್ಥೆಯನ್ನೇ ತಿರಸ್ಕರಿಸುವ ಪಕ್ಷ. ಭಾರತವನ್ನು ತುಕಡೆ ತುಕಡೆ ಮಾಡುವ ಆಶಯ ಹೊದಿರುವ ಪಕ್ಷ. ಹೀಗಾಗಿ ಡಿ.ಕೆ.ಸುರೇಶ್ ಪ್ರತ್ಯೇಕ ದೇಶದ ಮಾತನ್ನಾಡಿದ್ದಾರೆ ಎಂದು ಲೇವಡಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾವಕ್ತಾರರುಗಳಾದ ಸಿ.ಹೆಚ್.ಲೋಕೇಶ್, ಹಿರೇಮಗಳೂರು ಪುಟ್ಟಸ್ವಾಮಿ, ಮಾಜಿ ನಗರಾಸಭಾಧ್ಯಕ್ಷ ಪುಷ್ಪರಾಜ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಮತ್ತಿತರರಿದ್ದರು.

A string of failures in the Congress government

About Author

Leave a Reply

Your email address will not be published. Required fields are marked *

You may have missed