September 20, 2024

ಗ್ಯಾರೆಂಟಿ ಯೋಜನೆಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

0

ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ನಗರದ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಗ್ಯಾರೆಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಂಡಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಾನುವಾರ ನಡೆಯುವ ಗ್ಯಾರೆಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಭಾಗಿಯಾಗಲಿದ್ದಾರೆ.

ಸುಭಾಷ್‌ಚಂದ್ರಬೋಸ್ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದಗೊಂಡಿದೆ. ವಿಶೇಷ ಆಹ್ವಾನಿತ ಗಣ್ಯ ಮತ್ತು ಗ್ಯಾರೆಂಟಿ ಯೋಜನೆಗಳ ಫಲಾನು ಭವಿಗಳು ಕುಳಿತುಕೊಳ್ಳಲು ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭದ್ರತೆಗೆ ಚಿಕ್ಕಮಗ ಳೂರು ಜಿಲ್ಲೆ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಉಡುಪಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಕೊಳ್ಳಲಾಗಿದೆ. ಯೋಜನೆ ಫಲಾನುಭವಿಗಳು ಹಾಗೂ ಪಕ್ಷದ ಕಾರ್ಯಕರ್ತರಿಗೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸ ಲಾಗಿದೆ.

ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಕಾಪ್ಟರ್ ಮೂಲಕ ಆಗಮಿಸುವ ಅವರು ನಗರದ ಐಡಿ ಎಸ್‌ಜಿ ಕಾಲೇಜು ಆವರಣ ದಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ಲಕ್ಯಾಕ್ರಾಸ್‌ನಲ್ಲಿ ಆಯೋಜಿಸಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ ೧ ಗಂಟೆಗೆ ಚಿಕ್ಕಮಗಳೂರು ನಗರಕ್ಕೆ ಆಗಮಿಸುವ ಅವರು ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿ ರುವ ಗ್ಯಾರೆಂಟಿ ಯೋಜನೆ ಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ತೆರಳುವರು. ಸಮಾವೇಶ ಕಾರ್ಯಕ್ರಮದ ಹಿನ್ನಲೆ ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ|ವಿಕ್ರಮ್ ಅಮಟೆ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸುಭಾಷ್‌ಚಂದ್ರ ಬೋಸ್ ಆಟದ ಮೈದಾನಕ್ಕೆ ತೆರಳಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ಕೆ.ಎಸ್.ಆನಂದ್ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ೧೫ ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲಾಧ್ಯಂತ ಫಲಾನುಭಗಿಗಳನ್ನು ಕರೆ ತರಲು ೩೦೦ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಗ್ಯಾರೆಂಟಿ ಯೋಜನೆಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಕುಡಿಯುವ ನೀರು ನೈರ್ಮಲ್ಯ ಇಲಾಖೆಗೆ ಸೇರಿದ ೪೭೫ ಕಾಮಗಾರಿಗಳಿಗೆ ಇದೇ ವೇಳೆ ಚಾಲನೆ ನೀಡುವರು. ಜತೆಗೆ ವಿವಿಧ ಇಲಾಖೆ ಗಳ ಫಲಾನುಭವಿಗಳಿಗೆ ಪರಿಕರಗಳ ವಿತರಣೆ ಮಾಡುವರು. ಗ್ಯಾರೆಂಟಿ ಯೋಜನೆಗಳ ಆಯ್ದ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ವೇದಿಕೆ ಕಲ್ಪಿಸಲಾಗಿದೆ.

ಮುಖ್ಯಮಂತ್ರಿಗಳ ಜಿಲ್ಲೆಗೆ ಆಗಮಿಸುವ ಹಿನ್ನಲೆಯಲ್ಲಿ ಸುಗಮ ಸಂಚಾರಕ್ಕಾಗಿ ವಾಹನಗಳ ಚಲಿಸುವ ಮಾರ್ಗ ಗಳನ್ನು ಬದಲಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚುವರಿ ಬಂದೋಬಸ್ತ್ ನಿಯೋಜಿಸಲಾಗಿದೆ.

Chief Minister Siddaramaiah for Guarantee Schemes Convention

About Author

Leave a Reply

Your email address will not be published. Required fields are marked *