September 20, 2024

ಇಂದು ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಸಮಾವೇಶ

0
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಭಾವಿ ಸಭೆ

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಭಾವಿ ಸಭೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಂಡಿರುವ ಗ್ಯಾರೆಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸುವ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವರು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು

ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೩ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಜಿಲ್ಲಾಡಳಿತದಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜ್ಯ ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆಸ್ಕಾಂ, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ತೆ, ಆಯುಷ್ ಇಲಾಖೆ, ಕೃಷಿ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗುವುದು ಎಂದರು

ಜಿಲ್ಲೆಯಲ್ಲಿ ೩೯೨.೮೪ ಕೋಟಿ ರು.ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ, ೨೪೪ ಕೋಟಿ ರು.ಗಳ ಕಾಮಗಾರಿಗಳನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ಸುಮಾರು ೧೦ ಸಾವಿರ ಆಸನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸುಮಾರು ೧೫ ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ ಎಂದು ತಿಳಿಸಿದರು

ಜಿಲ್ಲೆಯ ವಿವಿಧೆಡೆಯಿಂದ ಫಲಾನುಭವಿಗಳು ಆಗಮಿಸಲು ಸುಮಾರು ೩೦೦ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮ ಮಧ್ಯಾಹ್ನ ನಡೆಯುವುದರಿಂದ ಇಲ್ಲಿ ನೆರವೇರಲಿರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಗಳು ಜಿಲ್ಲೆಯ ವಿವಿಧೆಡೆಯಿಂದ ಶನಿವಾರವೇ ಚಿಕ್ಕಮಗಳೂರಿಗೆ ಆಗಮಿಸಿದ್ದರು.

ಕಾರ್ಯಕ್ರಮ ನಡೆಯಲಿರುವ ಸ್ಧಳದ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬಾರದೆಂಬ ಉದ್ದೇಶದಿಂದ ಕೆಲವೆಡೆ ನೋ ಪಾರ್ಕಿಂಗ್, ನೋ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ.

ಸಭೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಹೆಚ್.ಡಿ. ತಮ್ಮಯ್ಯ, ಜಿ.ಹೆಚ್. ಶ್ರೀನಿವಾಸ, ಕೆ.ಎಸ್. ಆನಂದ್, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್. ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಅಪರ ಜಿಲ್ಲಾಧಿಕಾರಿ ಕನಕರಡ್ಡಿ ನಾರಾಯಣರಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

District Level Guarantee Schemes Conference today

 

About Author

Leave a Reply

Your email address will not be published. Required fields are marked *