September 21, 2024

ಮೋದಿ ಸಾಧನೆಯಿಂದ ಲೋಕಸಭಾ ಚುನಾವಣೆಯಲ್ಲಿ ಅಂತರದ ಗೆಲುವು

0
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಕೋಟಾ ಶ್ರೀನಿವಾಸ್ ಪೂಜಾರಿ ಸುದ್ದಿಗೋಷ್ಠಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಕೋಟಾ ಶ್ರೀನಿವಾಸ್ ಪೂಜಾರಿ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರ ೧೦ ವ?ಗಳ ಸಾಧನೆ ಫಲಿತಾಂಶವಾಗಿ ಪರಿಣಮಿಸಲಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಅವರು ಇಂದು ಜಿಲ್ಲೆಗೆ ಆಗಮಿಸಿ, ಈ ಕ್ಷೇತ್ರದ ಅಭ್ಯರ್ಥಿಯಾಗಿ ಘೋ?ಣೆ ಆದ ನಂತರ ಇಂದು ಬೆಳಗ್ಗೆ ದತ್ತ ಪೀಠಕ್ಕೆ ಭೇಟಿ ನೀಡಿ ದತ್ತಾತ್ರೇಯ ಪಾದಕೆಗಳ ದರ್ಶನ ಪಡೆದು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ನಾಲ್ಕರಂತೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು ೧೯೦೦ ಮತಗಟ್ಟೆಗಳಿವೆ ಈ ಎಲ್ಲಾ ಮತಗಟ್ಟೆವರೆಗಿನ ಕಾರ್ಯಕರ್ತರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

ಕಳೆದ ೧೦ ವ?ಗಳಿಂದ ದೇಶದಲ್ಲಿ ವಿಶ್ವ ನಾಯಕರಾಗಿ ಹೊರಹೊಮ್ಮಿರುವ ನರೇಂದ್ರ ಮೋದಿಯವರು ದೇಶದ ರಕ್ಷಣೆಗೆ ಒತ್ತು ನೀಡಿರುವುದು ಎಲ್ಲಾ ಬಡವರಿಗೆ ಅಡುಗೆ ಅನಿಲ ಸಂಪರ್ಕ ಶೌಚಾಲಯ ಜಲಜೀವನ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿರುವುದು ಜಮ್ಮು ಕಾಶ್ಮೀರದ ೩೭೦ನೇ ವಿಧಿ ರದ್ದು ಮಾಡಿರುವ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಆಗಿರುವ ಬದಲಾವಣೆ ಈ ಚುನಾವಣೆಯಲ್ಲಿ ಭಾರಿ ಅಂತರದ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಹಾಲಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ಮತ್ತು ಪಕ್ಷದ ಗೊಂದಲದ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಇಂತಹ ಅಭಿಪ್ರಾಯಗಳು ಬರುವುದು ಸಹಜ ಚುನಾವಣೆ ಘೋ?ಣೆ ಆದಮೇಲೆ ಯಾವುದೇ ಗೊಂದಲಗಳು ಉಳಿಯುವುದಿಲ್ಲ ಶೋಭಾ ಕರಂದ್ಲಾಜೆ ಅವರು ತಮ್ಮ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿ ಸಂಪೂರ್ಣ ಸಹಕಾರ ನೀಡಿದ್ದಾರೆ ಸಿ.ಟಿ ರವಿ ಅವರು ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಈಗ ಪಕ್ಷದಲ್ಲಿ ಗೊಂದಲ ಅಥವಾ ಭಿನ್ನಾಭಿಪ್ರಾಯ ಇಲ್ಲ ಎಂದು ಸಮರ್ಥಿಸಿಕೊಂಡರು.

ಸಂವಿಧಾನ ತಿದ್ದುಪಡಿಗೆ ೪೦೦ ಸ್ಥಾನ ಗೆಲ್ಲಿಸಬೇಕೆಂಬ ಹೇಳಿಕೆ ನೀಡಿರುವ ಅನಂತಕುಮಾರ್ ಹೆಗಡೆ ಮಾತು ಹಾಗೂ ಸಿಟಿ ರವಿ ಈ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಅನಂತ್ ಕುಮಾರ್ ಹೆಗಡೆಯವರು ಯಾವ ಅರ್ಥದಲ್ಲಿ ಹೇಳಿದ್ದಾರೋ ತಮಗೆ ಗೊತ್ತಿಲ್ಲ ಆದರೆ ನರೇಂದ್ರ ಮೋದಿಯವರು ಬಾಬಾ ಸಾಹೇಬ್ ಅಂಬೇಡ್ಕರ್ ಆಶಯದಂತೆ ಸಂವಿಧಾನವನ್ನು ಮತ್ತ? ಬಲಪಡಿಸುತ್ತಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿ?ತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ, ಮಾಜಿ ಸಚಿವ ಡಿ.ಎನ್ ಜೀವ್‌ರಾಜ್, ಮಾಜಿ ಅಧ್ಯಕ್ಷ ಹೆಚ್.ಸಿ ಕಲ್ಮರುಡಪ್ಪ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ ಇದ್ದರು.

Marginal victory in Lok Sabha elections due to Modi’s performance

About Author

Leave a Reply

Your email address will not be published. Required fields are marked *