September 16, 2024

ಚುನಾವಣೆ ಅಕ್ರಮ ತಡೆಯಲು ಸಿ-ವಿಜಿಲ್ ತಂತ್ರಾಂಶ ಬಳಸಿ

0
ಚುನಾವಣಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಚುನಾವಣಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಚಿಕ್ಕಮಗಳೂರು: ಚುನಾವಣೆ ಅಕ್ರಮ ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದ್ದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು ೧೯೫೦ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರುಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ ಎಂದರು.

ಜಿಲ್ಲೆಯಾದ್ಯಂತ ಪರವಾನಗಿ ಹೊಂದಿರುವ ಹತ್ತು ಸಾವಿರಕ್ಕೂ ಹೆಚ್ಚು ಬಂದೂಕುಗಳ ಸನ್ನದುದಾರರಿದ್ದು, ಬಂದೂಕುಗಳನ್ನು ತಮ್ಮ ವ್ಯಾಪ್ತಿಯ ಸಂಬಂಧಿಸಿದ ಪೊಲೀಸ್ ಠಾಣೆಗೆ ಕೂಡಲೇ ಒಪ್ಪಿಸುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾತನಾಡಿ ಜಿಲ್ಲೆಯಾದ್ಯಂತ ಮುಕ್ತ ಮತ್ತು ನ್ಯಾಯ ಸಮ್ಮತ ಹಾಗೂ ನಿರ್ಭೀತಿಯಿಂದ ಮತದಾನ ಮಾಡಲು ಸೂಕ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗುತ್ತದೆ. ಈಗಾಗಲೇ ಸಿಆರ್‌ಪಿಎಫ್ ಬೆಟಾಲಿಯನ್‌ನ ಒಂದು ತಂಡ ಜಿಲ್ಲೆಗೆ ಆಗಮಿಸಿದೆ. ವಿಶೇಷವಾಗಿ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರಾದರೂ ಆಕ್ಷೇಪಾರ್ಹ ಅಂಶಗಳ ಬಗ್ಗೆ ಪ್ರಸಾರ ಮಾಡಿದ್ದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದ ಅವರು. ಜಿಲ್ಲೆಯ ಗಡಿ ಭಾಗಗಳಲ್ಲಿ ೨೨ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಮಾದರಿ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಲ್ಲುವಾಗಿ ಖರ್ಚು ವೆಚ್ಚಗಳ ತಂಡ, ಪ್ಲೇಯಿಂಗ್ ಸ್ಕ್ವಾಡ್ ತಂಡ, ವಿಎಸ್‌ಟಿ ತಂಡ, ವಿವಿಟಿ ತಂಡಗಳನ್ನು ರಚಿಸಲಾಗಿದೆ ಎಂದರು.

ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಬಿ. ಮಾತನಾಡಿ ಜಿಲ್ಲೆಯಾದ್ಯಂತ ಕಳೆದ ಆರು ತಿಂಗಳಿನಿಂದ ಮತದಾರರಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸುವ ಕುರಿತು ಹಾಗೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಲಾಗಿದೆ. ಇದೀಗ ಚುನಾವಣೆ ಘೋಷಣೆಯಾಗಿದ್ದರಿಂದ ಸ್ವೀಪ್ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು. ವಿಶೇಷವಾಗಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿದ್ದು, ಇಲ್ಲಿ ಮತದಾನ ಪ್ರಮಾಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕನಕರಡ್ಡಿ ನಾರಾಯಣರಡ್ಡಿ ಹಾಜರಿದ್ದರು.

Use C-Vigil software to prevent election fraud

 

About Author

Leave a Reply

Your email address will not be published. Required fields are marked *