September 19, 2024
ಮಾಜಿ ಸಚಿವ ಸಿ.ಟಿ ರವಿ

ಮಾಜಿ ಸಚಿವ ಸಿ.ಟಿ ರವಿ

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವಿಟ್ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಚುನಾವಣಾಧಿಕಾರಿ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಪೂರಿತ ಪೋಸ್ಟ್ ಮಾಡಿ ಸಾಗರಗಳ ಆಳವನ್ನ ಅಳೆಯಬಹುದು ರಾಹುಲ್ ಗಾಂಧಿ ದ್ವೇಷ ಕಂಡುಹಿಡಿಯಲಾಗಲ್ಲ ಹಿಂದೂ ಧರ್ಮದ ವಿರುದ್ಧದ ದ್ವೇಷ ಕಂಡುಹಿಡಿಯಲಾಗಲ್ಲ, ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕಿದೆ ಎಂದು ಟ್ವಿಟ್ ಮಾಡಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಪೋಸ್ಟ್ ಹಾಕಿದ್ದ ಸಿ.ಟಿ ರವಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಿಸಿಗೆ ಚುನಾವಣಾ ಆಯೋಗ ಸೂಚನೆ ಹಿನ್ನೆಲೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಜಯಲಕ್ಷಮಮ್ಮ ದೂರು ನೀಡಿದ್ದು ಇದರ ಅನ್ವಯ ಸಿ.ಟಿ ರವಿ ವಿರುದ್ಧ ಐಪಿಸಿ ಸೆಕ್ಷನ್ ೧೫೩ ಹಾಗೂ ಆರ್ ಪಿ ಆಕ್ಟ್ ೧೨೬ ಅನ್ವಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ

A case has been filed against former minister CT Ravi

About Author

Leave a Reply

Your email address will not be published. Required fields are marked *

You may have missed