September 20, 2024

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಗ್ಗೂಡಿ ಕೆಲಸ

0
ಜೆಡಿಎಸ್ ಕಾರ್ಯಾಧ್ಯಕ್ಷ ಎಸ್.ಎಲ್ ಭೋಜೇಗೌಡ ಸುದ್ದಿಗೋಷ್ಠಿ

ಜೆಡಿಎಸ್ ಕಾರ್ಯಾಧ್ಯಕ್ಷ ಎಸ್.ಎಲ್ ಭೋಜೇಗೌಡ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೆ ಎದುರಿಸಲು ಪಕ್ಷದಲ್ಲಿ ಒಡಂಬಡಿಕೆ ಆಗಿದ್ದು ಚುನಾವಣೆಯಲ್ಲಿ ಗೆಲ್ಲಲು ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಜೆಡಿಎಸ್ ಕಾರ್ಯಾಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಜೆಡಿಎಸ್ ವರಿ?ರ ಒಪ್ಪಂದದಂತೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಕಲ್ಪಿಸಲಾಗಿದ್ದು ಉಳಿದೆಲ್ಲ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವ ಮೂಲಕ ನರೇಂದ್ರಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಪ್ರಚಾರ ಕಾರ್ಯ ಕೈಗೊಂಡಿದ್ದು, ಪಕ್ಷದ ಆದೇಶದಂತೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಕ್ಷದ ಮೇಲ್ಮಟ್ಟದ ತೀರ್ಮಾನದಂತೆ ಒಗ್ಗೂಡಿ ಕೆಲಸ ಮಾಡುವಂತೆ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಮನವೊಲಿಸಿ ಮನವರಿಕೆ ಮಾಡುವುದಾಗಿ ತಿಳಿಸಿದ ಅವರು ಈ ಚುನಾವಣೆಯಲ್ಲಿ ಕೋಟ ಪೂಜಾರಿ ಅವರು ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸುವ ದೃಢವಿಶ್ವಾಸವಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೆಂಬಲಿಸಿದ್ದ ಬಗ್ಗೆ ಪ್ರಶ್ನೆಸಿದಾಗ ಉತ್ತರಿಸಿದ ಭೋಜೇಗೌಡರು ಆ ತೀರ್ಮಾನ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಸ್ಪ?ಪಡಿಸಿದರಲ್ಲದೆ, ಈ ಚುನಾವಣೆಯಲ್ಲಿ ಕೆಳಮಟ್ಟದಲ್ಲಿ ಮನಸ್ಸಿನಿಂದ ಹೊಂದಾಣಿಕೆ ಮಾಡಿಕೊಂಡು ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜಾನ್ ಅಜಿತ್‌ಕುಮಾರ್ ಮಾತನಾಡಿ, ಪಕ್ಷದ ವರಿ?ರಾದ ಹೆಚ್.ಡಿ ದೇವೇಗೌಡರು ಮತ್ತು ಎಚ್.ಡಿ ಕುಮಾರಸ್ವಾಮಿ ಅವರ ಆದೇಶದಂತೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಒಟ್ಟಾಗಿ ಚುನಾವಣೆ ಎದುರಿಸುವುದಾಗಿ ತಿಳಿಸಿದ ಅವರು ಮೂರು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇವೆ ಎಂದು ಹೇಳಿದರು.

ನಾಳೆಯಿಂದ ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಸಿ.ಕೆ ಮೂರ್ತಿ, ಎ.ಸಿ ಕುಮಾರಗೌಡ, ಲಕ್ಷ್ಮಣ, ಇರ್ಷಾದ್ ಅಹಮದ್, ದೇವಿಪ್ರಸಾದ್ ಮತ್ತಿತರರು ಇದ್ದರು.

BJP-JDS working together in Lok Sabha elections

About Author

Leave a Reply

Your email address will not be published. Required fields are marked *