September 19, 2024

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಅದ್ದೂರಿ ಸ್ವಾಗತ

0
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಜಿಲ್ಲೆಗೆ ಆಗಮಿಸುತ್ತಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಾ.೨೬ ರಂದು ನಗರದ ಎಐಟಿ ಸಭಾಂಗಣದಲ್ಲಿ ಅದ್ದೂರಿ ಸ್ವಾಗತ ಸಭೆ ಏರ್ಪಡಿಸಿರುವುದಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಳ, ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಅವರ ಗೆಲುವಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಸೇರಿದಂತೆ ವಿವಿಧ ಘಟಕದ ಎಲ್ಲ ಪದಾಧಿಕಾರಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇವೆ ಎಂದರು.

ಕಳೆದ ೧೦ ವರ್ಷದಲ್ಲಿ ಈ ಕ್ಷೇತ್ರ ಪ್ರತಿನಿಸಿದ್ದ ಕು.ಶೋಭಾ ಕರಂದ್ಲಾಜೆ ಅವರು ಜಿಲ್ಲೆಯ ಅಭಿವೃದ್ಧಿಕಡೆಗಣಿಸಿದ್ದಾರೆಂಬ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರೆ ಅವರನ್ನು ಬಹಿಷ್ಕರಿಸಿ ಬೇರೆ ಜಿಲ್ಲೆಗೆ ಕಳುಹಿಸಿದರು. ಸಂಸದೆ, ಕೃಷಿ ಸಚಿವರಾಗಿ ರೈತ ಬೆಳೆಗಾರರ ಸಂಕಷ್ಟ ಆಲಿಸಲಿಲ್ಲ. ಕೇಂದ್ರದಿಂದ ಯಾವುದೇ ಯೋಜನೆ ತರಲಿಲ್ಲ. ಬೆಳೆಗಾರರಿಗೆ ಮರಣ ಶಾಸನವಾಗಿರುವ ಸರ್ಫೇಸಿ ಕಾಯಿದೆಯನ್ನು ಬದಲಾಯಿಸುವ ಪ್ರಯತ್ನ ಮಾಡಲಿಲ್ಲಎಂದು ಆರೋಪಿಸಿದರು.

ಮಾನವ ಮತ್ತು ಪ್ರಾಣಿ ಸಂಘರ್ಷದ ಬಗ್ಗೆ ಸದನದಲ್ಲಿ ಮಾತಾಡಲಿಲ್ಲ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡುವಂತಹ ಕಾಯಿದೆ ಇದ್ದರೂ ಅದನ್ನು ಅನುಷ್ಠಾನ ಮಾಡಲಿಲ್ಲ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದರೆ ಕೇಂದ್ರ ಸರಕಾರದ ವೈಫಲ್ಯ ಎಂದೇ ತಿಳಿಯಬೇಕು ಎಂದು ದೂರಿದರು.

ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ೭೨ ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಯಿತು. ಕಾಫಿ ಬೆಳೆಗಾರರಿಗೆ ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕಾಯಿದೆ ಬಗ್ಗೆ ಮೊದಲು ಪ್ರಸ್ತಾಪ ಮಾಡಿದ್ದೇ ಕಾಂಗ್ರೆಸ್, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶವನ್ನು ಜಾರಿ ಮಾಡಿದ್ದಾರೆ. ಹೀಗಾಗಿ ಮತದಾರರು ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾವಧಿಯ ಕಾರ್ಯ ಯೋಜನೆಗಳನ್ನು ತುಲನೆ ಮಾಡಲಿದ್ದಾರೆ ಎಂದರು.

ಹೀಗಾಗಿಯೇ ಐದಕ್ಕೆ ಐದೂ ಕ್ಷೇತ್ರಗಳನ್ನು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನೀಡಿದ್ದಾರೆ. ಭಾವನೆಗಿಂತ ಜನರ ಬದುಕಿನ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ರೂಪಿಸಿರುವುದನ್ನು ಜನತೆ ಮನಗಂಡು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಮುಖಂಡರಾದ ರೂಬಿನ್‌ಮೊಸೆಸ್, ಶಿವಾನಂದಸ್ವಾಮಿ, ತನೋಜ್‌ನಾಯ್ಡು, ಪ್ರವೀಣ್‌ಬೆಟ್ಟಗೆರೆ, ಅನ್ಸರ್ ಮತ್ತಿತರರಿದ್ದರು

Congress candidate Jayaprakash Hegde received a grand welcome

About Author

Leave a Reply

Your email address will not be published. Required fields are marked *

You may have missed