September 19, 2024

ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯಪ್ರಕಾಶ್ ಹೆಗ್ಡೆ ಗೆಲುವು

0
ಕಾಂಗ್ರೆಸ್ ಮುಖಂಡ ಕೆ.ಭರತ್ ಪತ್ರಿಕಾಗೋಷ್ಠಿ

ಕಾಂಗ್ರೆಸ್ ಮುಖಂಡ ಕೆ.ಭರತ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪಂಚಗ್ಯಾರಂಟಿಗಳ ಜತೆಗೆ ಜಿಲ್ಲೆಯ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಿರುವುದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆಯವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೆ.ಭರತ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಲೋಕಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಸಮರ್ಥವಾಗಿ ಮನವರಿಕೆ ಮಾಡುವಂತಹ ಸಾಮರ್ಥ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಯ್ಕೆ ಸಂದರ್ಭೋಚಿತವಾಗಿದೆ ಎಂದು ಹೇಳಿದರು.

ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಅನುಷ್ಠಾನ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರಲ್ಲಿ ಮನವಿ ನೀಡಿ ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅಧಿಕಾರ ನೀಡಬೇಕು ಎಂದು ಕೋರಲಾಗಿತ್ತು ಎಂದರು.

ಅದಕ್ಕೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದ್ದಾರೆ. ಕೃಷಿಗೆ ಸಂಬಂಧಿಸಿದಂತಹ ಸಮಸ್ಯೆಗಳಿಗೆ ಸಚಿವ ಚೆಲುವರಾಯಸ್ವಾಮಿ ಅವರು ಸ್ಪಂದಿಸಿದ್ದಾರೆ. ಸರಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಿಕ್ಷಣ ಸಚಿವ ಮಧಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ರಾಜ್ಯದ ಸರಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ೩.೮೦ ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.

ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಮಂಕಾಳವೈದ್ಯ ಅವರಲ್ಲಿ ಕೆರೆ ಒತ್ತುವರಿ ತೆರವು ಮಾಡುವಂತೆ ಕೋರಲಾಗಿತ್ತು ಅದಕ್ಕೆ ಸ್ಪಂದಿಸಿ ಜಿಲ್ಲೆಯ ಹಲವು ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಪೊಲೀಸ್‌ವಸತಿ ಗೃಹಗಳನ್ನು ಕಲ್ಪಿಸಿಕೊಡಬೇಕು ಎಂದು ಡಾ.ಜಿ.ಪರಮೇಶ್ವರ್ ಅವರಲ್ಲಿ ಮನವಿ ನೀಡಿದಾಗ ಅದಕ್ಕೆ ಸ್ಪಂದಿಸಿ ಗೃಹ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬ್ಯಾಂಕ್ ಓಟಿಎಸ್ ಸಮಸ್ಯೆ ಪರಿಹರಿಸಲು ಮನವಿ ನೀಡಲಾಗಿತ್ತು. ಈ ಬಗ್ಗೆ ಲೀಡ್ ಬ್ಯಾಂಕ್ ಮತ್ತು ಜಿಲ್ಲಾಡಳಿತಕ್ಕೆ ಈ ಕುರಿತು ನಿರ್ದೇಶನ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಪ್ಸರ್ ಅಹ್ಮದ್, ಸೋಮಶೇಖರ್, ಹಾಲಪ್ಪ, ಬಾಬುಜಾನ್ ಇದ್ದರು.

Jayaprakash Hegde won the Lok Sabha election by a margin of two times

About Author

Leave a Reply

Your email address will not be published. Required fields are marked *

You may have missed