September 19, 2024

ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರ ಸ್ವಚ್ಚಗೊಳಿಸುವ ಕೆಲಸ

0
ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಸುದ್ದಿಗೋಷ್ಠಿ

ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರವನ್ನು ಸ್ವಚ್ಚಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರವನ್ನು ವಾಷಿಂಗ್ ಮಿಷನ್‌ನಿಂದ ಸ್ವಚ್ಚಗೊಳಿಸುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತದಲ್ಲಿ ದೇಶವನ್ನು ಬಡತನಕ್ಕೆ ದೂಡಿದ್ದು, ಜನರನ್ನು ಬಡತನದಿಂದ ಮೇಲೆತ್ತುವ ಕೆಲಸವನ್ನು ಪ್ರಧಾನಿ ನರೇಂದ್ರಮೋದಿ ಮಾಡುತ್ತಿದ್ದಾರೆ. ವಿಶ್ವದಲ್ಲೇ ಭಾರತವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ಕೆಲಸಕ್ಕೆ ಮುಂದಾಗಿದ್ದಾರೆಂದು ತಿಳಿಸಿದರು.

ದೇಶ, ರಾಜ್ಯ,ಜಿಲ್ಲೆ ಮತ್ತು ನಗರಗಳ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿಮಾಡಿದ ಅವರು, ಕಾಂಗ್ರೆಸ್‌ನವರು ದೇಶದಲ್ಲಿ ಅಧಿಕಾರಕ್ಕೆ ಬರುತ್ತೇವೆಂಬ ಕನಸುಕಾಣುವುದನ್ನು ಮರೆತುಬಿಡಿ ಎಂದು ಹೇಳಿದರು.

ಮಾಜಿ ಸಚಿವ ಸಿ.ಟಿ.ರವಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ೬ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳನ್ನುಮಾಡಿಸಿದ್ದಾರೆ. ಮೆಡಿಕಲ್‌ಕಾಲೇಜು,ಸೂಪರ್ ಸ್ಪೆಷಲಿಟಿಆಸ್ಪತ್ರೆ,ಲೋಕೋಪಯೋಗಿಕಟ್ಟಡ, ಅರಣ್ಯ ಭವನ, ರಸ್ತೆ ಅಭಿವೃದ್ಧಿಗಳು ನಮ್ಮ ಕಣ್ಮುಂದೆ ಇದೆ. ಸಂಸದೆ ಶೋಭಾಕರಂದ್ಲಾಜೆ ಅವಧಿಯಲೂ ಕೋಟ್ಯಂತರ ರೂ. ಅಭಿವೃದ್ಧಿ ಕೆಲಸಗಳಾಗಿ. ಸದ್ಯದಲ್ಲೆ ಅವರು ನಗರಕ್ಕೆ ಆಗಮಿಸಿ ಕೆಲಸಗಳ ಮಾಹಿತಿ ನೀಡಿಲಿದ್ದಾರೆಂದರು.

ಮಾಜಿ ಸಚಿವ ಸಿ.ಟಿ.ರವಿ ಅಧಿಕಾರಕ್ಕೆ ಚಡಪಡಿಸುವ ವ್ಯಕ್ತಿಯಲ್ಲ. ಅವರು ಕ್ರಿಯಾಶೀಲ ವ್ಯಕ್ತಿತ್ವದ ಪಕ್ಷದ ಕಟ್ಟಾಳು.ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವರಲ್ಲ, ಪಕ್ಷದ ತತ್ವ, ಸಿದ್ಧಾಂತಕ್ಕೆ ಕಟಿಬದ್ಧರಾಗಿ ಕೆಲಸ ಮಾಡುವವರು.ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳದೆ ಪಕ್ಷನಿಷ್ಠೆಯೊಂದಿಗೆ ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯ ಉಗ್ರರ ಅಡಗು ತಾಣವಾಗಿದ್ದು, ಇತ್ತೀಚಿನ ನಡೆದಿರುವ ಘಟನೆಗಳು ಪುಷ್ಟಿನೀಡುತ್ತಿವೆ.ಪ್ರಧಾನಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಕಾಂಗ್ರೆಸ್ ಮುಖಂಡರು ಟೀಕಿಸುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.

ರಾಜ್ಯ ಹಿಂದುಳಿದ ವರ್ಗ ಮೋರ್ಚಾದ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ಖಜಾಂಚಿ ನಾರಾಯಣಗೌಡ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಬಿಜೆಪಿ ಅಧ್ಯಕ್ಷ ಕೆಂಪನಹಳ್ಳಿ ಪುಷ್ಪಾರಾಜ್ ಇದ್ದರು.

Work to clean up corruption by the central government

About Author

Leave a Reply

Your email address will not be published. Required fields are marked *

You may have missed