September 19, 2024

ಗುಣಮಟ್ಟದ ಶಿಕ್ಷಣದಿಂದ ಗುಲಾಮಗಿರಿ ಮೆಟ್ಟಿ ನಿಲ್ಲಲು ಸಾಧ್ಯ

0
ಜೆಡಿಎಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಜೆಡಿಎಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಚಿಕ್ಕಮಗಳೂರು: ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಎಂದು ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಅಂಗ ವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾನುವಾರ ಅವರು ಮಾತನಾಡಿದರು.

ದೇಶಕ್ಕೆ ಸಂವಿಧಾನವನ್ನು ನೀಡಿದ ಸಮಿತಿಯ ಅಧ್ಯಕ್ಷರಾಗಿ, ಸಮಾಜಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಇತಿಹಾಸಕಾರರಾಗಿ ಹೀಗೆ ಅವರಿಗೆ ತಿಳಿಯದ ಕ್ಷೇತ್ರವಿರಲಿಲ್ಲ. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಎಲ್ಲರ ಜೊತೆಗೆ ಕರೆದೊಯ್ಯುವ ಉದ್ದೇಶ ಅವರದಾಗಿತ್ತು ಎಂದರು.

ಹಿಂಸಾ ಮಾರ್ಗವನ್ನು ತೊರೆದು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಡಾ. ಅಂಬೇಡ್ಕರ್ ಜನರಿಗೆ ತಿಳಿಹೇಳುತ್ತಿದ್ದರು. ಬದುಕಬೇಕು ಮತ್ತು ಎಲ್ಲರನ್ನೂ ಬದುಕಲು ಬಿಡಬೇಕು ಎಂಬುದೇ ಮಹಾತ್ಮರ ಧ್ಯೇಯವಾ ಗಿತ್ತು. ಇದನ್ನು ನಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಬಡತನದಲ್ಲಿ ಜನಿಸಿ ಹಲವು, ನೋವುಗಳ ಮಧ್ಯೆ ತಮ್ಮ ವಿದ್ಯಾಭ್ಯಾಸ ಪಡೆದ ಅಂಬೇಡ್ಕರ್ ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ನಡೆಸಿ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತ ಸಂವಿಧಾನವನ್ನು ಭಾರತಕ್ಕೆ ಸಮರ್ಪಣೆ ಮಾಡಿದ ಕೀರ್ತಿಯಿದೆ ಎಂದರು.

ಜೆಡಿಎಸ್ ನಗರ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ ಮಾತನಾಡಿ ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನಾಯಕ ಅಂಬೇಡ್ಕರ್. ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಸಿಗುತ್ತಾರೆಯೇ ಹೊರತು ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ನಾವೆಲ್ಲರೂ ಬಾಳಿಬೇಕಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ಪಕ್ಷದ ಮುಖಂಡರುಗಳಾದ ಆನಂದೇಗೌಡ, ಮಾನು ಮಿರಾಂಡ, ಇರ್ಷಾದ್, ಜಯಂತಿ, ಹೆಚ್.ಎಸ್.ಮಂಜಪ್ಪ, ಶ್ರೀನಿವಾಸ್, ಹರಿಗುಪ್ತ, ಕುಸುಮ, ರತ್ನ ಮತ್ತಿತರರು ಹಾಜರಿದ್ದರು.

Constitution architect in JDS office Dr|| BR Ambedkar Birthday Celebration

About Author

Leave a Reply

Your email address will not be published. Required fields are marked *

You may have missed