September 8, 2024
ಅಗಲಿದ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ನುಡಿನಮನ

ಅಗಲಿದ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ನುಡಿನಮನ

ಚಿಕ್ಕಮಗಳೂರು: ಶಾಸಕರಾಗಿ, ಸಂಸದರಾಗಿ ರಾಜಕೀಯ ತುಂಬು ಜೀವನ ನಡೆಸಿರುವ ಶ್ರೀನಿವಾಸ್ ಪ್ರಸಾದ್ ಅವರ ನಿಧನ ರಾಜಕೀಯ ಕ್ಷೇತ್ರಕ್ಕೆ ಹಾಗೂ ಸಾರ್ವಜನಿಕರಿಗೆ ತುಂಬಲಾರದ ನ? ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್ ಹೇಳಿದರು.

ಅವರು ಆಜಾದ್ ವೃತ್ತದಲ್ಲಿ ಎಸ್‌ಸಿ ಮೋರ್ಚಾ ವತಿಯಿಂದ ಏರ್ಪಡಿಸಲಾಗಿದ್ದ ಮಾಜಿ ಸಚಿವ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.

ಸಾಮಾಜಿಕ ನ್ಯಾಯ ಕೊಡುವಲ್ಲಿ ಮುಂಚೂಣಿ ಪಾತ್ರ ವಹಿಸಿರುವ ಅವರು ರಾಜ್ಯದಲ್ಲಿ ದಲಿತ ಸಮುದಾಯದ ಬಂಧುವಾಗಿ ಅವರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅಜಾತ ಶತೃವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಬಣ್ಣಿಸಿದರು.
ಇವರ ನಿಧನದಿಂದ ದುಃಖತಪ್ತರಾಗಿರುವ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಹಿರೇಮಗಳೂರು ರೇವನಾಥ್ ಮಾತನಾಡಿ ಶ್ರೀನಿವಾಸ್ ಪ್ರಸಾದ್ ರವರ ಅಗಲಿಕೆಯಿಂದ ದಲಿತ ಸಮುದಾಯಕ್ಕೆ ತುಂಬಲಾರದ ನ?ವಾಗಿದ್ದು ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ ಮಾತನಾಡಿ, ದಿವಂಗತ ಶ್ರೀನಿವಾಸ್ ಪ್ರಸಾದ್ ರವರು ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದಾಗ ಅನೇಕ ಬದಲಾವಣೆ ಮಾರ್ಪಾಡುಗಳನ್ನು ತಂದಿದ್ದು ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯಲ್ಲಿ ಆಧುನಿಕತೆಯನ್ನು ಅಳವಡಿಸಿದ್ದನ್ನು ಸ್ಮರಿಸಿದರು.

ಅವರು ಕೆಲಸ ಮಾಡಿದ ಕಡೆಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದರು. ಕಂದಾಯ ಸಚಿವರಾಗಿದ್ದಾಗ ಅರಣ್ಯ ಭೂಮಿ ಒತ್ತುವರಿ ಬಗ್ಗೆ ಹಾಗೂ ಬಡವರ ಬೇರೆ ಬೇರೆ ಸಮಸ್ಯೆಗಳ ಸಂಕ?ಗಳನ್ನು ಪರಿಹರಿಸಿದ ವ್ಯಕ್ತಿಯಾಗಿದ್ದರು ಎಂದು ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶ ಬರುವ ಮುನ್ನ ನಮ್ಮನ್ನೆಲ್ಲ ಬಿಟ್ಟು ಅಗಲಿರುವುದು ಎಲ್ಲರಿಗೂ ತುಂಬಾ ನೋವುಂಟುಮಾಡಿದೆ ಜಿಲ್ಲಾ ಬಿಜೆಪಿ ಅತ್ಯಂತ ಭಕ್ತಿ ಪೂರ್ವಕವಾಗಿ ಭಾವನಾತ್ಮಕವಾಗಿ ಶ್ರೀನಿವಾಸ್ ಪ್ರಸಾದ್ ರವರಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜೆ ಡಿ ಲೋಕೇಶ್ ಕೇಶವಮೂರ್ತಿ ರಾಜಕುಮಾರ್ ಹಿರೇಮಗಳೂರು ಪುಟ್ಟಸ್ವಾಮಿ ಕೆ ಪಿ ವೆಂಕಟೇಶ್ ಹಿರೇಮಗಳೂರು ರೇವ ನಾಥ್ ಧರ್ಮ ನವೀನ ರವಿನಾಯ್ಕ ಇದ್ದರು

Tribute to departed MP Srinivas Prasad

 

About Author

Leave a Reply

Your email address will not be published. Required fields are marked *

You may have missed