September 19, 2024
ಕಟ್ಟಿಮನಿ ಗ್ರಾಮದ ಬಳಿ ಜೋರಾಗಿ ಸುರಿದ ಮಳೆಗೆ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೂ ಮರ ಬಿದ್ದಿದೆ.

ಕಟ್ಟಿಮನಿ ಗ್ರಾಮದ ಬಳಿ ಜೋರಾಗಿ ಸುರಿದ ಮಳೆಗೆ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೂ ಮರ ಬಿದ್ದಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮಹಿಳೆಯೊಬ್ಬರು ಬಲಿಯಾಗಿದ್ದು, ಇಲ್ಲಿಯ ತನಕ ಮಳೆಗೆ ಮೂರು ಮಂದಿ ಮೃತ ಪಟ್ಟಿದ್ದಾರೆ.

ಎನ್‌ಆರ್‌ಪುರ ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಜೋರಾಗಿ ಸುರಿದ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (೪೮) ಮೃತ ದುರ್ದೈವಿ.
ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಮರಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ಮಳೆಯ ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ.

ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

A woman died due to heavy rain in the district

About Author

Leave a Reply

Your email address will not be published. Required fields are marked *

You may have missed