September 8, 2024

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಬಿಜೆಪಿ ಒತ್ತಾಯ

0
ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರುಗಳು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

????????????????????????????????????

ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರುಗಳು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್‌ರವರ ಸಾವಿನ ತನಿಖೆ ನಡೆಸಿ, ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾ ಯಿಸಿದರು.

ರಾಜ್ಯ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಸುಮಾರು ೧೮೭ ಕೋಟಿ ರೂ. ಅಕ್ರಮ ಹಣ ವರ್ಗಾವಣೆಯ ಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವೆಸಗಿರುವುದು ಸ್ಪಷ್ಟವಾಗಿ ವ್ಯಕ್ತವಾಗುತ್ತಿದೆ. ವರ್ಗಾವಣೆ ದಂಧೆ ಯಲ್ಲಿ ತೊಡಗಿರುವ ಸಚಿವ ನಾಗೇಂದ್ರ ನೇರವಾಗಿ ವರ್ಗಾವಣೆಗೆ ಮೌಖಿಕ ಆದೇಶ ನೀಡಿರುವುದು ಭ್ರಷ್ಟ ಚಾರಕ್ಕೆ ಜೀವಂತ ನಿದರ್ಶನವಾಗಿದೆ ಎಂದರು.

ಸಚಿವರ ಒತ್ತಡಕ್ಕೆ ಮಣಿದು ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಹಣ ವರ್ಗಾವಣೆಗೊಳಿ ಸಿದ ಪರಿಣಾಮ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಸ್ಪಷ್ಟವಾಗಿದ್ದು, ಅಧೀ ಕ್ಷಕರ ಸಾವಿನ ಪ್ರಕರಣದಲ್ಲಿ ಸಚಿವರ ಪ್ರಚೋದನೆಯಿದ್ದ ಹಿನ್ನೆಲೆಯಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಬಂ ಧಿಸಬೇಕು ಎಂದು ಆಗ್ರಹಿಸಿದರು.

ಹಣ ವರ್ಗಾವಣೆ ದಂಧೆಯಲ್ಲಿ ಮೌಖಿಕ ಆದೇಶ ನೀಡಿರುವ ಸಚಿವರೇ ಒಪ್ಪಿಗೆ ನೀಡಿದ್ದರೂ ಮುಖ್ಯ ಮಂತ್ರಿ ಸೇರಿದಂತೆ ಸಚಿವ ಸಂಪುಟವು ರಕ್ಷಣೆಗೆ ನಿಂತಿರುವುದು ಕಾಂಗ್ರೆಸ್ ಸರ್ಕಾರದ ನೈತಿಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗಾಗಿ ತಕ್ಷಣವೇ ಸಚಿವರನ್ನು ವಜಾಗೊಳಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಕುಟು ಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದರು.

ಪ್ರಕರಣದ ಹಿಂದೆ ಶಾಮೀಲಾಗಿರುವ ಪ್ರತಿಯೊಬ್ಬರ ವಿರುದ್ಧ ಕೇಸು ದಾಖಲಿಸಿ, ಆತ್ಮಹತ್ಯೆಗೊಳ ಗಾದ ಚಂದ್ರಶೇಖರ್ ಸಾವಿನ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಧುಕುಮಾರ್, ಶಂಕರ್, ಸಹ ಪ್ರಮುಖ್ ಕೇಶವ, ಗ್ರಾಮಾಂ ತರ ಮಂಡಲ ಸಹ ವಕ್ತರ ಹಂಪಯ್ಯ, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿ.ಆರ್.ಜಗದೀಶ, ಮುಖಂಡ ರಾದ ಜೀವನ್ ರಂಗನಾಥ್, ರಾಜಕುಮಾರ, ರೇವನಾಥ್, ಧರ್ಮರಾಜು, ಮಾರ್ಗೋಭೋವಿ, ಚನ್ನಕೇ ಶವ, ನವೀನ್, ನಂಜುಂಡಪ್ಪ ಉಪಸ್ಥಿತರಿದ್ದರು.

BJP insists on investigation of money laundering case

About Author

Leave a Reply

Your email address will not be published. Required fields are marked *

You may have missed