September 8, 2024

ಜಿಲ್ಲಾ ಸರಕಾರಿ ನೌಕರರ ಸಂಘದ ನೌಕರರ ಕ್ರೀಡಾಕೂಟ

0
ಜಿಲ್ಲಾ ಸರಕಾರಿ ನೌಕರರ ಸಂಘದ ನೌಕರರ ಕ್ರೀಡಾಕೂಟ

ಜಿಲ್ಲಾ ಸರಕಾರಿ ನೌಕರರ ಸಂಘದ ನೌಕರರ ಕ್ರೀಡಾಕೂಟ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಪ್ರಕ್ರಿಯೆಗಳನ್ನು ಯಶಸ್ವಿಗೊಳಿಸಿದ್ದು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸಾಧನೆ ಹಿಂದೆ ಸರಕಾರಿ ಸಿಬ್ಬಂದಿ, ಶಿಕ್ಷಕರ ಶ್ರಮ ಇದೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಜಿಲ್ಲಾಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಜಿ.ಪಂ. ಸಿಇಓ ಅವರು ಉತ್ಸಾಹಿ ಇದ್ದಾರೆ. ಸ್ವೀಪ್ ಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದೆ. ಇದರ ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ಶೇ.೨ ರಷ್ಟು ಮತದಾನ ಹೆಚ್ಚಾಗಿದೆ. ಭೌಗೋಳಿಕವಾಗಿ ಜಿಲ್ಲೆ ಅತೀ ಹೆಚ್ಚು ವಿಸ್ತೀರ್ಣ ಹೊಂದಿದೆ. ಆದರೂ ಎಲ್ಲ ಸರಕಾರಿ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಿರುವುದಕ್ಕೆ ಅಭಿನಂದಿಸುತ್ತೇವೆ ಎಂದರು.

ಅದರ ಬೆನ್ನಲ್ಲೇ ೧೦ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ೧೦ ನೇ ಸ್ಥಾನವನ್ನು ನಮ್ಮ ಜಿಲ್ಲೆ ಗಳಿಸಿದೆ. ಯಾವಾಗಲೂ ೧೫ ಸ್ಥಾನಕ್ಕಿಂತಲೂ ಕೆಳಮಟ್ಟದಲ್ಲೇ ಫಲಿತಾಂಶ ಇರುತ್ತಿತ್ತು. ಆದರೆ, ಈ ಬಾರಿ ಶಿಕ್ಷಕರು, ಸಹಾಯಕ ಸಿಬ್ಬಂದಿ, ಶಿಕ್ಷಣ ಇಲಾಖೆ ಅಕಾರಿಗಳು, ವಿದ್ಯಾರ್ಥಿ ಪೋಷಕರು ಎಲ್ಲರ ಸಹಕಾರ ಮತ್ತು ಶ್ರಮದಿಂದ ೧೦ನೇ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದರು.

ಕಳೆದ ಎರಡು-ಮೂರು ತಿಂಗಳಿಂದ ಒತ್ತಡದಲ್ಲಿ ಸರಕಾರಿ ನೌಕರರು ಕೆಲಸ ಮಾಡಿದ್ದಾರೆ. ಈಗ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸೂಕ್ತ ಸಮಯವಾಗಿದೆ. ಇಲ್ಲಿ ಜಯಗಳಿಸಿದವರು ರಾಜ್ಯಮಟ್ಟದಲ್ಲೂ ಯಶಸ್ಸುಗಳಿಸುವಂತಾಗಲಿ ಎಂದರು.

ಕಂದಾಯ, ಶಿಕ್ಷಣ ಸೇರಿದಂತೆ ಎಲ್ಲ ಇಲಾಖೆಗಳಲ್ಲಿನ ಸಿಬ್ಬಂದಿ ಒಳ್ಳೆಯ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದೀರಿ. ಹಲವು ಕಾರ್ಯಕ್ರಮಗಳಲ್ಲಿ ನಾವು ಉತ್ತಮ ಸಾಧನೆ ಮಾಡುತ್ತಿದ್ದೇವೆ. ಲಸಿಕೆ ಕಾರ್ಯಕ್ರಮದಲ್ಲಿ ರಾಜಕ್ಕೆ ಮೊದಲ ಸ್ಥಾನದಲ್ಲಿದ್ದೇವೆ. ಇದೆಲ್ಲವೂ ತಂಡವಾಗಿ ನಿರ್ವಹಿಸಿರುವ ಶ್ರಮದ ಪರಿಣಾಮವಾಗಿದೆ ಎಂದರು.ನಾವು ನಿರ್ದೇಶನ ನೀಡುವುದು ಸುಲಭ, ಅದನ್ನು ಜಾರಿಗೆ ತರುವುದು ತುಂಬಾ ಕ್ಲಿಷ್ಟಕರವಾಗಿರುತ್ತದೆ. ಅದನ್ನು ಯಶಸ್ವಿಯಾಗಿ ಸಿಬ್ಬಂದಿ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಮಾತನಾಡಿ, ಇನ್ನೆರಡು ತಿಂಗಳಲ್ಲಿ ಸಂಘದ ಪದಾಕಾರಿಗಳ ಅಕಾರವ ೫ ವರ್ಷ ಪೂರ್ಣಗೊಳ್ಳಲಿದೆ. ಈ ಅವಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಲಾಗಿದೆ. ರಾಜ್ಯ ಸಂಘಕ್ಕೆ ಪ್ರತಿರ್ಸ್ಪ ಎನ್ನುವ ರೀತಿಯಲ್ಲಿ ಜಿಲ್ಲಾ ಸಂಘವು ಅನೇಕ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯ ಜನರ ಮನಸ್ಸಿನಲ್ಲಿ ಉಳಿಯುವಂತೆ ಮಾಡಲಾಗಿದೆ.ಇದಕ್ಕೆ ಸಂಪೂರ್ಣ ಸಹಕಾರ ನೀಡಿದ ಎಲ್ಲ ಪದಾಕಾರಿಗಳು, ಸರಕಾರಿ ನೌಕರರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಡಾ. ಬಿ.ಗೋಪಾಲಕೃಷ್ಣ, ಯುವಜನಸೇವಾ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಳ್ಳಿ, ರಾಜ್ಯ ಪರಿಷತ್ ಸದಸ್ಯ ಪೂರ್ಣೇಶ್, ಜಿಲ್ಲಾ ಕಾರ್ಯದರ್ಶಿ ಎಂ.ಡಿ.ಮಾರುತಿ ಪ್ರತಾಪ್, ಜಿಲ್ಲಾ ಖಜಾಂಚಿ ಡಾ. ಕೆ.ಎಂ.ಜಗದೀಶ್, ಗೌರವ ಉಪಾಧ್ಯಕ್ಷ ಮಂಜುನಾಥ್ ಸ್ವಾಮಿ ಇತರರು ಇದ್ದರು.

District Government Employees Association Employees’ Sports Festival

 

 

About Author

Leave a Reply

Your email address will not be published. Required fields are marked *

You may have missed