September 19, 2024
ರಸ್ತೆಮಧ್ಯೆ ಹೊತ್ತಿ ಉರಿದ ಸ್ವಿಫ್ಟ್ ಡಿಸೈರ್

ರಸ್ತೆಮಧ್ಯೆ ಹೊತ್ತಿ ಉರಿದ ಸ್ವಿಫ್ಟ್ ಡಿಸೈರ್

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರೊಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ.

ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ.

ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಾಶವಾಗಿದ್ದು, ಸ್ಥಳಕ್ಕಾಗಮಿಸಿದಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Swift Desire burning in the middle of the road

 

About Author

Leave a Reply

Your email address will not be published. Required fields are marked *

You may have missed