September 19, 2024

ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಿ

0
ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆ

ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲ ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಬೇಲಿ ನಿರ್ಮಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಪುನರುಜ್ಜೀವನಗೊಳಿಸುವಂತೆ ತಿಳಿಸಿದ ಅವರು ಕೆರೆ ಜಾಗ ಒತ್ತುವರಿ ಕಂಡು ಬಂದರೆ ಅವುಗಳ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ಜಿಲ್ಲೆಯಲ್ಲಿ ೧೭೨೯ ಕೆರೆಗಳಿದ್ದು, ೧೭,೭೪೪ ಎಕರೆ ವಿಸ್ತೀರ್ಣ ಹೊಂದಿದೆ. ಈಗಾಗಲೇ ೧೭೨೭ ಕೆರೆಗಳ ಅಳತೆ ಪೂರ್ಣಗೊಂಡಿದ್ದು, ಇನ್ನೂ ೨ ಕೆರೆಗಳ ಅಳತೆ ಮಾಡುವುದು ಬಾಕಿ ಇದೆ. ಅಳತೆಯಾಗಿರುವ ಕೆರೆಗಳ ಪೈಕಿ ೭೫೬ ಕೆರೆಗಳು ಒತ್ತುವರಿಯಾಗಿವೆ. ಈಗಾಗಲೇ ೧೧೯ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ೬೩೭ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಅವುಗಳ ಒತ್ತುವರಿ ತೆರವಿಗೆ ಶೀಘ್ರದಲ್ಲಿ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಕಾರ್ಯ ನಡೆಯುತ್ತಿದೆ. ೯೮,೩೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಈಗಾಗಲೇ ೪೬೮೧ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಮಾಹಿತಿ ನೀಡಿ ಜಿಲ್ಲೆಯಲ್ಲಿ ೧೭,೧೮೭.೯೮ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ಗುರಿ ಹೊಂದಲಾಗಿದ್ದು, ಈಗಾಗಲೇ ೭,೪೮೬ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ, ಆಲೂಗಡ್ಡೆ,  ಟೊಮ್ಯಾಟೊ, ಮೆಣಸಿಕಾಯಿ ಇತರೆ ತರಕಾರಿ ಬೆಳೆಗಳ ಬಿತ್ತನೆ ಕಾರ್ಯ ನಡೆದಿದೆ. ಮಳೆ, ಗಾಳಿಯಿಂದ ೭೯.೦೧ ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಪರಿಹಾರ ಮೊತ್ತ ರೂ. ೧೫.೦೭೮ ಲಕ್ಷ ಎಂದು ಅಂದಾಜಿಸಲಾಗಿದೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ ೦೧ ರಿಂದ ಜೂನ್ ೦೭ ರವರೆಗೆ ೪ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದೆ. ಇವುಗಳಲ್ಲಿ ೦೧ ತಿರಸ್ಕೃತಗೊಂಡಿದೆ. ಪರಿಹಾರ ಮೊತ್ತ ಪಾವತಿಸಲು ೦೨ ಬಾಕಿಯಿದ್ದು, ೦೧ ಪ್ರಕರಣ ಸಮಿತಿ ತೀರ್ಮಾನಕ್ಕೆ ಬಾಕಿಯಿದೆ ಎಂದ ಅವರು ಜಿಲ್ಲೆಯಲ್ಲಿ ಮಳೆ, ಗಾಳಿಯಿಂದಾಗಿ ೨,೧೬೮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ರೂ. ೩೩೮ ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ, ಜಿಲ್ಲೆಯಲ್ಲಿ ೧,೮೫೮ ಅಂಗನವಾಡಿ ಕೇಂದ್ರಗಳಿದ್ದು, ಇವುಗಳಲ್ಲಿ ೧,೫೯೬ ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ನಡೆಯುತ್ತಿವೆ. ೫೦ ಬಾಡಿಗೆ ಕಟ್ಟಡದಲ್ಲಿ, ೨೧೨ ಇತರೆ ಸರ್ಕಾರಿ ಕಟ್ಟಡಗಳಲ್ಲಿ ನಡೆಯುತ್ತಿದ್ದು, ೧೬ ಅಂಗನವಾಡಿಗಳಿಗೆ ನಿವೇಶನ ಲಭ್ಯವಿದ್ದು, ೮೯ ಅಂಗನವಾಡಿ ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಜಿಲ್ಲೆಯಲ್ಲಿ ೨೨೪ ವಿದ್ಯಾರ್ಥಿನಿಲಯಗಳಿದ್ದು, ೧೬೯ ವಿದ್ಯಾರ್ಥಿನಿಲಯಗಳು ಸ್ವಂತ ಕಟ್ಟಡ, ೧೮ ಉಚಿತ ಕಟ್ಟಡ ಹಾಗೂ ೩೭ ವಿದ್ಯಾರ್ಥಿನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದೆ. ೨೬,೨೩೫ ವಿದ್ಯಾರ್ಥಿಗಳು ಈ ವಿದ್ಯಾರ್ಥಿನಿಲಯಗಳಲ್ಲಿ ಇದ್ದಾರೆ ಎಂದು ತಿಳಿಸಿದರು.
ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಹಾಗೂ ರಸ್ತೆಗಳಿಗೆ ಹಾನಿಯಾದರೆ ತಕ್ಷಣ ಸರಿಪಡಿಸಲು ಕ್ರಮವಹಿಸಬೇಕು ದೂರುಗಳಿಗೆ ಅಸ್ಪದ ಕೊಡಬಾರದು ಎಂದ ಅವರು ಸರ್ಕಾರಿ ಶಾಲೆಗಳ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ದುರಸ್ತಿಯಲ್ಲಿರುವ ಅಂಗನವಾಡಿ ಹಾಗೂ ಶಾಲೆಗಳ ಕಟ್ಟಡಗಳನ್ನು ಗುರುತಿಸಿ ದುರಸ್ತಿ ಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕ ರಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Survey all the lakes in the district and clear the encroachment

About Author

Leave a Reply

Your email address will not be published. Required fields are marked *

You may have missed