September 19, 2024

ಜನಪರ ವ್ಯಕ್ತಿ ಜಯಪ್ರಕಾಶ್ ಹೆಗ್ಡೆ ಸೋಲು ಆತ್ಮಾವಲೋಕನ ಅಗತ್ಯ

0
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಪತ್ರಿಕಾಗೋಷ್ಠಿ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ನೈರುತ್ಯ ವಿಧಾನ ಪರಿಷತ್ ಈ ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವಿರತ ಶ್ರಮ ಹಾಕಿದ್ದರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಾಗಿದ್ದು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿನ ಮತದಾರರ ತೀರ್ಪನ್ನು ಅತ್ಯಂತ ಗೌರವದಿಂದ ಸ್ವೀಕರಿಸುತ್ತೇವೆ ಎಂದರು.

ಕಾಂಗ್ರೆಸ್ ಜತೆ ಕೈಜೋಡಿಸಿದ ಇಂಡಿಯಾ ಮಿತ್ರ ಪಕ್ಷಗಳು, ಪ್ರಗತಿಪರ, ದಲಿತ, ರೈತ ಸಂಘಟನೆಗಳು ನಮಗೆ ಬೆಂಬಲ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜನಾದೇಶದ ಅಡಿಯಲ್ಲಿ ನೂತನ ಸರಕಾರ ರಚನೆಯಾಗಿದೆ ಎಂದರು.

ಅದೇ ರೀತಿ ಇಂಡಿಯಾ ರಚನಾತ್ಮಕವಾದ ಪ್ರತಿಪಕ್ಷದ ಸ್ಥಾನದಲ್ಲಿ ಕೂರಲಿದೆ. ಪ್ರತಿ ಪಕ್ಷದಲ್ಲಿದ್ದುಕೊಂಡು ಜವಾಬ್ದಾರಿಯುತ ಸ್ಥಾನವನ್ನು ಇಂಡಿಯಾ ಕೂಟ ನಿರ್ವಹಿಸಲಿದೆ ಎಂದು ಹೇಳಿದರು. ನಮ್ಮ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ಸರಳ, ಸಜ್ಜನಿಕೆಯ ವ್ಯಕ್ತಿ. ಜನಸಾಮಾನ್ಯರ ಸಮಸ್ಯೆಗಳಿಗೆ ದನಿಯಾಗಿದ್ದವರು ಎಂದು ಹೇಳಿದರು.

ಅಂತವರಿಗೆ ಏಕೆ ಸೋಲಾಯಿತು ಎಂಬ ಬಗ್ಗೆ ಆತ್ಮಾವಲೋಕನ ಸಭೆಯಲ್ಲಿ ಚರ್ಚಿಸಲಿದ್ದೇವೆ. ಆಗಿರುವ ತಪ್ಪುಗಳನ್ನು ಮುಂದೆ ಸರಿಪಡಿಸಿಕೊಂಡು ಹೋಗಲಿದ್ದೇವೆ ಎಂದು ಹೇಳಿದ ಅವರು ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದಿಸುತ್ತೇನೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ ಜನರ ಸಮಸ್ಯೆಗಳಿಗೆ ಸದನದಲ್ಲಿ ಧ್ವನಿಯಾಗಲಿ ಎಂದು ಒತ್ತಾಯಿಸಿದರು.

ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಜನ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸರಕಾರದ ಎಲ್ಲ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ನಿರೀಕ್ಷೆಗೂ ಮೀರಿ ಸ್ಪಂದಿಸಲು ಕಾಂಗ್ರೆಸ್ ಬದ್ದವಾಗಿದೆ ಎಂದು ಭರವಸೆ ನೀಡಿದರು.

ಇನ್ನೂ ೪ ವರ್ಷ ರಾಜ್ಯ ಸರಕಾರದ ಆಡಳಿತವಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜನಪರವಾದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಫ್ತು ಮತ್ತು ಕೃಷಿ ಸಂಸ್ಕರಣೆ ಮಂಡಳಿ ಅಧ್ಯಕ್ಷ ಬಿ.ಎಚ್.ಹರೀಶ್, ಮುಖಂಡರಾದ ಮಲ್ಲೇಶಸ್ವಾಮಿ, ಜಾವಿದ್ ಅಹ್ಮದ್, ರಘು, ತನೋಜ್‌ನಾಯ್ಡು ಇದ್ದರು.

The defeat of public figure Jayaprakash Hegde calls for introspection

About Author

Leave a Reply

Your email address will not be published. Required fields are marked *

You may have missed