September 19, 2024

ಇಂದಿನಿಂದ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨

0
ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಕ್ಕೆ ಸಿದ್ದತೆ ಕುರಿತು ನಡೆದ ಪೂರ್ವ ಭಾವಿ ಸಭೆ

ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಕ್ಕೆ ಸಿದ್ದತೆ ಕುರಿತು ನಡೆದ ಪೂರ್ವ ಭಾವಿ ಸಭೆ

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೨ಕ್ಕೆ ಸಂಬಂಧಿಸಿದಂತೆ ಪರೀಕ್ಷೆ ಜೂ.೧೪ ರಿಂದ ಜೂ.೨೨ರವರೆಗೆ ಜಿಲ್ಲೆಯಲ್ಲಿ ಒಟ್ಟು ೯ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು ೨೧೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಕ್ಕೆ ಸಿದ್ದತೆ ಕುರಿತು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಸಿ.ಸಿ ಕ್ಯಾಮರಾ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಯು.ಪಿ.ಎಸ್ ವ್ಯವಸ್ಥೆ ಇರಬೇಕು ಎಂದು ತಿಳಿಸಿದ ಅವರು. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪಾದ ನೀಡದೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಹಾಗೂ ಪರೀಕ್ಷೆಯಲ್ಲಿ ಅಕ್ರಮ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪರೀಕ್ಷೆಯ ಸಿದ್ದತೆ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿ. ಪರೀಕ್ಷಾ ಕಾರ್ಯಕ್ಕೆ ೯ ಅಧೀಕ್ಷಕರು, ೨ ಉಪಅಧೀಕ್ಷಕರು, ೮ ಕಸ್ಟೋಡಿಯನ್, ೮ ಸ್ಥಾನಿಕ ಜಾಗೃತ ದಳ, ೧೦೦ ಕೊಠಡಿ ಮೇಲ್ಪಿಚಾರಕರು, ೮ ಮೊಬೈಲ್ ಸ್ವಾಧೀನಾಧಿಕಾರಿಗಳು, ೧೦ ವಿಷಯ ನಿರ್ವಾಹಕರು, ಜಿಲ್ಲಾ ಮತ್ತು ತಾಲ್ಲೂಕು ಜಾಗೃತ ದಳ ಹಾಗೂ ವೆಬ್ ಕ್ಯಾಮರಾ ವೀಕ್ಷಣಾ ತಂಡ, ೮ ಮಾರ್ಗಾಧಿಕಾರಿಗಳು,ಡ್ರೈವರ್, ೨೬ ಪೊಲೀಸ್ ಸಿಬ್ಬಂದಿ ಮತ್ತು ೮ ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು ೧೭೦ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

ಈಗಾಗಲೇ ಪರೀಕ್ಷಾ ಕೇಂದ್ರಗಳು ಅಂತಿಮಗೊಂಡಿದ್ದು, ಪ್ರವೇಶ ಪತ್ರವನ್ನು ಎಲ್ಲಾ ಮಕ್ಕಳು ಡೌನ್ ಲೋಡ್ ಮಾಡಿಕೊಂಡಿರುತ್ತಾರೆ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ಕೊಠಡಿ ಸುರಕ್ಷತೆ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರದ ಸುತ್ತ ಪರೀಕ್ಷಾ ದಿನ ಮತ್ತು ಸಮಯದಲ್ಲಿ ೧೪೪ ಸೆಕ್ಷನ್ ಜಾರಿಯಲ್ಲಿರುತ್ತದೆ. ಪರೀಕ್ಷಾ ದಿನದಂದು ನಿರಂತರ ವಿದ್ಯುತ್ ವ್ಯವಸ್ಥ ಕಲ್ಪಿಸಲು ಸಿದ್ದತೆ ಮಾಡಲಾಗಿದೆ. ಸಿ.ಸಿ ಕ್ಯಾಮರಾ ಎಲ್ಲಾ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ೯ ಕೇಂದ್ರಗಳ ವೀಕ್ಷಣೆಗೆ ಜಿಲ್ಲಾ ಪಂಚಾಯಿತಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು

ಪ್ರಶ್ನೆಪತ್ರಿಕೆಯನ್ನು ಟ್ರಜರಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಪರೀಕ್ಷಾ ಕೇಂದ್ರದ ಭದ್ರತೆಗಾಗಿ ಪೊಲೀಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಸಿಬ್ಬಂದಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು, ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳು, ಹಾಜರಿದ್ದರು.

Pre-preliminary meeting on preparation for SSLC exam-2 held at Zilla Panchayat mini hall

About Author

Leave a Reply

Your email address will not be published. Required fields are marked *

You may have missed