September 19, 2024

ಇಂಜಿನಿಯರ್ – ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

0
ಇಂಜಿನಿಯರ್ - ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ಇಂಜಿನಿಯರ್ - ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿಕ್ಕಮಗಳೂರು: ನಗರದ ಸಮೀಪದ ಇಂಜಿನಿಯರ್ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ದಿಢೀರ್ ಭೇಟಿ ನೀಡಿ ಹಾಸ್ಟೆಲ್‍ನ ಸುವ್ಯವಸ್ಥೆ ಹಾಗೂ ಸ್ವಚ್ಚತೆಗೆ ಬಗ್ಗೆ ಪರಿಶೀಲನೆ ನಡೆಸಿದರು.

ಜಿ.ಪಂ. ಸಿಇಓ ಬಿ.ಗೋಪಾಲಕೃಷ್ಣ ಹಾಗೂ ಅಧಿಕಾರಿ ವೃಂದದವರೊಂದಿಗೆ ನಗರದ ವಿವಿಧ ಹಾಸ್ಟೆಲ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲನೆ ನಡೆಸಿ ಡೆಂಗ್ಯೂ ಪ್ರಕರ ಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಮೊದಲಿಗೆ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಎಐಟಿ ಸಮೀಪ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಇಂ ಜಿನಿಯರ್ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಆರೋಗ್ಯ ಸಮಸ್ಯೆ ಎದುರಾಗಂತೆ ಮುಂಜಾಗ್ರತೆ ವಹಿಸಬೇಕು. ಊಟದ ವ್ಯವಸ್ಥೆ ಶುಚಿತ್ವದಿಂದ ಕೂಡಿರಬೇಕು ಎಂದ ಅವರು ಬಳಿಕ ವಿದ್ಯಾರ್ಥಿನಿಯೊಂದಿಗೆ ಕೆಲಕಾಲ ಚರ್ಚಿಸಿ ನ್ಯೂನ್ಯತೆಗಳಿದ್ದಲ್ಲಿ ಮುಕ್ತವಾಗಿ ಚರ್ಚಿಸಬಹುದು ಎಂದರು.

ಫಿಜಿಕ್, ಕೆಮಿಸ್ಟ್ರಿ, ಜಾವ, ಫೈಥನಾ ವಿಷಯಗಳು ಇನ್ನಷ್ಟು ಅವಶ್ಯವಿರುವ ಹಿನ್ನೆಲೆಯಲ್ಲಿ ವಿದ್ಯಾ ರ್ಥಿಗಳು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ ಮೇರೆಗೆ ಸದ್ಯದಲ್ಲೇ ಆನ್‍ಲೈನ್ ತರಗತಿಗಳಿಗೆ ವ್ಯವಸ್ಥೆ ಕಲ್ಪಿಸಲಾ ಗುವುದು. ಅಲ್ಲದೇ ಹಾಸ್ಟೆಲ್‍ನ ಗ್ರಂಥಾಲಯಗಳಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಬಿಡುವಿನ ಸಮಯದಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಇತ್ತೀಚಿನ ಡೆಂಗ್ಯೂ ಪ್ರಕರಣಗಳು ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಜಾಗೃತ ರಾಗಿರಬೇಕು. ನೀರು ನಿಲ್ಲುವಂತಹ ಜಾಗಗಳಲ್ಲಿ ಹೆಚ್ಚು ಸಮಯವ್ಯರ್ಥ ಮಾಡದೇ ತಮ್ಮ ಕೆಲಸ ಕಾರ್ಯಗ ಳನ್ನು ಮುಗಿಸಿಕೊಳ್ಳಬೇಕು. ಮುಂಜಾಗ್ರತೆಯಿಂದ ತಮ್ಮ ಶೌಚಾಲಯ ಹಾಗೂ ಆವರಣಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದರು.

ತದನಂತರ ವಿದ್ಯಾರ್ಥಿಗಳ ಕೊಠಡಿಗಳಿಗೆ ಭೇಟಿ ನೀಡಿ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು ವಿದ್ಯುತ್ ದೀಪಗಳನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು. ಕೊಠಡಿಗಳಲ್ಲಿ ಹಾಸಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮಪರ್ಕವಾಗಿದೆ ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ, ಔಷಧಿಗಳ ಲಭ್ಯತೆ, ಹಾಗೂ ಸ್ವಚ್ಚತೆಯ ಬಗ್ಗೆ ಪರಿಶೀಲಿಸಿದರು. ನಂತರ ಡೆಗ್ಯೂ ಕಾಯಿಲೆ ಹರಡುತ್ತಿದ್ದು, ಮುಂಜಾಗ್ರತೆ ವಹಿಸುವಂತೆ ತಿಳಿ ಸಿದರು. ನಂತರ ಆಸ್ಪತ್ರೆಯಲ್ಲಿದ್ದ ರೋಗಿಗಳೊಂದಿಗೆ ಚರ್ಚಿಸಿ, ಅವರಿಗೆ ಅಗತ್ಯವಾದ ಚಿಕಿತ್ಸೆ ಲಭಿಸುತ್ತಿದೆ ಎಂಬ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೀಶ್, ಜಿಲ್ಲಾ ಆರೋಗ್ಯ ಅಧಿಕಾರಿ ಗಳು, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.

Engineer – District Collector visits pre-graduation college student dormitories

About Author

Leave a Reply

Your email address will not be published. Required fields are marked *

You may have missed