September 7, 2024

ಇಂಧನ ಬೆಲೆ ಏರಿಕೆ ಖಂಡಿಸಿ ಕಾರಿಗೆಹಗ್ಗ ಕಟ್ಟಿ ವಿನೂತನ ಪ್ರತಿಭಟನೆ

0
ಇಂಧನ ಬೆಲೆ ಏರಿಕೆ ಖಂಡಿಸಿ ಕಾರಿಗೆಹಗ್ಗ ಕಟ್ಟಿ ವಿನೂತನ ಪ್ರತಿಭಟನೆ

ಇಂಧನ ಬೆಲೆ ಏರಿಕೆ ಖಂಡಿಸಿ ಕಾರಿಗೆಹಗ್ಗ ಕಟ್ಟಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ತಳ್ಳು ಮಾಡೆಲ್ ಗಾಡಿ ಇದು ತಳ್ಳಿ ಎಂದು ಘೋಷಣೆ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ವಿವಿಧ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಈ ಮೂಲಕ ಜನ ವಿರೋಧಿ ಆಡಳಿತ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ, ರಾಜ್ಯ ಸರ್ಕಾರ ಲೋಕಸಭಾ ಫಲಿತಾಂಶ ಬರುವುದನ್ನೇ ಕಾಯುತ್ತಿತ್ತು. ಫಲಿತಾಂಶ ಬಂದ ಕೆಲವೇ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ಬರೆ ನೀಡಿದೆ ಎಂದು ದೂರಿದರು.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾದಾಕ್ಷಣ ಟ್ರಾನ್ಸ್ ಪೋರ್ಟೇಷನ್ ದರವೂ ಹೆಚ್ಚಾಗುತ್ತದೆ. ಆಗ ಅನಿವಾರ್ಯವಾಗಿ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ಈ ರೀತಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರು ಬದುಕುವುದು ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರಂತರವಾಗಿ ಬೆಲೆ ಏರಿಕೆ ಮಾಡುವುದನ್ನೇ ತನ್ನ ನೀತಿಯನ್ನಾಗಿಸಿ ಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಹಾಗೂ ಸಚಿವರು ಮತ್ತು ಶಾಸಕರ ಖಜಾನೆಯನ್ನು ತುಂಬಿಸಿಕೊಳ್ಳುವ ಉದ್ದೇಶದಿಂದಲೇ ಬೆಲೆ ಏರಿಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರತಿದಿನ ಕೊಲೆ, ಅತ್ಯಾಚಾರಗಳು ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ದುರಾಡಳಿತ ತುಂಬಾ ದಿನ ನಡೆಯುವುದಿಲ್ಲ. ಜನಸಾಮಾನ್ಯರು ಎಚ್ಚೆತ್ತುಕೊಂಡು ಸರ್ಕಾರಕ್ಕೆ ಬುದ್ಧಿ ಕಲಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ೧೩ ತಿಂಗಳಲ್ಲಿ ಹಲವು ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿಯೊಂದು ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ರೈತರು ಹಾಗೂ ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸ ಮಾಡಲಾಗಿದೆ. ಛಾಪ ಕಾಗದ ಹಾಗೂ ಪಹಣಿ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ನರೇಂದ್ರ, ಕೆ.ಪಿ. ವೆಂಕಟೇಶ್, ಕೋಟೆ ರಂಗನಾಥ್, ಜೆಸೆಂತಾ ಅನಿಲ್ ಕುಮಾರ್ ಮತ್ತಿತರರಿದ್ದರು.

An innovative protest by tying a rope to a car to condemn the rise in fuel prices

 

 

About Author

Leave a Reply

Your email address will not be published. Required fields are marked *

You may have missed