September 19, 2024

೧೦ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಜಾಥಾ

0
೧೦ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಜಾಥಾ

೧೦ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಜಾಥಾ

ಚಿಕ್ಕಮಗಳೂರು: ಯೋಗವು ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಮಾಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ೧೦ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ನಗರದ ತಾಲ್ಲೂಕು ಕಛೇರಿ ಆವರಣದಲ್ಲಿ ಯೋಗ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಕ ಯೋಗಕ್ಷೇಮಕ್ಕೆ ಅಸಂಖ್ಯಾತ ಪ್ರಯೋಜನಗಳನ್ನು ನೀಡುತ್ತದೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗವು ಮಹತ್ವದ್ದಾಗಿದೆ. ಸಾರ್ವಜನಿಕರಲ್ಲಿ ಯೋಗದ ಮಹತ್ವದ ಕುರಿತು ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದೆ ನಮ್ಮ ಉದ್ದೇಶ ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಮಾತನಾಡಿ ಯೋಗ ನಡಿಗೆಯು ನಮ್ಮ ಜೀವನದ ಒಂದು ಭಾಗವಾಗಿದ್ದು, ಇದರಿಂದ ಎಲ್ಲಾ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ದೂರಮಾಡಬಹುದು ಯೋಗದ ನಿಯಮಿತ ಅಭ್ಯಾಸದಿಂದ ಶಿಸ್ತುಬದ್ಧ ಮತ್ತು ಸಂತೋಷದ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಹಾಗೂ ಮಾನಸಿಕ ಒತ್ತಡದಿಂದ ದೂರ ಉಳಿದು ರಕ್ತದೊತ್ತಡ ಕಡಿಮೆ ಮಾಡಿ ಆರೋಗ್ಯವಂತರಾಗಿರಲು ಸಹಕರಿಸುತ್ತದೆ ಎಂದ ಅವರು ಪ್ರತಿಯೊಬ್ಬರು ದಿನ ನಿತ್ಯ ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಿ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಸೀಮಾ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಜನರು ಒತ್ತಡ ಹಾಗೂ ಇತರೆ ಗಡುವುಗಳ ನಡುವೆ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ. ತಮ್ಮ ಮನಸ್ಸಿನ ಮೇಲೆ ಹಿಡಿತವಿದ್ದರೆ ಇತರರೊಂದಿಗೆ ಉತ್ತಮ ಬಾಂಧವ್ಯದಿಂದರಬಹುದು. ಯೋಗ ಮಾಡುವುದರಿಂದ ಇವುಗಳೆಲ್ಲವು ಸಾಧ್ಯ. ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ ಕುಮಾರಿ ಈಶ್ವರಿ ವಿಶ್ವ ವಿದ್ಯಾನಿಲಯದ ಭಾಗ್ಯಕ್ಕ, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಜರಿದ್ದರು.

Yoga Jatha as part of 10th International Yoga Day

About Author

Leave a Reply

Your email address will not be published. Required fields are marked *

You may have missed