September 19, 2024

ಕೆಂಪೇಗೌಡರ ಜಯಂತಿಗಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

0
ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಸುದ್ದಿಗೋಷ್ಟಿ

ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಸುದ್ದಿಗೋಷ್ಟಿ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಜೂನ್ ೨೭ ರಂದು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಇವರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿದೆ. ೮ನೇ ತರಗತಿ ಮಕ್ಕಳಿಗೆ ಚಿತ್ರಕಲಾಸ್ಪರ್ಧೆ, ೯ನೇ ತರಗತಿಯವರಿಗೆ ರಂಗೋಲಿಸ್ಪರ್ಧೆ, ೧೦ನೇ ತರಗತಿಯವರಿಗೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜೂನ್ ೨೫ ಮತ್ತು ೨೬ ರಂದು ಸ್ಪರ್ಧೆಗಳು ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು.

ಥಮ ಬಹುಮಾನ ೩ಸಾವಿರ, ದ್ವಿತೀಯಬಹುಮಾನ ೨ಸಾವಿರ ರೂ. ತೃತೀಯ ಬಹುಮಾನ ೧ಸಾವಿರ ರೂ. ನಗದು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದರು.

ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿ ತಾಲೂಕಿಗೆ ೧ ಲಕ್ಷ ರೂ. ಬಿಡುಗಡೆಮಾಡಲಾಗಿದೆ.ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬಗ್ಗೆ ಹೆಚ್ಚು ಮಾಹಿತಿಯನ್ನು ನೀಡಲು ಈಗಾಗಲೇ ನಿರ್ದೇಶನ ನೀಡಲಾಗಿದೆ.ಜಯಂತಿ ಕುರಿತು ಈಗಾಗಲೇ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ. ಜೂನ್ ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕೆಂಪೇಗೌಡರ ಕುರಿತು ಮಾತನಾಡಲು ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆಂದು ಹೇಳಿದರು.

ಕೆಂಪೇಗೌಡರು ಮುಂದಾಲೋಚನೆಯಿಂದ ರಾಜಧಾನಿಯನ್ನು ನಿರ್ಮಿಸಿದ್ದಾರೆ. ನೀರಾವರಿ ಮತ್ತು ಪರಿಸರಕ್ಕೂ ಹೆಚ್ಚಿನ ಒತ್ತು ನೀಡಿದ್ದಾರೆ. ನಾವುಗಳು ಸ್ಥಳೀಯವಾಗಿ ಪರಸರಕ್ಕೆ ಸಂಬಂಧಿಸಿದಂತೆ ಯೋಜನೆಗಳನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ಕಳೆದ ವರ್ಷ ಬರಪರಿಸ್ಥಿತಿಯನ್ನು ನೋಡಿದ್ದೇವೆ. ಹಾಗಾಗಿ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ದಲ್ಚಿತ್‌ಕುಮಾರ್, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆ ಉಪನಿರ್ದೇಶಕ ಡಾ.ರಮೇಶ್ ಇದ್ದರು.

Various competitions for students for Kempegowda Jayanti

About Author

Leave a Reply

Your email address will not be published. Required fields are marked *

You may have missed