September 20, 2024

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ

0
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ

ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ೧೮೫೮ ಅಂಗನವಾಡಿ ಕೇಂದ್ರಗಳಿದ್ದು, ಇವುಗಳಲ್ಲಿ ೧೫೯೬ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿ, ೧೬ ಪಂಚಾಯತ್ ಕಟ್ಟಡಗಳಲ್ಲಿ, ೪೬ ಸಮುದಾಯ ಭವನದಲ್ಲಿ, ೧೨೦ ಶಾಲೆ ಕಟ್ಟಡಗಳಲ್ಲಿ ಹಾಗೂ ೬೦ ಬಾಡಿಗೆ ಕಟ್ಟಡಗಳಲ್ಲಿ ಹಾಗೂ ೨೦ ಅಂಗನವಾಡಿ ಕೇಂದ್ರಗಳು ಪರ್ಯಾಯ ವ್ಯವಸ್ಥೆಯಲ್ಲಿ ಅಂದರೆ ಬಾಡಿಗೆ ರಹಿತ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಇವುಗಳ ಪೈಕಿ ಬಹುತೇಕ ಕಟ್ಟಡಗಳ ದುರಸ್ತಿ ಅಗತ್ಯವಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ದುರಸ್ತಿಗೊಳಿಸಿ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ಅಡುಗೆ ಹಾಗೂ ಆಹಾರ ದಾಸ್ತಾನುಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥಿತವಾಗಿರಬೇಕು ಮಕ್ಕಳ ಒಳಾಂಗಣ ಹಾಗೂ ಹೊರಾಂಗಣ ಆಟದ ವ್ಯವಸ್ಥೆಯನ್ನು ಕಲ್ಪಿಸಬೇಕು. ಮಕ್ಕಳಿಗೆ ಕಾಯಿಸಿ ಆರಿಸಿದ ಶುದ್ಧ ನೀರನ್ನು ನೀಡಬೇಕ ಅಲ್ಲದೇ ಮಕ್ಕಳ ಆಟದ ಪರಿಕರಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವಂತೆ, ನೀರು ಶೇಖರಿಸುವ ಪಾತ್ರೆಗಳು ಹಾಗೂ ವಿವಿಧ ವಸ್ತುಗಳನ್ನು ಶುದ್ಧವಾಗಿರಿಸಿಕೊಳ್ಳುವಂತೆ ಸೂಚಿಸಿದ್ದಾರೆ.

ಸರ್ಕಾರದಿಂದ ವಿತರಿಸುವ ಆಹಾರ ಪದಾರ್ಥಗಳನ್ನು ಉತ್ತಮವಾಗಿ ಶೋಧಿಸಿ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ನೀಡಬೇಕು.

ಮಕ್ಕಳಿಗೆ ಇಷ್ಟವಾಗುವಂತೆ ಅನ್ನ ಹಾಗೂ ಬೇಳೆ ಕಾಳುಗಳ ಸಾಂಬರ್ ಮೊಳಕೆ ಕಾಳುಗಳ ಪದಾರ್ಥವನ್ನು ನೀಡಬೇಕು ಅಲ್ಲದೇ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Member of District Legal Services Authority visits Anganwadi Centres

About Author

Leave a Reply

Your email address will not be published. Required fields are marked *