September 19, 2024

ಡೆಂಗ್ಯೂಜ್ವರ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಸಭೆ

0
ಡೆಂಗ್ಯೂಜ್ವರ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಸಭೆ

ಡೆಂಗ್ಯೂಜ್ವರ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಸಭೆ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಬಗ್ಗೆ ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಂತರ ಇಲಾಖೆ ಸಹಯೋಗದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ತಿಳಿಸಿದರು.

ಅವರು ಇಂದು ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಈ ಕುರಿತು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈಗಾಗಲೇ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳ ಸುತ್ತ-ಮುತ್ತ ಪರಿಸರವನ್ನು ಸ್ವಚ್ಚಗೊಳಿಸಿ ಫಾಗಿಂಗ್ ಮಾಡುವ ಮೂಲಕ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ ಎಂದರು.

ನಗರಸಭೆಯಿಂದ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಫಾಗಿಂಗ್ ಮಾಡಿ, ಸೊಳ್ಳೆ ಬರದಂತೆ ತಡೆಗಟ್ಟಲು ಸರ್ಕಾರ ಆದೇಶ ಮಾಡಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನಿರಂತರವಾಗಿ ಲಾರ್ವಾ ಸರ್ವೆ ಮಾಡುತ್ತಿದ್ದು, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಇಲಾಖೆ ಸಿಬ್ಬಂದಿ ಡೆಂಗ್ಯೂ ತಡೆಗಟ್ಟಲು ಶ್ರಮಿಸುತ್ತಿದ್ದಾರೆಂದು ಹೇಳಿದರು.

ಈ ಬಗ್ಗೆ ಹಲವಾರು ಬಾರಿ ಜನಜಾಗೃತಿ ಮೂಡಿಸಿದ್ದರೂ ಸಾರ್ವಜನಿಕರು ಎಲ್ಲೆಂದರಲ್ಲಿ ತೆಂಗಿನ ಚಿಪ್ಪು, ಎಳನೀರು ಬುರುಡೆ, ಟೈರು ಹಾಕುತ್ತಿರುವುದರಿಂದ ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದ ಡೆಂಗ್ಯೂ ಬರುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಬಂದಾಗ ಅವರು ನೀಡುವ ಸಲಹೆಗಳನ್ನು ಪಡೆದು ಸಹಕರಿಸುವಂತೆ ಮನವಿ ಮಾಡಿದರು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೊಳ್ಳೆ ಕಚ್ಚದಂತೆ ತುಂಬು ತೋಳಿನ ಶರ್ಟ್ ಹಾಗೂ ಪ್ಯಾಂಟ್ ಧರಿಸಬೇಕು. ಪ್ರತೀ ಶುಕ್ರವಾರ ತಾಲೂಕಿನ ಎಲ್ಲಾ ಕಚೇರಿಗಳಲ್ಲಿ ಮತ್ತು ಶಾಲಾ-ಕಾಲೇಜುಗಳ ಸುತ್ತ-ಮುತ್ತ ಇರುವ ಪರಿಸರವನ್ನು ಸ್ವಚ್ಚವಾಗಿಡುವಂತೆ ವಿನಂತಿಸಿದರು.

ಚಿಕ್ಕಮಗಳೂರು ತಾಲೂಕಿನಲ್ಲಿ ಜನವರಿಯಿಂದ ಈವರೆಗೆ ೪೧೩ ಪ್ರಕರಣಗಳು ದಾಖಲಾಗಿದ್ದು, ಜು.೧೫ ರವರೆಗೆ ೨೮ ಡೆಂಗ್ಯೂ ಸಕ್ರಿಯ ಪ್ರಕರಣಗಳು ಇದ್ದು ಯಾವುದೇ ಸಾವುನೋವು ಸಂಭವಿಸಿಲ್ಲ. ಸಾರ್ವಜನಿಕರು ಸೊಳ್ಳೆಯಿಂದ ಕಚ್ಚಿಸಿಕೊಳ್ಳದಂತೆ ಜಾಗ್ರತೆ ವಹಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದರು.

ಡೆಂಗ್ಯೂ ಜ್ವರದ ಲಕ್ಷಣಗಳು: ಮೊದಲು ಸಾಮಾನ್ಯವಾಗಿ ಜ್ವರ ಕಾಣಿಸಿಕೊಳ್ಳುತ್ತದೆ. ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿದ್ದು, ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.

ತಹಸೀಲ್ದಾರ್ ಸುಮಂತ್ ಮಾತನಾಡಿ, ಇಂದು ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯಲ್ಲಿ ನಿರ್ಧಾರವಾದಂತೆ ಎಲ್ಲಾ ಇಲಾಖೆಗಳಿಗೆ ಡೆಂಗ್ಯೂಜ್ವರ ನಿಯಂತ್ರಣ ಕುರಿತು ಮುಂಜಾಗ್ರತಾ ಕ್ರಮಗನ್ನು ಅನುಸರಿಸುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ನಗರ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ನೀರು ನಿಲ್ಲದಂತೆ ಹಾಗೂ ಚರಂಡಿಗಳನ್ನು ಸ್ವಚ್ಚಗೊಳಿಸಲು ನಗರಸಭೆಗೆ ಸೂಚನೆ ನೀಡಲಾಗಿದೆ. ತಾಲೂಕಿನ ೯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಡೆಂಗ್ಯೂ ಪ್ರಕರಣ ಹೆಚ್ಚು ಇರುವ ಗ್ರಾಮಗಳಲ್ಲಿ ಫಾಗಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬಿಸಿಎಂ ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಹಾಸ್ಟೆಲ್‌ಗಳಲ್ಲಿ ಸ್ವಚ್ಚತೆ ಕಾಪಾಡಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಂಗನವಾಡಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಬಟ್ಟೆ ಧರಿಸಬೇಕು ಹಾಗೂ ಒಡಮಸ್ ಹಚ್ಚಿಕೊಳ್ಳುವಂತೆ ಕೋರಲಾಗಿದೆ.

Taluk Level Meeting on Precautionary Measures to Control Dengue Fever

About Author

Leave a Reply

Your email address will not be published. Required fields are marked *

You may have missed