September 19, 2024

ಜು.20ಕ್ಕೆ ಸಂತ ಜೋಸೆಫರ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿ

0
ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕರಡೋಜ ಸುದ್ದಿಗೋಷ್ಠಿ

ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕರಡೋಜ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಇಲ್ಲಿನ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜು ಮತ್ತು ಡೈನಮೋ ಕ್ಯಾಂಪಸ್ ಸಂಸ್ಥೆ ವತಿಯಿಂದ ಜು.೨೦ ರಂದು ಶನಿವಾರ ಪದವೀಧರ ಯುವಜನತೆಗಾಗಿ ಉದ್ಯೋಗ ನೇಮಕಾತಿಯನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕರಡೋಜ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಈ ಸಂಬಂಧ ಈಗಾಗಲೇ ಜು.೧೩-೧೪ ರಂದು ಉದ್ಯೋಗ ತರಬೇತಿಯನ್ನು ನೀಡಲಾಗಿದ್ದು, ಈ ತರಬೇತಿಯಲ್ಲಿ ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ಜು.೨೦ ರಂದು ಜ್ಯೋತಿನಗರದ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ಉದ್ಯೋಗ ನೇಮಕಾತಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸುಮಾರು ೮ ವಿವಿಧ ಕಂಪನಿಗಳು ಭಾಗವಹಿಸಿ ನೇಮಕಾತಿ ಮಾಡಿಕೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಪಿಯು, ಡಿಪ್ಲೊಮೊ ಸೇರಿದಂತೆ ಯಾವುದೇ ಪದವಿ ಪೂರೈಸಿದ ಜಿಲ್ಲೆ ಹಾಗೂ ಹೊರ ಜಿಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ನಗರ ಮತ್ತು ಸುತ್ತಮುತ್ತಲ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ಪದವಿ ಪೂರೈಸಿ ನಿರುದ್ಯೋಗದಿಂದ ಬಳಲುತ್ತಿರುವ ಜಿಲ್ಲೆಯ ಯುವ ಜನರ ಅನುಕೂಲಕ್ಕಾಗೊ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲಾ ಪದವೀಧರರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

೨೦೧೧ ರಲ್ಲಿ ಕೇವಲ ೪೦ ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜು ಕಳೆದ ೧೪ ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತೀ ವರ್ಷ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿಯನ್ನು ನಡೆಸಲಾಗುತ್ತಿದ್ದು, ಈಗಾಗಲೇ ಸಹಸ್ರಾರು ಯುವಜನತೆ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.

ಕಂಪನಿಗಳು ಉದ್ಯೋಗ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೨೪೨೩೧೭೭೧೨ ಅಥವಾ ೯೫೯೧೧೦೯೮೨೩ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ಉದ್ಯೋಗ ನೇಮಕಾತಿಯಲ್ಲಿ ಸುಮಾರು ೨೦೦ ಕ್ಕೂ ಹೆಚ್ಚು ಯುವ ಪದವೀಧರರು ಭಾಗವಹಿಸುವ ನಿರೀಕ್ಷೆ ಇದ್ದು, ಸ್ಥಳದಲ್ಲಿಯೇ ೧೦೦ ರೂಗಳೊಂದಿಗೆ ನೊಂದಣಿ ಮಾಡಿಕೊಳ್ಳಬೇಕು. ಅನುಭವ ಆಧರಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ೧೮-೨೫ ಸಾವಿರ ರೂಗಳವರೆಗೆ ವೇತನ ದೊರೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಡೈನಮೋ ಕ್ಯಾಂಪಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಪ್ರೀತನ್, ಪ್ಲೇಸ್‌ಮೆಂಟ್ ಅಧಿಕಾರಿ ವಿನಯ್ ಕುಮಾರ್ ಎಂ.ಎ ಉಪಸ್ಥಿತರಿದ್ದರು.

Job Recruitment in Saint Joseph’s College on June 20

About Author

Leave a Reply

Your email address will not be published. Required fields are marked *

You may have missed