September 19, 2024

ಕೆಲಸಕ್ಕೆ ತಕ್ಕ ವೇತನ ನೀಡಲು ಎಐಟಿಯುಸಿ ಒತ್ತಾಯ

0
ಎಸ್.ವಿಜಯಕುಮಾರ್ ಸುದ್ದಿಗೋಷ್ಠಿ

ಎಸ್.ವಿಜಯಕುಮಾರ್ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಗೌರವ ಧನದ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಕೂಡಲೇ ೭ನೇ ವೇತನ ಆಯೋಗದ ಶಿಫಾರಸ್ಸಿನ ಶೇ.೫೦ ರ? ವೇತನ ನೀಡಬೇಕೆಂದು ಜಿಲ್ಲಾ ಬಿಸಿಯೂಟ ಕಾರ್ಯಕರ್ತರು ಹಾಗೂ ಗ್ರಾ.ಪಂ ನೌಕರರು ಮತ್ತು ಇತರೆ ಅರೆಸರ್ಕಾರಿ ನೌಕರರ ಕ್ರಿಯಾ ಸಮಿತಿ ಎಐಟಿಯುಸಿ ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ಸಮಿತಿ ಜಿಲ್ಲಾ ಕಾರ್ಯದರ್ಶಿ ಎಸ್.ವಿಜಯಕುಮಾರ್ ಕೆಳಹಂತದ ನೌಕರರಿಗೆ ಕೆಲಸಕ್ಕೆ ತಕ್ಕ ಪಿಎಫ್, ಇಎಸ್‌ಐ, ವೈದ್ಯಕೀಯ ಸೌಲಭ್ಯ, ರಜೆ, ನಿವೃತ್ತಿ ಉಪಧನ, ನಿವೃತ್ತಿ ವೇತನಗಳನ್ನು ಕಡ್ಡಾಯಗೊಳಿಸುವ ಜೊತೆಗೆ ವೇತನ ಹೆಚ್ಚಳಕ್ಕೆ ಕ್ರಮ ವಹಿಸಬೇಕು, ಇಲ್ಲದಿದ್ದರೆ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ರಾಜ್ಯದಲ್ಲಿ ೧,೨೦,೦೦೦ ಬಿಸಿಯೂಟ ಮಹಿಳೆಯರಿಗೆ ಸುಮಾರು ೬೫,೦೦೦ ಅಂಗನವಾಡಿ ಮಹಿಳೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ರಾಜ್ಯದ ಸುಮಾರು ೬೩೦೦ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಮತ್ತು ರಾಜ್ಯಾದ್ಯಂತ ಕಂದಾಯ ಇಲಾಖೆಯ ಸೇವೆಯಲ್ಲಿ ತೊಡಗಿರುವ ಗ್ರಾಮ ಸಹಾಯಕರುಗಳಿಗೆ ತಮ್ಮ ಕೆಲಸಕ್ಕೆ ತಕ್ಕ ಸಂಬಳ ನೀಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸರ್ಕಾರಗಳು ಸಹ ವಿಫಲವಾಗಿವೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದ ಸುಮಾರು ೧೨,೨೦,೦೦೦ ದ? ಇರುವ ನೌಕರರಿಗೆ ಕೆಲವು ಆಯೋಗಗಳ ಶಿಫಾರಸಿನ ಮೇಲೆ ಪರಿ?ತ ವೇತನ ಜಾರಿ ಮಾಡಿರುವ ಸರ್ಕಾರವೇ ಹೇಳುವಂತೆ ವ?ಕ್ಕೆ ಸುಮಾರು ೨೦೨೦೭ ಕೋಟಿಗಳ? ಹೆಚ್ಚುವರಿ ವೇತನ ನೀಡಲಿದೆ. ಆದರೆ ಸರ್ಕಾರದ ಅಧೀನದಲ್ಲಿ ಕೆಲಸ ನಿರ್ವಹಿಸುವ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳಿಗೆ ಕೇವಲ ರೂ.೩೭೦೦ ನೀಡುತ್ತಿದ್ದು, ಇವರಿಗೆ ಅಪಘಾತ, ಅನಾಹುತಗಳಾದಲ್ಲಿ ಯಾವುದೇ ಪರಿಹಾರ ಇರುವುದಿಲ್ಲ, ದಿನಾಂಕ: ೧೬-೦೭-೨೦೨೪ ರಂದು ಸರ್ಕಾರಿ ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ೪೦,೦೦೦ ಹಾಗೂ ರೂ.೩೦,೦೦೦ ಗಳ ಉಪಧನ ನೀಡಲು ಆದೇಶ ಹೊರಡಿಸಿದೆ ಎಂದರು.

ಆದರೆ ಈ ಹಿಂದೆ ಕೆಲಸ ಮಾಡಿ ನಿವೃತ್ತಿಗೊಂಡಿರುವ ಕಾರ್ಯಕರ್ತೆಯರು ಮತ್ತು ಮಕ್ಕಳ ಸಂಖ್ಯೆ ಕೊರತೆಯಿಂದ ಕೈಬಿಡಲಾಗಿರುವ ಹತ್ತಾರು ವ?ಗಳ ಸೇವೆ ಸಲ್ಲಿಸಿದ ಕಾರ್ಯಕರ್ತೆರಿಗೆ ಈ ಸೌಲಭ್ಯದ ಬಗ್ಗೆ ಮಾಹಿತಿ ಇಲ್ಲ, ವೈದ್ಯಕೀಯ ಹಾಗೂ ನಿವೃತ್ತಿ ವೇತನ, ಪಿಎಫ್, ಇಎಸ್‌ಐಗಳಾದಂತಹ ಯಾವುದೇ ಸೌಲಭ್ಯವಿರುವುದಿಲ್ಲ. ಅದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ನೌಕರರು ಗ್ರಾಮದ ಏಳಿಗೆಗಾಗಿ ಹಗಲು ಇರುಳು ದುಡಿಯುತ್ತಿದ್ದರೂ ಇವರಲ್ಲಿ ಬಹುತೇಕರಿಗೆ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಆಗದೆ ನಿವೃತ್ತಿ ಮತ್ತು ಸಾವು ನೋವುಗಳು ಆದಲ್ಲಿ ಯಾವುದೇ ಸೌಲಭ್ಯವಿರುವುದಿಲ್ಲ ಎಂದು ತಿಳಿಸಿದರು.

ಅನುಮೋದನೆಗೊಂಡ ನೌಕರರಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯ ರಾಜಕೀಯ ಒತ್ತಡದಿಂದ ಏಕಾಏಕಿ ಕೆಲಸದಿಂದ ವಜಾಗೊಳಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಬಡ್ತಿ ಮತ್ತು ಅನುಕಂಪದ ಆಧಾರದ ಮೇಲಿನ ನೇಮಕಾತಿ ನಡೆಸದೆ ವಿಳಂಭಗೊಳಿಸಿ ಇರುವ ನೌಕರರಿಗೆ ಹೆಚ್ಚಿನ ಹೊರೆ ಹೊರಿಸಲಾಗುತ್ತಿದೆ ಎಂದು ದೂರಿದರು.

ಮಕ್ಕಳ ಆರೈಕೆ, ಗರ್ಭಿಣಿಯರ ಆರೈಕೆ ಹಾಗೂ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಹಾಗೂ ತಮ್ಮ ಜೀವವನ್ನು ಲೆಕ್ಕಿಸದೆ ಗ್ರಾಮದ ಗ್ರಾಮಸ್ಥರ ಬಳಿ ಹೋಗಿ ಮಾಹಿತಿ ಪಡೆದು ಆರೈಕೆ ಮಾಡುವ ಕೋವಿಡ್ ಇತರೆ ಸಂದರ್ಭದಲ್ಲಿ ಆರೋಗ್ಯ ಇಲಾಖೆಗಳೊಂದಿಗೆ ಹೆಚ್ಚಿನ ಶ್ರಮ ಹಾಕಿದ ಆಶಾ ಕಾರ್ಯಕರ್ತೆಯರು ಮತ್ತು ರಾಜ್ಯದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಕಂದಾಯ ಇಲಾಖೆಗೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ ಯಾವುದೇ ಸರ್ಕಾರಿ ಸೌಲಭ್ಯ ದೊರೆತಿಲ್ಲ ಎಂದರು.ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಜಿ.ರಘು, ಪು?ವತಿ, ಇಂದುಮತಿ, ಸಬೀಮ್‌ಭಾನು, ರಾಜೇಗೌಡ ಇದ್ದರು.

AITUC insists on giving fair wages for work

About Author

Leave a Reply

Your email address will not be published. Required fields are marked *

You may have missed