September 19, 2024

ರೈಲ್ವೆ ಇಲಾಖೆಯ ವಿಭಾಗ ಮಟ್ಟದಲ್ಲಿ ಜನಪ್ರತಿನಿಧಿ ಒಳಗೊಂಡ ಸಲಹಾ ಸಮಿತಿ ರಚನೆ

0
ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣರಿಂದ ರೈಲ್ವೆ ನಿಲ್ದಾಣದ ಆಧುನೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ರಾಷ್ಟ್ರದಲ್ಲೇ ಪ್ರಥಮವಾಗಿ ರೈಲ್ವೆ ಇಲಾಖೆಯ ವಿಭಾಗ ಮಟ್ಟದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.

ಇಂದು ಜಿಲ್ಲೆಗೆ ಆಗಮಿಸಿದ್ದ ಅವರು ಇಲ್ಲಿನ ರೈಲ್ವೆ ನಿಲ್ದಾಣದ ಆಧುನೀಕರಣ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರೈಲ್ವೆ ಇಲಾಖೆಯ ಎಲ್ಲಾ ವಿಭಾಗಗಳಲ್ಲಿ ಆ ಭಾಗದಲ್ಲಿ ಬರುವ ಸಂಸದರು, ಶಾಸಕರು, ಸಚಿವರು, ವಿಧಾನ ಪರಿ?ತ್ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿ ರಚಿಸುವ ಈ ಸಮಿತಿಯಲ್ಲಿ ಆಯಾ ವಿಭಾಗದ ವಿಭಾಗೀಯ ವ್ಯವಸ್ಥಾಪಕರು ಮತ್ತು ಮುಖ್ಯ ಇಂಜಿನಿಯರ್‌ಗಳು ಇದ್ದು, ಆಯಾ ವಿಭಾಗದಲ್ಲಿ ಬರುವ ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದೆಂದು ಹೇಳಿದರು.

ರಾ?ದಲ್ಲೇ ಪ್ರಥಮ ಪ್ರಯತ್ನವಾಗಿ ಈ ಸಲಹಾ ಸಮಿತಿಗಳನ್ನು ರಚಿಸುವ ತೀರ್ಮಾನ ಕೈಗೊಂಡಿದ್ದು, ಶೀಘ್ರದಲ್ಲಿಯೇ ಈ ಸಮಿತಿಗಳು ರಚನೆಯಾಗಲಿದ್ದು, ಪ್ರತೀ ೩ ತಿಂಗಳಿಗೊಮ್ಮೆ ಸಲಹಾ ಸಮಿತಿ ಸಭೆ ಸೇರಿ ಆ ಭಾಗದಲ್ಲಿ ಇರುವ ಸಮಸ್ಯೆಗಳು ಹಾಗೂ ಪರಿಹಾರದ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದರು.

ಜನಸಾಮಾನ್ಯರ ಅನುಕೂಲಕ್ಕಾಗಿ ಎಲ್ಲಾ ರೀತಿಯಲ್ಲಿ ರೈಲ್ವೆ ಇಲಾಖೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಿದ್ಧವಿದೆ, ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯವಾಗಿದ್ದು ಜಮೀನುಗಳ ಅಗತ್ಯವಿದ್ದಾಗ ರಾಜ್ಯ ಸರ್ಕಾರ ಇಲಾಖೆಗೆ ಭೂಮಿ ನೀಡಬೇಕು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಅಮೃತ್ ಭಾರತ ಯೋಜನೆಯನ್ವಯ ದೇಶದ ಶೇಕಡ ೫೦ರ? ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನೀಕರಣ ವ್ಯವಸ್ಥೆಯೊಂದಿಗೆ ಮೇಲ್ದರ್ಜೆಗೇರಿಸುವ ಕಾರ್ಯ ನಡೆದಿದ್ದು, ಈಗಾಗಲೇ ಶೇಕಡ ೪೦ಕ್ಕಿಂತ ಹೆಚ್ಚಿನ ಪ್ರಮಾಣದ? ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಈ ಯೋಜನೆಯಂತೆ ಮಂಗಳೂರು ರೈಲು ನಿಲ್ದಾಣವನ್ನು ಸುಮಾರು ೩೨೦ ಕೋಟಿ ರೂ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಕಾರ್ಯ ಮುಂದುವರೆದಿದ್ದು, ನಿನ್ನೆ ತಾವು ಭೇಟಿ ನೀಡಿ ಪರಿಶೀಲಿಸಿ ಬಂದಿರುವುದಾಗಿ ತಿಳಿಸಿದರು.

ಇದೇ ಯೋಜನೆಯಲ್ಲಿ ಚಿಕ್ಕಮಗಳೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುತ್ತಿದ್ದು ಇದಕ್ಕಾಗಿ ೨೬ ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಬಹುತೇಕ ಕಾಮಗಾರಿಗಳು ಮುಗಿದಿದ್ದು ಸದ್ಯದಲ್ಲೇ ಈ ಕಾಮಗಾರಿ ಪೂರ್ಣವಾಗಲಿದೆ ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು-ಬೇಲೂರು-ಅರೇಹಳ್ಳಿ ಮಾರ್ಗವಾಗಿ ಸಕಲೇಶಪುರದವರೆಗೆ ಸಂಪರ್ಕ ಕಲ್ಪಿಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಈ ಯೋಜನೆಗೆ ಅಗತ್ಯ ಇರುವ ಭೂಮಿ ಕೊಡಿಸಲಾಗಿದೆ. ಹಾಸನ ಜಿಲ್ಲಾ ವ್ಯಾಪ್ತಿಗೆ ಬರುವ ಪ್ರದೇಶಕ್ಕೆ ಭೂಮಿ ಕೊಡಿಸಬೇಕಾಗಿದ್ದು ಈ ಸಂಬಂಧ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಇಲ್ಲಿಂದ ಹಾಸನ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಯೋಜನೆ ಬಹುದಿನಗಳ ಬೇಡಿಕೆಯಾಗಿದ್ದು ಈ ಯೋಜನೆಯನ್ನು ಮುಂದಿನ ೨೦೨೫ರ ಡಿಸೆಂಬರ್ ೨೫ ಒಳಗಾಗಿ ಪೂರ್ಣಗೊಳಿಸಿಕೊಡುವುದಾಗಿ ದಕ್ಷಿಣ ರೈಲ್ವೆ ವಿಭಾಗದ ವಿಭಾಗೀಯ ವ್ಯವಸ್ಥಾಪಕರಾದ ಶ್ರೀಮತಿ ಮೀನಾ ಅಗರ್‌ವಾಲ್ ಅವರು ತಮಗೆ ತಿಳಿಸಿದ್ದಾರೆ ಎಂದರು.

ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಭೂಮಿ ವಶಪಡಿಸಿಕೊಂಡಿರುವ ಎಲ್ಲಾ ರೈತರಿಗೆ ಪರಿಹಾರ ನೀಡಲಾಗಿದೆ. ಜಮೀನು ನೀಡಿದ ರೈತರಿಗೆ ಜಮೀನಿಗೆ ಓಡಾಡಲು ಅನುಕೂಲವಾಗುವಂತೆ ರಸ್ತೆ ಹಾಗೂ ಮೇಲ್ಸೇತುವೆ ನಿರ್ಮಾಣ ಮಾಡಲು ಬೇಡಿಕೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಬೇಲೂರು ಶಾಸಕ ಸುರೇಶ್ ಹಾಗೂ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದಾದ ನಂತರ ಸಚಿವ ಸೋಮಣ್ಣ ಅವರು ಹಾದಿಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ನಿಲ್ದಾಣದ ಕಾಮಗಾರಿಯನ್ನು ಪರಿಶೀಲಿಸಿ ಗಿಡ ನೆಡುವ ಮೂಲಕ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ರಾಷ್ಟ್ರದಲ್ಲೇ ಪ್ರಥಮವಾಗಿ ರೈಲ್ವೆ ಇಲಾಖೆಯ ವಿಭಾಗ ಮಟ್ಟದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.

Formation of an advisory committee consisting of people’s representatives at the divisional level of the Railway Department

About Author

Leave a Reply

Your email address will not be published. Required fields are marked *

You may have missed