September 8, 2024
ಕಳಸ ತಾಲೂಕಿನ ಮಾವಿನಹೊಲದಲ್ಲಿ ಹಳ್ಳ ದಾಟಲು ಹೋದ ಎಮ್ಮೆಯೊಂದು ನೀರುಪಾಲಾಗಿದೆ

ಕಳಸ ತಾಲೂಕಿನ ಮಾವಿನಹೊಲದಲ್ಲಿ ಹಳ್ಳ ದಾಟಲು ಹೋದ ಎಮ್ಮೆಯೊಂದು ನೀರುಪಾಲಾಗಿದೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು ಸಾಧಾರಣ ಮಳೆ ಮುಂದೂವರೆದಿದೆ. ತುಂಗಾ, ಭದ್ರಾ, ಹೇಮಾವತಿ ನದಿ ಪ್ರವಾಸ ಕುಗ್ಗಿದೆ. ತುಂಬಿ ಹರಿಯುತ್ತಿದ್ದ ಹಳ್ಳಕೊಳ್ಳಗಳಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ. ಅಲ್ಲಲ್ಲಿ ಧರೆಕುಸಿತ ಸೇರಿದಂತೆ ಇತರೆ ಅವಘಡಗಳು ಸಂಭವಿಸುತ್ತಿವೆ. ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

ಎರಡು ವಾರಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಜನರು ಬೇಸತ್ತಿದ್ದು, ಶನಿವಾರ ಮಳೆ ಸ್ವಲ್ಪಮಟ್ಟಿಗೆ ಬಿಡುವು ನೀಡಿದ್ದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಉಕ್ಕಿ ಹರಿದು ಪ್ರವಾಹ ಉಂಟು ಮಾಡಿದ್ದ ನದಿಗಳು ಪ್ರಶಾಂತವಾಗಿ ಹರಿ ಯುತ್ತಿವೆ. ಜಲಾವೃತಗೊಂಡಿದ್ದ ಜಮೀನುಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಕಡಿಮೆಯಾದರೂ ಅಲ್ಲಲ್ಲಿ ಮರಗಳು ಧರೆಗುರುಳುತ್ತಿವೆ. ವಿದ್ಯುತ್ ಕಣ್ಣಾಮುಚ್ಚಾಲೆ ಮುಂದೂವರೆದಿದೆ.

ಶಿರಾಡಿ, ಸಂಪಾಜೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿರುವುದರಿಂದ ಮೂಡಿಗೆರೆ ತಾಲೂಕು ಚಾರ್ಮಾಡಿಘಾಟಿ ಪ್ರದೇಶದಲ್ಲಿ ವಾ ಹನ ಸಂಚಾರ ಹೆಚ್ಚಳಗೊಂಡಿದೆ. ಚಿಕ್ಕಮಗಳೂರಿನಿಂದ ಮಂಗಳೂರು, ಉಡುಪಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಘಾಟಿ ಇದಾಗಿದ್ದು, ವಾಹನ ಸಂಚಾರದಿಂದ ಅವಘಡಗಳು ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗೃತ ಕ್ರಮ ಕೈಗೊಂಡಿದೆ. ಚಾರ್ಮಾಡಿಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂಕುಸಿತ, ರಸ್ತೆ ಬಿರುಕು ಬಿಟ್ಟಿರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿ ಮೀನಾ ನಾಗ ರಾಜ್ ಸಿ.ಎನ್., ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಹಾಗೂ ಜಿ.ಪಂ.ಸಿಇಓ ಕೀರ್ತನ ಅವರು ಚಾರ್ಮಾಡಿಘಾಟಿ ಪ್ರದೇಶಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾರ್ಮಾಡಿಘಾಟಿ ಪ್ರದೇಶ ರಸ್ತೆಯ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಆಗದಂತೆ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ೨೦೧೯ರಲ್ಲಿ ರಸ್ತೆ ಕುಸಿತ ಆಗಿರುವ ಪ್ರದೇಶದಲ್ಲಿ ವಾಹನ ನಿಧಾನವಾಗಿ ಸಂಚರಿಸುವಂತೆ ಕ್ರಮಕೈಗೊಳ್ಳಲು ತಿಳಿಸಿದರು. ಹಾಗೂ ಘಾಟಿ ರಸ್ತೆಯ ಎರಡು ಮೂರು ಕಡೆಗಳಲ್ಲಿ ಚೆಕಿಂಗ್ ಪಾಯಿಂಟ್ ನಿರ್ಮಿಸುವಂತೆ ಸೂಚಿಸಿದರು.

ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದಲ್ಲಿ ಸಿಗುವ ಝರಿಫಾಲ್ಸ್‌ನಲ್ಲಿ ಬಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಫಾಲ್ಸ್‌ಗೆ ತೆರಳುವ ಮಾರ್ಗವನ್ನು ಬಂದ್ ಮಾಡಿಸಲಾಗಿದೆ. ಕುದುರೆಗುಂಡಿ ಸಂಪರ್ಕ ಕಲ್ಪಿಸುವ ಕಾನೂರು, ಕಟ್ಟಿನಮನೆ ರಸ್ತೆ ಹಳ್ಳದ ನೀರಿನಿಂದ ಬ್ಲ್ಯಾಕ್ ಆಗಿದ್ದು ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೊನ್ನಾಳ ಫಾರೆಸ್ಟ್ ಗೇಟ್ ಸಿದ್ದರಬಾನ್ ನಡುವಿನ ರಸ್ತೆಮೇಲೆ ಗುಡ್ಡ ಕುಸಿದಿದ್ದು ಗುಡ್ಡದ ಮಣ್ಣನ್ನು ತೆರವುಗೊಳಿಸಲಾಗಿದೆ. ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಬಿಡುವು ನೀಡಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಳೆ ಕ್ಷೀಣಿಸಿದ್ದರಿಂದ ಮಲೆನಾಡಿನ ಜನತೆ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.

Shrinking Tunga Bhadra Hemavati rivers flood

About Author

Leave a Reply

Your email address will not be published. Required fields are marked *

You may have missed