September 8, 2024

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ

0
ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಚಿಕ್ಕಮಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ, ದಲಿತ ವಿರೋಧಿ, ಶೂನ್ಯ ಅಭಿವೃದ್ಧಿ ಸರ್ಕಾರ. ಇದರ ವಿರುದ್ಧ ಜನಾಂದೋಲನ ಮಾಡಬೇಕು ಎಂದು ಕಾರ್ಕಳ ಶಾಸಕರಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ಕುಮಾರ್ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ವಿರೋಧಿ ಆಡಳಿತ ನೀಡುತ್ತದೆ ಎಂದು ಯಾರೂ ಕೂಡ ಭಾವಿಸಿರಲಿಲ್ಲ ಎಂದು ಹೇಳಿದರು.

ಒಂದಲ್ಲಾ ಒಂದು ಇಲಾಖೆಯಲ್ಲಿ ಹಗರಣಗಳು ಬೆಳಕಿಗೆ ಬರುತ್ತಲೇ ಇವೆ. ಹಲವು ವರ್ಷಗಳಿಂದ ಜನರಿಗೆ ಮಂಕುಬೂದಿ ಎರಚಿ ಸಿದ್ದರಾಮಯ್ಯ ಅಧಿಕಾರ ನಡೆಸಿದ್ದಾರೆ. ಕಳೆದ ಒಂದು ವರ್ಷಗಳಲ್ಲಿ ಒಂದೇ ಒಂದು ಗುದ್ದಲಿ ಪೂಜೆಯನ್ನು ಮಾಡದೇ ಇರುವಂತಹ ಸರ್ಕಾರ, ಶೂನ್ಯ ಅಭಿವೃದ್ಧಿಯ ಸರ್ಕಾರ. ಮೈಸೂರಿನ ಮುಡಾದಲ್ಲಿ ೧೮೭ ಕೋಟಿ ಹಗರಣ ನಡೆದಿದೆ.

ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಬಳಸಬೇಕಾದಂತಹ ಹಣವನ್ನು ಇನ್ನೊಂದು ಯಾವುದು ಅಕೌಂಟಿಗೆ ಹಾಕಿ ಅಲ್ಲಿಂದ ಚುನಾವಣೆಗೆ ಬಳಸಿರುವ ಸರ್ಕಾರ ಇದಾಗಿದೆ. ಈ ಹಿಂದೆ ಯಾವತ್ತೂ ಕೂಡ ಈ ರೀತಿಯ ಸರ್ಕಾರ ನಾವುಗಳು ನೋಡಿರಲಿಲ್ಲ ಎಂದರು.

ಓರ್ವ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ನಂತರದಲ್ಲಿ ಒಂದು ಹಗರಣ ಬಯಲಿಗೆ ಬಂದಿತು. ದುರಂತವೆಂದರೆ ಡೆತ್ ನೋಟ್‌ನಲ್ಲಿ ಸಚಿವರ ಹೆಸರನ್ನು ಬರೆದಿಡಲಾಗಿತ್ತು. ಆದರೆ, ಆ ಸಚಿವರ ವಿರುದ್ಧ ಈವರೆಗೆ ಯಾವುದೇ ಎಫ್‌ಐಆರ್ ಹಾಕಲಿಲ್ಲ. ವಿಧಾನಸಭೆಯಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡಿದಾಗ ಉತ್ತರವನ್ನು ಕೊಡಲು ಮುಖ್ಯಮಂತ್ರಿ ಅವರು ತಡವರಿಸಿಕೊಂಡರು, ಸಚಿವರನ್ನ ಸಮರ್ಥನೆ ಮಾಡಲು ಪ್ರಯತ್ನಿಸಿದರು ಎಂದ ಅವರು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬದಲು ಬಿಜೆಪಿ ಆಡಳಿತದಲ್ಲಿ ಹಗರಣ ನಡೆದಿದೆ.

ಅದನ್ನು ಪಟ್ಟಿ ಮಾಡುತ್ತೇವೆಂದು ಹೇಳಿ ಪಟ್ಟಿ ಮಾಡಲು ಹೊರಟಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಹಗರಣಗಳು ನಡೆದಿದ್ದರೆ ಈ ಕಳೆದ ಒಂದು ವರ್ಷದಲ್ಲಿ ಏಕೆ ತನಿಖೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ದಲಿತರ ಭೂಮಿಯನ್ನ ತನ್ನ ಬಾಮೈದನ ಹೆಸರಿನಲ್ಲಿ ಖರೀದಿ ಮಾಡಿ ಹೆಂಡತಿಗೆ ದಾನವಾಗಿ ಕೊಡಿಸಿದ್ದಾರೆ. ಬಿಜೆಪಿ ಕಾಲದಲ್ಲಿ ಮುಡಾದಿಂದ ಸೈಟ್ ಗಳನ್ನ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಬಿಜೆಪಿ ಕಾಲದ ಅನುದಾನವನ್ನು ರದ್ದು ಮಾಡಲು ನಿಮಗೆ ಆಗುತ್ತದೆ, ಬಿಜೆಪಿ ಕಾಲದ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ನಿಮಗೆ ಆಗೋದಿಲ್ಲ, ಬಿಜೆಪಿ ಕಟ್ಟಿರುವಂತ ರಾಮ ಮಂದಿರವನ್ನು ನೋಡಲು ನಿಮ್ಮಿಂದ ಆಗುವುದಿಲ್ಲ, ಬಿಜೆಪಿ ಕೊಟ್ಟ ಸೈಟ್ ಮಾತ್ರ ಬೇಕು.

ನಿಮಗೆ ನೈತಿಕತೆ ಇದ್ದಿದ್ದರೆ ಬಿಜೆಪಿ ಕಾಲದಲ್ಲಿ ಕೊಟ್ಟಿರುವಂತಹ ಸೈಟನ್ನು ವಾಪಸ್ ಕೊಡಬೇಕಾಗಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಜನಾಭಿಪ್ರಾಯವನ್ನು ಮೂಡಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಸ್ಥಳೀಯ ವಿಷಯಗಳನ್ನು ಕುರಿತು ತೀವ್ರವಾಗಿ ಹೋರಾಟ ನಡೆಸಬೇಕು, ಆ ಮೂಲಕ ಜನರಿಗೆ ನ್ಯಾಯ ಕೊಡಿಸಬೇಕು ಎಂದು ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮಲ್ಲಿರುವ ಭಿನ್ನಾಭಿಪ್ರಾಯದಿಂದ ಹೊರಗೆ ಬರಬೇಕು. ನಾವುಗಳು ವ್ಯಕ್ತಿಗತವಾಗಿ ಕೆಲಸ ಮಾಡುತ್ತಿಲ್ಲ, ಪಕ್ಷದ ಕೆಲಸ ಮಾಡುತ್ತಿದ್ದೇವೆ. ಪಕ್ಷದ ನಿರ್ಣಯಕ್ಕೆ ಬದ್ಧರಾಗಬೇಕು. ವಿರುದ್ಧವಾಗಿ ನಡೆದುಕೊಂಡರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಚಿವ ಡಿ.ಎನ್. ಜೀವರಾಜ್, ಮುಖಂಡರಾದ ಎಚ್.ಸಿ. ಕಲ್ಮರಡಪ್ಪ, ದೀಪಕ್ ದೊಡ್ಡಯ್ಯ, ದಿನೇಶ್ ದೇವವೃಂದ, ರವೀಂದ್ರ ಬೆಳವಾಡಿ, ಪುಣ್ಣಪಾಲ್, ಡಾ. ನರೇಂದ್ರ ಉಪಸ್ಥಿತರಿದ್ದರು. ಸೀತಾರಾಮಭರಣ್ಯ ಪ್ರಾರ್ಥಿಸಿದರು. ಚೈತ್ರಶ್ರೀ ಮಾಲತೇಶ್ ಸ್ವಾಗತಿಸಿದರು.

District special executive meeting held at BJP office

About Author

Leave a Reply

Your email address will not be published. Required fields are marked *

You may have missed