September 16, 2024

ಪಂಚ ಗ್ಯಾರಂಟಿ ಯೋಜನೆಯಿಂದ ಎಲ್ಲ ವರ್ಗದವರಿಗೂ ಅನುಕೂಲ

0
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿಯ ಎರಡನೆಯ ಸಭೆ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿಯ ಎರಡನೆಯ ಸಭೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಅಸಹಾಯಕ ದುರ್ಬಲ ವರ್ಗದವರಿಂದ ಹಿಡಿದು ಎಲ್ಲ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ಎಂ.ಸಿ. ಶಿವನಂದಸ್ವಾಮಿ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿಯ ಎರಡನೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉಚಿತ ಆಹಾರ ಧಾನ್ಯ ವಿತರಣೆಯಲ್ಲಿ ರಾಜ್ಯದಲ್ಲೇ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಶೇ ೯೭.೨೬ ರಷ್ಟು ಸಾಧಿಸಿದೆ. ಇದುವರಿಗೂ ಜಿಲ್ಲೆಗೆ ೧೫೨.೭೮ ಕೋಟಿ ರೂ. ಗಳಷ್ಟು ಫಲಾನುಭವಿಗಳಿಗೆ ಹಣ ನೀಡಿದೆ ಎಂದ ಅವರು. ಪಡಿತರ ವಿತರಣಾ ವ್ಯವಸ್ಥೆ ಸಂಪೂರ್ಣವಾಗಿ ಗಣಕೀಕರಣದಡಿ ಪಡಿತರ ಚೀಟಿದಾರರ ಜೊತೆಗೆ ಪ್ರತಿ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಆಃಖಿ ಮುಖಾಂತರ ಹಣ ನೀಡಲಾಗಿದೆ ಎಂದು ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಯೋಜನೆ ಕೋಟ್ಯಾಂತರ ಮಹಿಳೆಯರು ಸೌಲಭ್ಯ ಪಡಿಯುತ್ತಿದ್ದಾರೆ ಹಾಗೂ ಎಲ್ಲ ವರ್ಗದ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನಿಗಧಿತ ವಿದ್ಯುತ್ ಸೌಲಭ್ಯ ನೀಡುವುದರ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡುವುದರ ಜೊತೆಗೆ ಗೃಹಲಕ್ಷ್ಮಿ ಯೋಜನೆ ಇದು ಮಹಿಳೆಯರ ಹಣಕಾಸು ವಿಚಾರದಲ್ಲಿ ಸ್ವಾಲಂಬಿಗಳಾಗಲಿ ಎಂಬ ಸುದುದ್ದೇಶದಿಂದ ಜಾರಿಗೊಳಿಸಲಾಗಿದೆ. ಈ ಯೋಜನೆ ಜಿಲ್ಲೆಯಲ್ಲಿ ನೋಂದಾಯಿಸಿದ ಫಲಾನುಭವಿಗಳಲ್ಲಿ ಶೇ ೯೪.೮೧ ರಷ್ಟು ಪ್ರಗತಿ ಸಾಧಿಸಿದೆ ಎಂದರು.

ಯುವ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಅವರಿಗೆ ಯುವ ನಿಧಿ ಯೋಜನೆಯ ಮೂಲಕ ಇದುವರೆಗೂ ೩೮೧೨ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದ ಅವರು. ಪ್ರತಿ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿದ್ದು, ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಫಲಾನುಭವಿಗಳನ್ನು ಗುರುತಿಸಿ ಅರ್ಹರಿಗೆ ಯೋಜನೆಗಳ ಪ್ರಯೋಜನವನ್ನು ನೀಡಲು ಮುಂದಾಗ ಬೇಕು ಎಂದು ಹೇಳಿದರು.

ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು ಮಾತನಾಡಿ ಅನುಷ್ಠಾನ ಸಮಿತಿ ಸದಸ್ಯರುಗಳು ಕೇಳಲಾದ ವಿವಿಧ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಯ ವಿವಿಧ ಅಧಿಕಾರಿಗಳಿಂದ ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲ ತಾಲ್ಲೂಕು ಸಮಿತಿಗಳು ಕ್ರಿಯಾಶೀಲರಾಗಿ ಯೋಜನೆಗಳ ಮಾಹಿತಿ ಪಡೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಇರುವ ತಾಂತ್ರಿಕ ಸಮಸ್ಯೆಗಳನ್ನು ಕೇಂದ್ರ ಸಮಿತಿಯ ಸಭೆಯ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದ ಅವರು ಹಂತ ಹಂತವಾಗಿ ಇರುವ ಕೆಲವು ಸಮಸ್ಯೆಗಳನ್ನು ನಿವಾರಿಸಲು ಸಂಬಂಧಪಟ್ಟ ಅಧಿಕಾರಿಗಳು ಜೊತೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.

ಉಪಾಧ್ಯಕ್ಷರುಗಳಾದ ಹೆಚ್.ಎಸ್. ಕೃಷ್ಣೇಗೌಡ, ಚಂದ್ರವಳ್ಳಿ, ಮಲ್ಲೇಶ್, ರತ್ನಕರ, ಮಹಮದ್, ಚಂದ್ರು, ಹೇಮವತಿ ಮಂಜಣ್ಣ ಮತ್ತಿತರ ಸದಸ್ಯರುಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Panch Guarantee Scheme benefits all sections

About Author

Leave a Reply

Your email address will not be published. Required fields are marked *