September 19, 2024

ತಂಬಾಕು ಉತ್ಪನ್ನಗಳ ದುಷ್ಪರಿಣಾಮ ವಿರುದ್ಧ ಕ್ರಮಕ್ಕೆ ಸೂಚನೆ

0
Notice for action against ill effects of tobacco products

Notice for action against ill effects of tobacco products

ಚಿಕ್ಕಮಗಳೂರು:  ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಮಾಡುವ ಜೊತೆಗೆ ನಿಯಮ ಬಾಹಿರವಾಗಿ ಮಾರಾಟ ಮಾಡುವವರ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್. ಸಿ.ಎನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಡಿ ಸಿಗರೇಟ್ ಸೇದುವವರಿಗಿಂತಲೂ ಅವರ ಸುತ್ತಮುತ್ತಲಿನ ಅಥವಾ ಆ ಪರಿಸರದಲ್ಲಿರುವ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯಾಪಕವಾದ ದುಷ್ಪರಿಣಾಮ ಬೀರುತ್ತದೆ ಅಂಥವರು ಕ್ಯಾನ್ಸರ್ ಗೆ ಬಲಿಯಾಗುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ಧೂಮಪಾನಿಗಳು ಸೇರಿದಂತೆ ಇತರರ ಮೇಲು ಯಾವುದೇ ರೀತಿ ದುಷ್ಪರಿಣಾಮ ಬೀರದಂತೆ ತಂಬಾಕು ಕೆಡುಕುಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಸೇವನೆಯ ಹಾನಿ ಬಗ್ಗೆ ಬ್ಯಾನರ್ ಅಳವಡಿಸಬೇಕು ಸಾರ್ವಜನಿಕರಲ್ಲಿ ತಂಬಾಕಿನ ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಕರಪತ್ರಗಳನ್ನು ವಿತರಿಸಬೇಕು ಶಾಲಾ ಕಾಲೇಜು ಆವರಣಗಳಲ್ಲಿ ೧೦೦ ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧಿಸಿರುವ ಕಾರಣ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ|| ಭರತ್ ಕುಮಾರ್ ಕೆ ಸಭೆಗೆ ಮಾಹಿತಿ ನೀಡಿ ತಂಬಾಕು ನಿಯಂತ್ರಣ ಕಾನೂನು ಕೋಟ್ವಾ ಕಾಯ್ದೆ ಅಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೧೫೮, ಕಡೂರು ೧೫೪, ತರೀಕೆರೆ ೧೫೦, ಮೂಡಿಗೆರೆ ೮೧, ಕೊಪ್ಪ ೩೮, ಶೃಂಗೇರಿ ೬೪ ಹಾಗೂ ಎನ್ ಆರ್ ಪುರ ೭೨ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೭೧೭ ಪ್ರಕರಣಗಳನ್ನು ದಾಖಲಿಸಿ ಒಟ್ಟು  ರೂ. ೮೬,೨೦೦/- ದಂಡ ವಿಧಿಸಲಾಗಿದೆ ಎಂದರು

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಫಲಕಗಳನ್ನು ಆಳವಡಿಸಲಾಗಿದೆಯಲ್ಲದೆ ಭಿತ್ತಿಪತ್ರಗಳ ಮೂಲಕ ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಆರ್.ಸಿ.ಎಚ್. ಡಾ. ಮಂಜುನಾಥ್ ಹೆಚ್ ಕೆ ಮಾತನಾಡಿ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೨೭೩೯, ಕಡೂರು ೫೫೮, ತರೀಕೆರೆ ೬೫೦, ಎನ್ ಆರ್ ಪುರ ೨೬೦, ಕೊಪ್ಪ ೩೬೩, ಶೃಂಗೇರಿ ೩೯೮ ಹಾಗೂ ಮೂಡಿಗೆರೆ ೪೬೭ ಜ್ವರದ ಲಕ್ಷಣಗಳು ಕಂಡು ಬಂದಿದ್ದು, ಒಟ್ಟು ೫,೪೩೫ ರೋಗಿಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ ಇವುಗಳಲ್ಲಿ ೬೬೩ ಡೆಂಗ್ಯೂ ಪ್ರಕರಣ ಎಂದು ದೃಢಪಟ್ಟಿದ್ದು ೬೪೮ ರೋಗಿಗಳು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ೧೫ ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ ಮುಂದೆ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಜಿಲ್ಲಾ ಸರ್ಜನ್ ಡಾ. ಮೋಹನ್ ಕುಮಾರ್, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಾ. ಬಾಲಕೃಷ್ಣ ಮುಂತಾದ ಅಧಿಕಾರಿಗಳು ಹಾಜರಿದ್ದರು.

Notice for action against ill effects of tobacco products

About Author

Leave a Reply

Your email address will not be published. Required fields are marked *

You may have missed