September 20, 2024

ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸಾ-ದಂತ ಪರೀಕ್ಷಾ ಶಿಬಿರಕ್ಕ

0
ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸಾ-ದಂತ ಪರೀಕ್ಷಾ ಶಿಬಿರ

ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸಾ-ದಂತ ಪರೀಕ್ಷಾ ಶಿಬಿರ

ಚಿಕ್ಕಮಗಳೂರು: ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಮುನ್ನ ಎಚ್ಚರಿಕೆ ವಹಿಸಬೇಕು. ಇಲ್ಲವಾದಲ್ಲಿ ಅನಾರೋಗ್ಯವು ಶಾಶ್ವತವಾಗಿ ದೇಹದಲ್ಲಿ ಬೇರೂರಲಿದೆ ಎಂದು ಜಿಲ್ಲಾ ಆಮ್ ಆದ್ಮಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದರು.

ತಾಲ್ಲೂಕಿನ ಲಕ್ಯಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇಚರ್ ಕನ್ಸರ್‌ವೇಷನ್ ಟ್ರಸ್ಟ್, ಎಎಪಿ ಸಂಯುಕ್ತಾಶ್ರಯದಲ್ಲಿ ಈಚೆಗೆ ಏರ್ಪಡಿಸಿ ದ್ಧ ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸಾ ಮತ್ತು ದಂತ ಪರೀಕ್ಷಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ರೋಗದ ಲಕ್ಷಣ ಕಾಣುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿ ಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದು ತಿಳಿಸಿದರು.

ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

ಲಕ್ಯಾ ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ರಾಜಶೇಖರ್ ಮಾತನಾಡಿ ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿ ಕೊಳ್ಳಬೇಕು. ಹಾಗಾಗಿ ಗ್ರಾಮೀಣ ಪ್ರದೇ ಶದ ಬಡಜನತೆಗೆ ಅನುಕೂಲವಾಗಲೆಂದು ಉಚಿತ ಆರೋಗ್ಯ ತಪಾ ಸಣಾ ಶಿಬಿರಗಳನ್ನು ಆಯೋಜಿಸಿ ಕಾಳ ಜಿ ವಹಿಸುತ್ತಿದೆ ಎಂದರು.

ಇದೇ ವೇಳೆ ಶಿಬಿರದಲ್ಲಿ ೬೫ಕ್ಕೂ ಹೆಚ್ಚು ಜನತೆ ಆಗಮಿಸಿ ಪ್ರಯೋಜನ ಪಡೆದುಕೊಂಡರು. ಈ ಪೈಕಿ ೫ ಮಂದಿಗೆ ಕಣ್ಣಿನ ಪೊರೆ ಹೆಚ್ಚಿದ್ಧ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಕಳುಹಿಸಲಾಗಿದೆ. ಬಳಿಕ ಎಎಪಿ ಪಕ್ಷದಿಂದ ಗ್ರಾಮದ ವೃತ್ತದಲ್ಲಿ ಭ್ರಷ್ಟಮುಕ್ತ ಸಮಾಜ ನಿರ್ಮಿಸುವ ದೃಷ್ಟಿಯಿಂದ ಬೀದಿನಾಟಕ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಲಕ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಹನೀಫ್, ಎಎಪಿ ಜಿಲ್ಲಾಧ್ಯಕ್ಷ ಲಿಂಗಾರಾಧ್ಯ, ಮುಖಂಡರುಗಳಾದ ರವಿಕುಮಾರ್, ವಿಲೀಯಂ ಪೆರೇರಾ, ಸ್ಥಳೀಯರಾದ ಚೆನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

Free eye check-up surgical-dental check-up camp

About Author

Leave a Reply

Your email address will not be published. Required fields are marked *