September 20, 2024

ಜಿಲ್ಲೆಯ ಕೆಗಳ ಒತ್ತುವರಿ ತೆರವುಗೊಳಿಸಲು ಸೂಚನೆ

0
ಜಿಲ್ಲಾ ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ 

ಜಿಲ್ಲಾ ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ 

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ  ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

ಕೆರೆಗಳ ಸರ್ವೆ ನಡೆಸಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಕ್ರಮವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಇನ್ನೂ ಒತ್ತುವರಿ ತೆರವುಗೊಳಿಸುವ ಕಾರ್ಯ ಜಿಲ್ಲೆಯಲ್ಲಿ ಪೂರ್ಣಗೊಂಡಿಲ್ಲ ಎಂದ ಅವರು. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ಹೇಳಿದ ಅವರು. ಕೆರೆಗಳ ಸುತ್ತ ಬಯೋ ಸ್ಪೆನ್ಸಿಂಗ್ ಮಾಡುವಂತೆ ತಿಳಿಸಿದರು.

ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಕಟ್ಟಡದ ಗುಣಮಟ್ಟ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ ಅವರು. ಕಟ್ಟಡಗಳ ದುರಸ್ತಿ ಕಾರ್ಯವಿದ್ದರೆ ತಕ್ಷಣ ದುರಸ್ತಿ ಪಡಿಸುವಂತೆ ಕ್ರಮವಹಿಸಬೇಕು. ಮಳೆ, ಗಾಳಿಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿರುವ ಕುರಿತು ದೂರುಗಳು ಬರುತ್ತಿದ್ದು, ತಕ್ಷಣ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಜುಲೈ ೧೫ ರಿಂದ ೩೧ ರವರೆಗೆ ಅತಿ ಹೆಚ್ಚು ಮಳೆ ಹಾಗೂ ಗಾಳಿಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈಗಾಗಲೇ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕೆಲಸವಾಗುತ್ತಿದೆ. ಏಪ್ರಿಲ್ ೦೧ ರಿಂದ ಇಲ್ಲಿಯವರೆಗೆ ೫ ಮಾನವ, ೫ ಜಾನುವಾರುಗಳ ಹಾನಿಯಾಗಿದೆ.

೪೩೧ ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಪರಿಹಾರವನ್ನು ನೀಡಲಾಗಿದೆ. ೨೭.೦೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದ ಅವರು ರೈತರಿಗೆ ಹವಾಮಾನಕ್ಕನುಗುಣವಾಗಿ ಬೆಳೆ ಬೆಳೆಯುವ ಕುರಿತು ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.

ಸಾರ್ವಜನಿಕರು ಆಸ್ತಿ ನೊಂದಣಿಯನ್ನು ಜಿಲ್ಲೆಯ ಯಾವುದೇ ಸಬ್‌ರಿಜಿಷ್ಟ್ರರ್ ಕಛೇರಿಯಲ್ಲಾದರೂ ನೊಂದಾಯಿಸಿಕೊಳ್ಳಬಹುದು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು. ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಕಾಂತರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Notice to clear the encroachment of Ks in the district

About Author

Leave a Reply

Your email address will not be published. Required fields are marked *