September 19, 2024

ಐವನ್ ಡಿಸೋಜ-ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ

0
ಐವನ್ ಡಿಸೋಜ-ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ

ಐವನ್ ಡಿಸೋಜ-ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ

ಚಿಕ್ಕಮಗಳೂರು: ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಮತ್ತು ದುರುದ್ದೇಶಪೂರಕ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಗರಾಧ್ಯಕ್ಷ ರಿಯಾಜ್ ಅಹಮದ್ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ ನೀಡಿದರು.

ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐವಾನ್ ಡಿಸೋಜ ಅವರು ಆ.೧೯ ರಂದು ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಮುಡಾ ಹಗರಣದ ಕುರಿತು ತನಿಖೆಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಈ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು.

ಗವರ್ನರ್ ಕೂಡಲೇ ಹಿಂದಕ್ಕೆ ಹೋಗಬೇಕು ಮತ್ತು ಆದೇಶವನ್ನು ಹಿಂಪಡೆಯಬೇಕು, ರಾಜ್ಯಪಾಲರ ಕಚೇರಿಗೆ ನುಗ್ಗುವುದಾಗಿ ಹೇಳಿಕೆ ನೀಡಿರುವ ಅವರನ್ನು ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಂಬಂಧಪಟ್ಟ ಠಾಣೆಯಲ್ಲಿ ಕೇಸು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರವಿರೋಧಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡುವ ದುರುದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ದೇಶವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕುಮ್ಮಕ್ಕು ನೀಡುವ ರೀತಿ ಪ್ರಚೋಧನಾತ್ಮಕ ಹೇಳಿಕೆಗಳನ್ನು ನೀಡಿರುವುದನ್ನು ಖಂಡಿಸಿದರು.

ಕೂಡಲೇ ಇವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಠಾಣೆಗೆ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚಾ ನಗರ ಉಪಾಧ್ಯಕ್ಷ ನದೀಮ್ ಖಾನ್, ನಗರ ಪ್ರಧಾನ ಕಾರ್ಯದರ್ಶಿ ಸೋಯಬ್, ಆನಂದ್, ವಸೀಮ್, sಸುಭಾನ್, ಡಿಂಪಲ್, ಮತ್ತಿತರರು ಭಾಗವಹಿಸಿದ್ದರು.

Appeal to police chief for legal action against Ivan D’Souza

About Author

Leave a Reply

Your email address will not be published. Required fields are marked *

You may have missed