September 16, 2024

ಬೀಕನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧ ಆಯ್ಕೆ

0
ಬೀಕನಹಳ್ಳಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧವಾಗಿ

ಬೀಕನಹಳ್ಳಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧವಾಗಿ

ಚಿಕ್ಕಮಗಳೂರು: ತಾಲ್ಲೂಕಿನ ಬೀಕನಹಳ್ಳಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಮಂಜುಳಾಶಿವಣ್ಣ ಅವಿರೋಧವಾಗಿ ಸೋಮವಾರ ಆಯ್ಕೆಯಾಗಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಸ್ಥಾನಕ್ಕೆ ಮಂಜುಳಾಶಿವಣ್ಣ ಹೊರತು ಪಡಿಸಿ ಬೇರ್‍ಯಾವ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್ ಮಾತನಾಡಿ ನಗರ ಸಮೀಪದಲ್ಲಿರುವ ಬೀಕನಹಳ್ಳಿ ಗ್ರಾ.ಪಂ. ಪ್ರಭಾವಶಾಲಿಯಾಗಿದೆ. ಇಂತಹ ಪಂಚಾಯಿತಿ ಅಧಿಕಾರ ವಹಿಸಿಕೊಂಡವರು ಚುರುಕಿನಿಂದ ಕೆಲಸ ಮಾಡಬೇಕು. ಅಧಿಕಾರ ಯಾರಿಗೂ ಶಾಶ್ವತವಲ್ಲ. ಹೆಜ್ಜೆ ಗುರುತು ಬಿಡುವ ರೀತಿಯಲ್ಲಿ ಕೆಲಸ ಮಾಡಿದರೆ ಗ್ರಾಮಸ್ಥರ ಮನಸ್ಸಿನಲ್ಲಿ ಶಾಶ್ವತವಾಗಿ ನೆರಯೂರಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ರಾಜೀವ್ ಹೆಚ್.ಪಿ ಮಾತನಾಡಿ, ಬೀಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳಿಗೆ ಮೀಸಲಿದ್ದರು ಪರಿಶಿಷ್ಟ ವರ್ಗಕ್ಕೆ ಸೇರಿದ ಮಂಜುಳಾಶಿವಣ್ಣ ರವರನ್ನು ಎಲ್ಲಾ ಗ್ರಾ.ಪಂ ಸದಸ್ಯರ ಬೆಂಬಲದಿಂದ ಅಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ ಎಂದರು.

ನೂತನ ಅಧ್ಯಕ್ಷರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಿ ಎಂಬುದು ನಮ್ಮೆಲ್ಲರ ಆಶಾಭಾವನೆ. ಕಳೆದ ಎರಡೂವರೆ ವರ್ಷಗಳ ಕಾಲ ಇದೇ ಪಂಚಾಯಿತಿಯಲ್ಲಿ ಮಂಜುಳಾ ಅವರು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅನುಭವ ಇದೆ ಎಂದು ಹೇಳಿದರು.

ಬೀಕನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕೆಲವು ಸಮಸ್ಯೆಗಳಿದ್ದು, ಅವುಗಳನ್ನು ಎಲ್ಲಾ ಸದಸ್ಯರ ಸಹಕಾರದಿಂದ ಪರಿಹರಿಸಲು ಆಗ್ರಹಿಸಿದ ಅವರು ಪಂಚಾಯತ್ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ನಿವೇಶನ ರಹಿತರಿಗೆ ನಿವೇಶನ, ಮನೆ ನೀಡಲು ಕಾನೂನು ತೊಡಕುಗಳಿದ್ದು, ಕೂಡಲೇ ನಿವೇಶನ, ಮನೆ ನೀಡುವ ಜೊತೆಗೆ ಅತಿವೃಷ್ಟಿಯಿಂದ ಹಾನಿಯಾದ ಸಂತ್ರಸ್ಥರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಕುಡಿಯುವ ನೀರು, ನೈರ್ಮಲ್ಯ, ಬೀದಿ ದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ನೂತನ ಅಧ್ಯಕ್ಷರು ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಲೀಲಾವತಿಪುಟ್ಟೇಗೌಡ, ಪುಟ್ಟೇಗೌಡ, ಗ್ರಾ.ಪಂ. ಸದಸ್ಯರುಗಳಾದ ಬಿ.ವಿ.ವಿಜಯಕುಮಾರ್, ಬಿ.ಎಂ.ಯೋಗೀಶ್, ಹೇಮಾವತಿ ಲೋಕೇಶ್, ಹೆಚ್.ಪಿ.ಮಂಜೇಗೌಡ, ಭಾಗೀರಥಿಜಯಣ್ಣ, ಭಾಗ್ಯಮ್ಮಹನುಮಂತಪ್ಪ, ಪಿಡಿಓ ಪ್ರದೀಪ್, ಬಿಜೆಪಿ ಮುಖಂಡರುಗಳಾದ ಬೀರೇಗೌಡ, ಕುಮಾರ್, ಮತ್ತಿತರರು ಹಾಜರಿದ್ದರು.

Manjulashivanna was elected unopposed to Beekanahalli Gram Panchayat

About Author

Leave a Reply

Your email address will not be published. Required fields are marked *