September 16, 2024

ವಿದ್ಯಾರ್ಥಿಗಳ ಯಶಸ್ಸಿಗೆ ಕ್ರೀಡಾಕೂಟಗಳು ಸಹಕಾರಿ

0
ಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

ಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸು ಗಳಿಸಬೇಕೆಂಬುದು ಕ್ರೀಡಾಕೂಟಗಳನ್ನು ಆಯೋಜಿಸುವ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಹೆಚ್.ಸಿ ಕರೆ ನೀಡಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಗ್ರಾ.ಪಂ ತಳಿಹಳ್ಳ, ಐದೂರು ಗ್ರಾಮಸ್ಥರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಳಿಹಳ್ಳ ಇವರ ಸಹಯೋಗದೊಂದಿಗೆ ವಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ೨೦೨೪-೨೫ ನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಮಕ್ಕಳು ಸೋಲಿನಿಂದ ದೃತಿಗೆಡದೆ ಸೋಲನ್ನು ಮೆಟ್ಟಿಲಾಗಿ ಮಾಡಿಕೊಂಡು ಗೆಲುವು ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.

ಹಲವು ಪ್ರಯತ್ನಗಳ ಮೂಲಕ ಎಲ್ಲಾ ಮಕ್ಕಳನ್ನು ಹಿಂದಿಕ್ಕಿ ಹೆಚ್ಚು ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ವಹಿಸುವ ವಿದ್ಯಾರ್ಥಿ ಹೆಚ್ಚು ಅಂಕ ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಹಲವಾರು ಪ್ರಯತ್ನಗಳನ್ನು ಕಠಿಣ ಪರಿಶ್ರಮಗಳ ಮೂಲಕ ಮಾಡಿದಾಗ ಮಾತ್ರ ಗುರಿ ತಲುಪುವ ಜೊತೆಗೆ ಯಶಸ್ಸನ್ನು ಕಾಣಲು ಸಾಧ್ಯ. ಇದರಿಂದ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಿದಾಗ ತಮ್ಮ ಭವಿಷ್ಯ ರೂಪಿಸಿಕೊಳ್ಳಬಹುದೆಂದು ತಿಳಿಸಿದರು

ಪಠ್ಯೇತರ ಚಟುವಟಿಕೆಗಳಲ್ಲಿ ಶಾಲಾ, ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಳ್ಳಬೇಕು. ಮಕ್ಕಳ ಪ್ರತಿಭೆಯನ್ನು ಹೊರಹಾಕಲು ದೈಹಿಕ ಶಿಕ್ಷಕರ ಪರಿಶ್ರಮ ಮತ್ತು ಕ್ರೀಡಾಕೂಟಗಳು ಸಹಕಾರಿಯಾಗಿದೆ ಎಂದರು.

ಕ್ರೀಡೆ, ಪ್ರತಿಭಾ ಕಾರಂಜಿ ಜೊತೆಗೆ ವಿಜ್ಞಾನ ರಸಪ್ರಶ್ನೆಗಳನ್ನು ಆಯೋಜಿಸುತ್ತಿದ್ದು, ಇವುಗಳ ಮೂಲಕ ಸೆಪ್ಟೆಂಬರ್, ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಪ್ರತಿಭೆಗಳನ್ನು ಹೊರತರುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಗ್ರಾ.ಪಂ, ಎಸ್‌ಡಿಎಂಸಿ, ಹಾಗೂ ದೈಹಿಕ ಶಿಕ್ಷಕರ ಸಹಕಾರದಿಂದ ಮಕ್ಕಳಿಗೆ ಸಮವಸ್ತ್ರದ ಮೂಲಕ ಶಿಸ್ತಿನಿಂದ ಭಾವಹಿಸಿರುವುದು ಕಾಣುತ್ತಿದೆ. ಶಾಲೆ, ಗ್ರಾಮಕ್ಕೆ, ತಾಲ್ಲೂಕಿಗೆ, ಜಿಲ್ಲೆಗೆ ಕ್ರೀಡೆಯಲ್ಲಿ ವಿಜೇತರಾಗುವ ಮೂಲಕ ಹೆಸರು ತನ್ನಿ ಎಂದು ಶುಭ ಹಾರೈಸಿದರು.

ತಳಿಹಳ್ಳ ಗ್ರಾ.ಪಂ ಅಧ್ಯಕ್ಷ ಸದಾಶಿವ ಮಾತನಾಡಿ, ಸರ್ಕಾರ ಬೇರೆ ಬೇರೆ ಯೋಜನೆ ಜಾರಿಗೆ ತರುವ ಬದಲು ಎಲ್ಲಾ ಸೌಲಭ್ಯದ ಜೊತೆಗೆ ಎಲ್‌ಕೆಜಿ ಯಿಂದ ದ್ವಿತೀಯ ಪಿಯುಸಿ ವರೆಗೆ ಅವಕಾಶ ನೀಡಿದರೆ ಫಲಪ್ರದವಾಗುತ್ತದೆ. ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದಾರೆ, ಗುಣಮಟ್ಟದ ಶಿಕ್ಷಣ ನೀಡಲು ವಿದ್ಯಾರ್ಥಿಗಳ ಕೊರತೆ ಕಾರಣ ಎಂದು ವಿಷಾಧಿಸಿದರು.

ಶಕ್ತಿ ಯೋಜನೆ ಮಾದರಿಯಲ್ಲಿ ಸರ್ಕಾರ ಗ್ರಾ.ಪಂ ಮಟ್ಟದಲ್ಲಿ ಎರಡು ಬಸ್‌ಗಳ ಸೌಲಭ್ಯ ನೀಡಿದರೆ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಪರಮೇಶ್ವರಪ್ಪ, ಎಸ್.ಡಿ.ಎಂಸಿ ಅಧ್ಯಕ್ಷ ಪೂರ್ಣೇಶ್, ತಳಿಹಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾಶಿವ, ಮಾಜಿ ಉಪಾಧ್ಯಕ್ಷ ಅರುಣ್‌ಕುಮಾರ್, ಗ್ರಾಪಂ ಸದಸ್ಯರಾದ ಚೇತನ್ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್, ಶಿಕ್ಷಣ ಸಂಯೋಜಕರಾದ ವೀರೇಶ್ ಕೌಲಗಿ, ಅರಸು, ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮಂಜುನಾಥ್, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ್‌ಕುಮಾರ್, ಕಾರ್ಯದರ್ಶಿ ಅಜಯ್, ದೈಹಿಕ ಶಿಕ್ಷಕರಾದ ಶಿವಪ್ಪ, ಸುಂದರೇಶ್, ಸುಶೀಲ, ಕುಮಾರ್, ಮುಖ್ಯ ಶಿಕ್ಷಕರಾದ ಬಸವಕುಮಾರ್, ಪ್ರೇಮಾ, ಚಂದ್ರಕಲಾ, ಬಸವರಾಜ್, ಕೌಶಲ್ಯ ಮತ್ತಿತರರು ಉಪಸ್ಥಿತರಿದ್ದರು.

Vastare Hobli Level Senior Primary Schools Sports

About Author

Leave a Reply

Your email address will not be published. Required fields are marked *