September 16, 2024

ಪ್ರಜಾಪ್ರಭುತ್ವ ದಿನವನ್ನು ಕಟ್ಟು ನಿಟ್ಟಾಗಿ ಆಚರಿಸುವಂತೆ ಮುಖ್ಯಮಂತ್ರಿ ಸೂಚನೆ

0
ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್

ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್

ಚಿಕ್ಕಮಗಳೂರು: ಸೆಪ್ಟೆಂಬರ್ ೧೫ ರಂದು ನಡೆಯಲ್ಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚರಣೆಯನ್ನು ಎಲ್ಲಾ ಜಿಲ್ಲೆಗಳಲ್ಲು ಕಟ್ಟು ನಿಟ್ಟಾಗಿ ಆಚರಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧೀಕಾರಿಗಳಿಗೆ ಸೂಚನೆ ನೀಡಿದರು.

ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮ ದೇಶದ ಸಾರ್ವಭೌಮತ್ವದ ಹಿರಿಮೆಯನ್ನು ಎತ್ತಿ ಹಿಡಿಯುವುದು ಆದ್ಯ ಕರ್ತವ್ಯ ಎಂದರು .

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಅವರು ಮಾತನಾಡಿ ಸೆಪ್ಟೆಂಬರ್ ೧೫ ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿಯನ್ನು ನಿರ್ಮಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ದಾರಿಯುದ್ದಕ್ಕೂ ಪಸರಿಸುವ ಕಾರ್ಯಕ್ರಮ ಇದಾಗಿದೆ.

ಜಿಲ್ಲೆಯಲ್ಲಿ ಗಡಿ ಭಾಗಗಳಾದ ಮಾಗಡಿ ಕೈ ಮರದಿಂದ ಎಂಸಿಹಳ್ಳಿ ವರೆಗೆ ೯೨ ಕಿ.ಮೀ. ಮಾನವ ಸರಿಪಡಿ ನಿರ್ಮಿಸಿ ಸಂವಿಧಾನದ ಬಗ್ಗೆ ಅರಿವು ಮೂಡಿಸಲಾಗುವುದು ಸುಮಾರು ೭೦ ರಿಂದ ೮೦ ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಎಂದ ಅವರು ಈಗಾಗಲೇ ತಾಲ್ಲೂಕು ಮಟ್ಟದ ಜಿಲ್ಲಾಧಿಕಾರಿಗಳು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ೯೨ ಕಿ.ಮೀ ಮಾನವ ಸರಪಳಿ ಹಾಗೂ ಸಂವಿಧಾನ ಬಗ್ಗೆ ತಿಳಿವಳಿಕೆ ಮೂಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಯಲಿದ್ದು, ಮಾಗಡಿ ಕೈಮರದಿಂದ ಎಐಟಿ ಸರ್ಕಲ್, ಸಖರಾಯಪಟ್ಟಣ, ಕಡೂರು-ಬೀರೂರು, ತರೀಕೆರೆ ಗಡಿ ಭಾಗವಾದ ಎಂಸಿ ಹಳ್ಳಿಯವರಿಗೂ ಈ ಕಾರ್ಯಕ್ರಮ ನಡೆಯಲಿದೆ ಎಂದರು

ಪ್ರತಿ ೧ ಕಿ.ಮೀ ದೂರದಲ್ಲಿ ಆ ಭಾಗದ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಸಂಘ ಸಂಸ್ಥೆ ಪದಾಧಿಕಾರಿಗಳು ವಿವಿಧ ಸಂಘಟನೆಗಳು, ವಿವಿಧ ಸಮುದಾಯದ ಪ್ರಮುಖರು ಮಠ ಮಾನ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸ್ಥಳೀಯ ಜನ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಆ ಭಾಗದ ಗ್ರಾಮಗಳ ಜನತೆ, ಗ್ರಾಮದ ಮುಖಂಡರು, ಸ್ತ್ರೀಶಕ್ತಿ, ವಿವಿಧ ಸಂಘಗಳ ಪದಾಧಿಕಾರಿಗಳು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವವನ್ನು ಸಾರುವ ಈ ಬೃಹತ್ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ.

ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತರಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕವಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸ್ವಯಂ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಿದ ಜಿಲ್ಲಾಧಿಕಾರಿಗಳು ಪ್ರತಿಯೊಂದು ಕಿ.ಮೀ. ಗೂ ಸರ್ಕಾರಿ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ವಹಿಸಲಾಗಿದ್ದು, ಆಯಾಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲ್ಲೂಕು ಅಧಿಕಾರಿಗಳಿಗೆ ನಿಗಾ ವಹಿಸಲು ವಿವಿಧ ಕಾರ್ಯಕ್ರಮಗಳ ಉಸ್ತುವರಿ ವಹಿಸಲಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿರುವಾಗ ಸ್ವತಂತ್ರ್ಯದ ಮಹತ್ವ ತಿಳಿದುಕೊಳ್ಳುವುದು ಬಹಳ ಮುಖ್ಯ ನಮ್ಮ ಸಂವಿಧಾನವು ಭಾರತೀಯರ ಹೆಮ್ಮೆ ಈ ಕಾರ್ಯಕ್ರಮದಲ್ಲಿ ಹಾಗೂ ದಾರಿ ಯುದ್ದಕ್ಕೂ ಆಯಾಯ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುವತ್ತಾ ಸ್ಥಳೀಯ ಗ್ರಾಮಸ್ಥರು ಹಸಿರು ತೋರಣಗಳಿಂದ ಸಿಂಗರಿಸಿ ತಮ್ಮ ತಮ್ಮ ಊರುಗಳಿಗೆ ಸ್ವಾಗತಿಸುವ ಮತ್ತು ಬಿಳ್ಕೊಡಿಗೆಯನ್ನು ಬಹಳ ವಿಜೃಂಭಣೆಯಿಂದ ನೇರವೇರಿಸಲು ಎಲ್ಲ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳ ಸರ್ಕಾರಿ ಖಾಸಗಿ ನೌಕರ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸ್ವಯಂ ಪ್ರೇರಿತವಾಗಿ ಸಾರ್ವಜನಿಕರು ಭಾಗವಹಿಸಿ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಹಬ್ಬವಾಗಿ ಆಚರಿಸಲು ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೆಂದ್ರ ಕುಮಾರ್ ದಹಿಮ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೀಶ್, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರುಗಳು, ಧಾರ್ಮಿಕ, ಸಾಂಸ್ಕೃತಿಕ ಮುಖಂಡರುಗಳು ಹಾಗೂ ಜಿಲ್ಲೆಯ ವಿವಿಧ ಜಿಲ್ಲೆ-ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಿದರು.

Chief Minister instructs to strictly observe Democracy Day

About Author

Leave a Reply

Your email address will not be published. Required fields are marked *