September 19, 2024

ರಾಹುಲ್ ಗಾಂಧಿ ಸಂಸತ್ ಸದಸ್ಯ ಸ್ಥಾನ ಅನರ್ಹಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0
ರಾಹುಲ್ ಗಾಂಧಿ ಸಂಸತ್ ಸದಸ್ಯ ಸ್ಥಾನ ಅನರ್ಹಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ರಾಹುಲ್ ಗಾಂಧಿ ಸಂಸತ್ ಸದಸ್ಯ ಸ್ಥಾನ ಅನರ್ಹಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು:  ಅಮೇರಿಕಾದಲ್ಲಿ ಭಾರತ ದೇಶದ ಘನತೆಗೆ ಧಕ್ಕೆ ತರುವಂತೆ ಮತ್ತು ಮೀಸಲಾತಿ ರದ್ದತಿ ಹೇಳಿಕೆ ನೀಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಯವರ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ನಗರ ಮಂಡಲದ ಮುಖಂಡರು ಇಂದು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದ ಕಾಲೇಜೊಂದರಲ್ಲಿ ಸಂವಾದ ನಡೆಸಿದ್ದ ಸಂದರ್ಭದಲ್ಲಿ ದೇಶದ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಚುನಾವಣೆ ವ್ಯವಸ್ಥೆ ಸರಿಯಿಲ್ಲ, ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಹೇಳುವ ಮೂಲಕ ಹಾಗೂ ಮೀಸಲಾತಿ ರದ್ದುಗೊಳಿಸುವ ಬಗ್ಗೆಯೂ ಹೇಳಿಕೆ ನೀಡಿರುವುದನ್ನು ಬಿಜೆಪಿ ಮನವಿಯಲ್ಲಿ ಖಂಡಿಸಿದೆ.

ಕಳೆದ ೭೦ ವರ್ಷಗಳಿಂದ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಆರಂಭದಿಂದಲೂ ಪ.ಜಾ, ಪ.ಪಂ ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದೆ. ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗಾಗಿ ಸಮಗ್ರ ನೀತಿ ಕಾರ್ಯಕ್ರಮ ರೂಪಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಇದರ ಪರಿಣಾಮವಾಗಿ ಇಂದೂ ಕೂಡ ಈ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮುಂದುವರೆಯಲು ಸಾಧ್ಯವಾಗಿಲ್ಲ. ಈ ಸಮುದಾಯವನ್ನು ಕೇವಲ ಮತ ಬ್ಯಾಂಕನ್ನಾಗಿ ಬಳಸಿಕೊಂಡಿದೆ ಎಂಬುದು ರಾಹುಲ್ ಗಾಂಧಿಯವರ ಈ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.

ಮೀಸಲಾತಿ ಎಂಬುದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರ ಜನ್ಮಸಿದ್ದ ಹಕ್ಕಾಗಿದ್ದು, ಈ ಮೂಲಕ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಕೆಲಸ ನಡೆಯಬೇಕು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಮೀಸಲಾತಿ ವಿರುದ್ಧ ಅಮೇರಿಕದಲ್ಲಿ ಮಾತನಾಡುವ ಮೂಲಕ ಆ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಮೀಸಲಾತಿ ಎಂಬುದು ಕಾಂಗ್ರೆಸ್ ನೀಡುವ ಬಿಕ್ಷೆಯಲ್ಲ, ದೇಶದಲ್ಲಿ ಮೀಸಲಾತಿ ಎಂಬುದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನ್ಮಸಿದ್ದ ಹಕ್ಕಾಗಿದ್ದು, ಇದರ ವಿರುದ್ಧ ಹೇಳಿಕೆ ನೀಡಿ ದೇಶದ ಘನತೆಗೆ, ಗೌರವಕ್ಕೆ ಧಕ್ಕೆ ತಂದಿರುವ ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನೀಡುತ್ತಿರುವ ಈ ಮನವಿಯನ್ನು ಘನವೆತ್ತ ರಾಷ್ಟ್ರಪತಿಯವರಿಗೆ ಕಳುಹಿಸುವಂತೆ ವಿನಂತಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್ ಪುಷ್ಪರಾಜು, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್, ಜಿಲ್ಲಾ ಬಿಜೆಪಿ ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ಮುಖಂಡರಾದ ಬಿ.ರಾಜಪ್ಪ, ಸೀತಾರಾಮ್‌ಭರಣ್ಯ, ಕೌಶಿಕ್, ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್, ಸದಸ್ಯರುಗಳಾದ ರೂಪ ಕುಮಾರ್, ರಾಜು, ಕುಮಾರ್, ದಿನೇಶ್ ಕೋಟೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಜೆಸೆಂತ ಅನೀಲ್ ಕುಮಾರ್ ಮತ್ತಿತರರು ವಹಿಸಿದ್ದರು.

BJP protests demanding disqualification of Rahul Gandhi as member of Parliament

About Author

Leave a Reply

Your email address will not be published. Required fields are marked *

You may have missed