September 19, 2024

ಈದ್‌ ಮಿಲಾದ್‌ ಹಿನ್ನಲೆಯಲ್ಲಿ ನಗರದಲ್ಲಿ ಬೃಹತ್ ಮೆರವಣಿಗೆ

0
ಈದ್‌ ಮಿಲಾದ್‌ ಹಿನ್ನಲೆಯಲ್ಲಿ ನಗರದಲ್ಲಿ ಮೆರವಣಿಗೆ

ಈದ್‌ ಮಿಲಾದ್‌ ಹಿನ್ನಲೆಯಲ್ಲಿ ನಗರದಲ್ಲಿ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್‌ ಅವರ ಜನ್ಮ ದಿನಾಚರಣೆಯನ್ನು ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಕಾಫಿ ನಾಡಿನಲ್ಲಿ ಸೋಮವಾರ ಅದ್ದೂರಿಯಾಗಿ ಆಚರಿಸಿದರು.
ಈದ್‌ ಮಿಲಾದ್‌ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಷರಿಫ್ ಗಲ್ಲಿ, ಗೌರಿ ಕಾಲುವೆ, ಉಪ್ಪಳ್ಳಿ ಬಡಾವಣೆಯಲ್ಲಿ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಮೆರವಣಿಗೆ ಸಾಗುವ ಎಂ.ಜಿ. ರಸ್ತೆ, ಐ.ಜಿ. ರಸ್ತೆಗಳಲ್ಲಿ ಹಸಿರು ಬಟ್ಟಿಂಗ್ಸ್‌, ಬ್ಯಾನರ್‌ಗಳಿಂದ ರಾರಾಜಿಸುತ್ತಿದ್ದವು.
ಸೋಮವಾರ ಬೆಳಿಗ್ಗೆ ಉಪ್ಪಳ್ಳಿಯ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಇದೇ ವೇಳೆಯಲ್ಲಿ ಯುವಕರು, ಬೈಕ್‌ ಹಾಗೂ ಕಾರುಗಳಲ್ಲಿ ಹಸಿರು ಧ್ವಜದೊಂದಿಗೆ ಪ್ರಮುಖ ರಸ್ತೆಗಳಲ್ಲಿ ಗುಂಪು ಗುಂಪಾಗಿ ಸಾಗುತ್ತಿದ್ದರು. ಎಲ್ಲೆಡೆ ಹಬ್ಬದ ಸಡಗರ ಕಂಡು ಬಂದಿತು.
ಉಪ್ಪಳ್ಳಿ ಸೇರಿದಂತೆ ನಗರದ ವಿವಿಧ ಬಡಾವಣೆಗಳಿಂದ ಹಾಗೂ ಆಲ್ದೂರಿನಿಂದ ಇಲ್ಲಿನ ಅಂಡೇಛತ್ರಕ್ಕೆ ಆಗಮಿಸಿದ ಮುಸ್ಲಿಂ ಬಾಂಧವರು ಮಧ್ಯಾಹ್ನದ ವೇಳೆಗೆ ಮೆರವಣಿಗೆಯಲ್ಲಿ ಸಾಗಿದರು. ಸಾವಿರಾರು ಸಂಖ್ಯೆಯಲ್ಲಿದ್ದ ಸಮುದಾಯದವರು ಇಲ್ಲಿನ ಎಂ.ಜಿ. ರಸ್ತೆಯಿಂದ ಅಂಚೆ ಕಚೇರಿ ರಸ್ತೆ ಮೂಲಕ ತೊಗರಿಹಂಕಲ್‌ ವೃತ್ತಕ್ಕೆ ತೆರಳಿ ಅಲ್ಲಿಂದ ಐ.ಜಿ. ರಸ್ತೆಯ ಮೂಲಕ ಕೆ.ಎಂ. ರಸ್ತೆಯ ಮೂಲಕ ಹನುಮಂತಪ್ಪ ವೃತ್ತಕ್ಕೆ ತಲುಪಿದರು. ಬಳಿಕ ಎಂ.ಜಿ. ರಸ್ತೆಯಲ್ಲಿ ಸಾಗಿ ಅಂಡೇಛತ್ರ ತಲುಪಿದರು.
ವೈಭವದಿಂದ ನಡೆದ ಈ ಮೆರವಣಿಗೆ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ರಸ್ತೆಯ ಉದ್ದಕ್ಕೂ ನಿಂತಿದ್ದರು. ಮುಸ್ಲಿಂ ಸಮುದಾಯ ಮಹಿಳೆಯರು ಸೇರಿದಂತೆ ಬೇರೆ ಸಮುದಾಯದವರು ಈ ವೈಭವವನ್ನು ನೋಡಿದರು. ಮೆರವಣಿಗೆ ಶಾಂತಿಯುತವಾಗಿ ನಡೆಯಿತು.
ಮೆರವಣಿಗೆ ಸಾಗುವ ಮಾರ್ಗದಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿತ್ತು. ಹಾಗಾಗಿ ಬೆಳಿಗ್ಗೆಯಿಂದಲೇ ಎಂ.ಜಿ. ರಸ್ತೆಯಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು, ಈ ರಸ್ತೆ ಬಿಕೋ ಎನ್ನುತ್ತಿತ್ತು. ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ರಸ್ತೆಯಲ್ಲಿ ಸಂಚಾರಿಸಲು ಅನುವು ಮಾಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.‌
A huge procession in the city on the backdrop of Eid Milad

About Author

Leave a Reply

Your email address will not be published. Required fields are marked *

You may have missed